ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Cauvery River Tragedy: ಫೋಟೊ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಜಲಸಮಾಧಿ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಬುಧವಾರ ಸಂಜೆ ದುರ್ಘಟನೆ ನಡೆದಿದೆ. ಕಾವೇರಿ ನದಿಯಲ್ಲಿ ಇಳಿದು ಫೋಟೋಗೆ ಪೋಸ್ ನೀಡುತ್ತಿದ್ದ ವೇಳೆ ನೀರಿನ ಸೆಳೆತ ಹೆಚ್ಚಾಗಿ, ಒಬ್ಬರ ರಕ್ಷಣೆಗೆ ಮತ್ತೊಬ್ಬರು ಮುಂದಾದ ಪರಿಣಾಮ ಐವರು ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ.

ಫೋಟೊ ತೆಗೆಸಿಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ ಮುಳುಗಿ ಐವರ ಸಾವು

-

Prabhakara R
Prabhakara R Jun 24, 2026 9:18 PM

ಮಂಡ್ಯ: ಫೋಟೊ ತೆಗೆಸಿಕೊಳ್ಳಲು ಹೋಗಿ ಒಂದೇ ಕುಟುಂಬದ ಐವರು ಕಾವೇರಿಯಲ್ಲಿ ನದಿಯಲ್ಲಿ ಜಲಸಮಾಧಿಯಾಗಿರುವ ಘಟನೆ (Cauvery River Tragedy) ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಚನ್ನಪಟ್ಟಣ ಮೂಲದ ಚೈತ್ರ (20), ಶ್ವೇತಾ (38), ವಿಜಯಮ್ಮ (50), ಪ್ರಿಯಾಂಕಾ (28), ಮಹೇಶ್ ಮೃತಪಟ್ಟವರು.

ಮುತ್ತತ್ತಿಯ ಮುತ್ತೆತ್ತರಾಯ ದೇವಸ್ಥಾನಕ್ಕೆ ಕುಟುಂಬಸ್ಥರು ಬಂದಿದ್ದರು. ಈ ವೇಳೆ ಕಾವೇರಿ ನದಿಗಿಳಿದು ಪೋಟೊ ತೆಗೆದುಕೊಳ್ಳುವಾಗ ದುರ್ಘಟನೆ ನಡೆದಿದೆ. ಸದ್ಯ ಐವರ ಮೃತದೇಹವನ್ನು ಹೊರತೆಗೆದಿರುವ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ಹೊರತೆಗೆದಿದ್ದಾರೆ. ಹಲಗೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಾಜಿ ಯೋಧ

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ 85 ವರ್ಷದ ವೃದ್ಧ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆಯೊಂದು ನಗರದ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ ಶಿವಾನಂದನ್ ಪ್ರಸಾದ್ (85) ಹಾಗೂ ಅವರ ಪತ್ನಿ ಸುಮಿತ್ರಾ ದೇವಿ (77) ಎಂದು ಗುರುತಿಸಲಾಗಿದೆ.

ಸುಮಿತ್ರಾ ದೇವಿ ಕಣ್ಣು ಮತ್ತು ಕಿವಿ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದರು. ಶಿವಾನಂದನ್ ಪ್ರಸಾದ್ ಅವರಿಗೆ ಹೃದಯ ಸಂಬಂಧಿ ಕಾಯಿಲೆಗಳಿದ್ದವು ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ದಂಪತಿ ಬೆಂಗಳೂರಿನಲ್ಲಿರುವ ತಮ್ಮ ಪುತ್ರ ಕಿರಣ್ ಕುಮಾರ್ ಕಶ್ಯಪ್ ಅವರ ಮನೆಗೆ ಬಂದಿದ್ದರು. ಇಬ್ಬರೂ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಕ್ಕಳಿಗೆ ತಾವು ಹೊರೆಯಾಗಬಾರದು ಎಂಬ ಮನೋಭಾವದಿಂದ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಶಿವಾನಂದನ್ ಪ್ರಸಾದ್ ಅವರು ದಿಂಬಿನ ಸಹಾಯದಿಂದ ಪತ್ನಿಯ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದು, ಬಳಿಕ ಲುಂಗಿಯೊಂದನ್ನು ಬಳಸಿ ಕಿಟಕಿಯ ಗ್ರಿಲ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಳಗ್ಗೆ ಪುತ್ರ ಕಿರಣ್ ಕುಮಾರ್ ಕಶ್ಯಪ್ ಅವರು ಪೋಷಕರನ್ನು ಎಬ್ಬಿಸಲು ಪ್ರಯತ್ನಿಸಿದಾಗ ಯಾವುದೇ ಪ್ರತಿಕ್ರಿಯೆ ಸಿಕ್ಕಿಲ್ಲ. ಬಳಿಕ ಸುತ್ತಿಗೆಯಿಂದ ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ ಇಬ್ಬರೂ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮಾಜಿ ಯೋಧರಾಗಿರುವ ಕಶ್ಯಪ್ ಪ್ರಸ್ತುತ ಖಾಸಗಿ ಭದ್ರತಾ ಸಂಸ್ಥೆಯಲ್ಲಿ ಹಿರಿಯ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪತ್ನಿ ಮತ್ತು ಪುತ್ರ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕಾಗಿ ಊರಿಗೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದೆ.

''ಪ್ರತಿ ಸಲವೂ ಸರ್ಕಾರವನ್ನು ದೂರಬೇಡಿʼʼ: ರೀಲ್ಸ್ ಹುಚ್ಚಿಗೆ ಪ್ರಾಣವನ್ನೇ ಪಣಕ್ಕಿಟ್ಟು ಝೇಲಂ ನದಿಯಲ್ಲಿ ಫಾರ್ಚುನರ್ ಕಾರ್ ಓಡಿಸಿದ ಪ್ರವಾಸಿಗ

ಸೋಮವಾರ ರಾತ್ರಿ ಸುಮಾರು 9 ಗಂಟೆಗೆ ಕಶ್ಯಪ್ ತಮ್ಮ ಪೋಷಕರಿಗೆ ಊಟ ನೀಡಿದ್ದರು. ಮರುದಿನ ಬೆಳಗ್ಗೆ ಇಬ್ಬರೂ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಸಂಪಿಗೆಹಳ್ಳಿ ಪೊಲೀಸರು ಕೊಲೆ ಹಾಗೂ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ದಂಪತಿಯ ಸಾವಿಗೆ ಇತರೆ ಯಾವುದೇ ಕಾರಣಗಳಿವೆಯೇ ಎಂಬುದನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.