ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ: ಹಾಲಿನ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಸಾವು
ಗಣೇಶ ಚತುರ್ಥಿಗೆ ಊರಿಗೆ ಬಂದಿದ್ದ ಬಂದಿದ್ದ ಮೂವರು ವಾಪಸ್ ಬೆಂಗಳೂರಿಗೆ ಹೊರಡುವಾಗ ತಾವು ಚಲಿಸುತ್ತಿದ್ದ ಸ್ಕೂಟರ್‌ಗೆ ಕೊಪ್ಪ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಎಂದು ಗುರುತಿಸಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಗಣೇಶ ಚತುರ್ಥಿಗೆ ಊರಿಗೆ ಬಂದಿದ್ದ ಬಂದಿದ್ದ ಮೂವರು ವಾಪಸ್ ಬೆಂಗಳೂರಿಗೆ ಹೊರಡುವಾಗ ತಾವು ಚಲಿಸುತ್ತಿದ್ದ ಸ್ಕೂಟರ್‌ಗೆ ಕೊಪ್ಪ ಗ್ರಾಮದ ಬಳಿ ಹಾಲಿನ ಟ್ಯಾಂಕರ್ ಡಿಕ್ಕಿಯಾದ ಪರಿಣಾಮ (Road Accident) ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಕಾವ್ಯ, ಮುತ್ತುರಾಜ್ ಮತ್ತು ಕೀರ್ತನಾ ಎಂದು ಗುರುತಿಸಲಾಗಿದೆ. ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ಬಂದಿದ್ದರು.
ಹಬ್ಬ ಮುಗಿಸಿ ಮರಳಿ ಬೆಂಗಳೂರಿಗೆ ಹೊರಟಿದ್ದಾಗ ಇಂದು ಮುಂಜಾನೆ ಅವರು ಪ್ರಯಾಣಿಸುತ್ತಿದ್ದ ಸ್ಕೂಟರ್‌ಗೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ಗ್ರಾಮದ ಬಳಿ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಟ್ಯಾಂಕರ್ ಚಕ್ರಗಳು ಇವರ ಮೇಲೆಯೇ ಹರಿದಿದ್ದರಿಂದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಬೈಕ್ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಸ್ಥಳೀಯ ವಿನಯ್ ಜೋಗೆನ್ನವರ ಹಾಗೂ ಆಕಾಶ ಜಾಧವ ಎಂದು ಗುರುತಿಸಲಾಗಿದೆ. ಮತ್ತೋರ್ವ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಸಾರಿಗೆ ಬಸ್ ಬಸವಕಲ್ಯಾಣದಿಂದ ಹುಬ್ಬಳ್ಳಿ ಕಡಗೆ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ದ್ವಿಚಕ್ರ ವಾಹನ ಬಸ್ ಗೆ ಡಿಕ್ಕಿ ಹೊಡೆದು ಕೆಳಗೆ ನುಗ್ಗಿದೆ. ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.