ಪ್ರಧಾನಿ ನರೇಂದ್ರ ಮೋದಿಯನ್ನು ಭಾರತದ ಶ್ರೇಷ್ಠ ಪುತ್ರ ಎಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
H.D. Kumaraswamy: ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರಮೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಧನ್ಯವಾದ ಅರ್ಪಿಸಿದರು. ಮೋದಿ ಅವರ ನಾಯಕತ್ವದ ಮೇಲೆ ದೇಸ ನಂಬಿಕೆ ಇಟ್ಟಿದೆ ಎಂದು ಬಣ್ಣಿಸಿದರು.
ಮಂಡ್ಯದ ಆದಿ ಚುಂಚನಗಿರಿ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗಣ್ಯರು -
ಮಂಡ್ಯ, ಏ. 15: ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರಮೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಬುಧವಾರ (ಏಪ್ರಿಲ್ 15) ಉದ್ಘಾಟಿಸಿ ಬಳಿಕ ನಡೆದ ಸಾರ್ವಜನಿಕ ಸಭೆಯನ್ನು ಉದ್ಧೇಶಿಸಿ ಮಾತನಾಡಿದರು. ಈ ವೇಳೆ ಉಪಸ್ಥಿತರಿದ್ದ ಕೇಂದ್ರ ಸಚಿವ, ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ (H.D. Kumaraswamy) ಮೋದಿ ಅವರನ್ನು ಭಾರತದ ಹೆಮ್ಮೆಯ ಪುತ್ರ ಎಂದು ಬಣ್ಣಿಸಿದರು. ʼʼಅವರ ದೂರದೃಷ್ಟಿಯ ನಾಯಕತ್ವ, ಅಚಲ ಬದ್ಧತೆ ಮತ್ತು ದಣಿವರಿಯದ ಸಮರ್ಪಣೆ ರಾಷ್ಟ್ರದಾದ್ಯಂತ ಲಕ್ಷಾಂತರ ಜನರ ಆಳವಾದ ನಂಬಿಕೆ ಮತ್ತು ಪ್ರೀತಿಯನ್ನು ಗಳಿಸಿದೆʼʼ ಎಂದರು.
ʼʼಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಮಾರ್ಗದರ್ಶನದಲ್ಲಿ ಹಾಗೂ ಸೇವೆ, ಶಿಕ್ಷಣ, ಕರುಣೆಯ ಮೂಲಕ ಸಮಾಜವನ್ನು ಪರಿವರ್ತಿಸಿದ ಅತ್ಯುನ್ನತ ಅಧ್ಯಾತ್ಮಿಕ ಶಕ್ತಿಯಾದ ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಹಾಕಿಕೊಟ್ಟ ಅನನ್ಯ ಪರಂಪರೆಗೆ ಮೀಸಲಾಗಿರುವ ಈ ಐತಿಹಾಸಿಕ ಸಮಾರಂಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೊಂದಿಗೆ ನಾನು ಸಹ ಭಾಗಿಯಾಗಿದ್ದು ದಿವ್ಯಾನುಭೂತಿ ನೀಡಿದೆʼʼ ಎಂದು ಎಚ್‌ಡಿಕೆ ತಿಳಿಸಿದರು. ಜತೆಗೆ ಬಾಲಗಂಗಾಧರನಾಥ ಸ್ವಾಮೀಜಿ ಅವರ ಪರಂಪರೆ ಮುಂದಿನ ತಲೆಮಾರಿಗೆ ದಾರಿದೀಪವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಎಚ್.ಡಿ. ಕುಮಾರಸ್ವಾಮಿ ಅವರ ಎಕ್ಸ್ ಪೋಸ್ಟ್:
ಜೈ ಶ್ರೀ ಗುರುದೇವ್ 🙏
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) April 15, 2026
ಶ್ರೀ ಕ್ಷೇತ್ರ ಆದಿಚುಂಚನಗಿರಿಯಲ್ಲಿ ಈ ಪವಿತ್ರ ಸಂದರ್ಭದಲ್ಲಿ ಭಾರತದ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ @narendramodi ಅವರಿಗೆ ನಾನು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಅವರ ದೂರದೃಷ್ಟಿಯ ನಾಯಕತ್ವ, ಅಚಲ ಬದ್ಧತೆ ಮತ್ತು ದಣಿವರಿಯದ ಸಮರ್ಪಣೆ ನಾಯಕತ್ವ ರಾಷ್ಟ್ರದಾದ್ಯಂತ ಲಕ್ಷಾಂತರ ಜನರ ಆಳವಾದ… pic.twitter.com/zd4maXc51s
''ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸ್ಫೂರ್ತಿದಾಯಕ ನಾಯಕತ್ವದಲ್ಲಿ ರಾಷ್ಟ್ರವು ಶಕ್ತಿ, ಪ್ರಗತಿ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಹೊಸಯುಗಕ್ಕೆ ಸಾಕ್ಷಿಯಾಗುತ್ತಿದೆ. ಆಧ್ಯಾತ್ಮಿಕತೆ ಮತ್ತು ಅಭಿವೃದ್ಧಿ ಪರಸ್ಪರ ಪೂರಕವಾಗಿದ್ದು, ಸೇವೆ ಮತ್ತು ಏಕತೆಯ ಮೌಲ್ಯಗಳನ್ನು ಚೈತನ್ಯಶೀಲತೆಯಿಂದ ಬಲಪಡಿಸಲಾಗುತ್ತಿದೆ. ಈ ಕ್ಷಣವು ಶ್ರೀಗಳ ಆದರ್ಶಗಳಿಂದ ಮಾರ್ಗದರ್ಶಿಸಲ್ಪಟ್ಟ ಮತ್ತು ರಾಷ್ಟ್ರದ ಚುಕ್ಕಾಣಿ ಹಿಡಿದಿರುವ ಕ್ರಿಯಾಶೀಲ, ಬಲಿಷ್ಠ ನಾಯಕತ್ವದಿಂದ ವಿಕಸಿತ ಭಾರತ ನಿರ್ಮಾಣಕ್ಕೆ ನಾವೆಲ್ಲರೂ ಸಂಕಲ್ಪ ತೊಟ್ಟಿದ್ದೇವೆ'' ಎಂದರು.
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಪ್ರಧಾನಿ ಮೋದಿಯವರಿಂದ ಉದ್ಘಾಟನೆ
ದಿವ್ಯ ಕ್ಷಣಕ್ಕೆ ಸಾಕ್ಷಿ
ಇದೇ ವೇಳೆ ಭೈರವೈಕ್ಯ ಮಂದಿರದ ಉದ್ಘಾಟನೆಯಲ್ಲಿ ಭಾಗವಾಗಿದ್ದಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ʼʼಶ್ರೀ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿ ಅವರ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿದ ದಿವ್ಯ ಕ್ಷಣಕ್ಕೆ ಸಾಕ್ಷಿ ಆಗುವ ಭಾಗ್ಯ ನನ್ನದಾಯಿತು. ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ದಿವ್ಯಸಾನ್ನಿಧ್ಯ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ತಂದೆ ದೇವೇಗೌಡ ಅವರೊಂದಿಗೆ ಭಾಗಿಯಾಗಿದ್ದು ನನ್ನ ಪೂರ್ವಜನ್ಮದ ಸುಕೃತ ಎಂದೇ ಭಾವಿಸಿದ್ದೇನೆ. ಇಂತಹ ಪುಣ್ಯ ಕಾರ್ಯಕ್ರಮಕ್ಕೆ ಆಗಮಿಸಿ ಲೋಕಾರ್ಪಣೆ ನಡೆಸಿಕೊಟ್ಟ ಮೋದಿ ಅವರಿಗೆ ಧನ್ಯವಾದಗಳುʼʼ ಎಂದು ತಿಳಿಸಿದರು.
ವಿಕಸಿತ ಭಾರತಕ್ಕೆ ಪ್ರಧಾನಿ ಮೋದಿ 9 ಸೂತ್ರ; ರಾಗಿ ಮುದ್ದೆ, ಕಾವೇರಿ ನೀರು ನೆನೆದ ಪಿಎಂ
ಭೈರಮೈಕ್ಯ ಮಂದಿರದ ವಿಶೇಷತೆ
ಆದಿಚುಂಚನಗಿರಿ ಮಠದ ಶ್ರೀಗುರು ಭೈರವೈಕ್ಯ ಮಂದಿರ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮಿ ಅವರ ಸಮಾಧಿ ಸ್ಥಳ. ಇದನ್ನು ಸಂಪೂರ್ಣವಾಗಿ ಕಲ್ಲಿನಿಂದ ನಿರ್ಮಿಸಲಾಗಿದ್ದು, ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯನ್ನು ಕಾಣಬಹುದು. ಮಂದಿರದ ಗರ್ಭಗುಡಿಯಲ್ಲಿ ಪೂಜ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರ ಅಮೃತಶಿಲೆಯ ಭವ್ಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗಿದೆ.
ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.