ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Drowned: ಇನ್ಫೋಸಿಸ್‌ ಉದ್ಯೋಗಿ ಕಾವೇರಿ ನದಿಯಲ್ಲಿ ಮುಳುಗಿ ಸಾವು

ಬೆಂಗಳೂರಿನಲ್ಲಿ ಇನ್ಫೋಸಿಸ್ ಉದ್ಯೋಗಿಯಾಗಿದ್ದ ವಿಘ್ನೇಶ್, ಮೂವರು ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಶ್ರೀರಂಗಪಟ್ಟಣದ ಎಡಮುರಿಯಲ್ಲಿನ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದರು. ನದಿಯಲ್ಲಿನ ಆಳವಾದ ಜಾಗವನ್ನು ಅರಿಯದೆ ಅವರು ಮುಳುಗಿದ್ದಾರೆ. ನೀರಿನಲ್ಲಿ ಮುಳುಗಿದ ಅವರನ್ನು ರಕ್ಷಣೆ ಮಾಡಲು ಸ್ನೇಹಿತರಿಗೆ ಸಾಧ್ಯವಾಗಿಲ್ಲ.

ಇನ್ಫೋಸಿಸ್‌ ಉದ್ಯೋಗಿ ಕಾವೇರಿ ನದಿಯಲ್ಲಿ ಮುಳುಗಿ ಸಾವು

ಮೃತ ವಿಘ್ನೇಶ್ -

ಹರೀಶ್‌ ಕೇರ
ಹರೀಶ್‌ ಕೇರ Apr 2, 2026 4:15 PM

ಮಂಡ್ಯ:, ಏ.2: ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ (Infosys) ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ (Cauvery River) ಈಜಲು ಹೋಗಿ ಮುಳುಗಿ (Drowned) ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬಲಮುರಿಯಲ್ಲಿ ನಡೆದಿದೆ. ಮೃತರನ್ನು ಬೆಂಗಳೂರಿನ (Bengaluru) ರಾಜಮೂರ್ತಿ ನಗರದ ವಿಘ್ನೇಶ್ (27) ಎಂದು ಗುರುತಿಸಲಾಗಿದೆ.

ಬೆಂಗಳೂರಿನಲ್ಲಿ ಇನ್ಫೋಸಿಸ್ ಉದ್ಯೋಗಿಯಾಗಿದ್ದ ವಿಘ್ನೇಶ್, ಮೂವರು ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಶ್ರೀರಂಗಪಟ್ಟಣದ ಎಡಮುರಿಯಲ್ಲಿನ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದರು. ನದಿಯಲ್ಲಿನ ಆಳವಾದ ಜಾಗವನ್ನು ಅರಿಯದೆ ಅವರು ಮುಳುಗಿದ್ದಾರೆ. ತಕ್ಷಣ ವಿಘ್ನೇಶ್ ಸಹಾಯಕ್ಕೆ ಸ್ನೇಹಿತರನ್ನು ಕರೆದಿದ್ದಾರೆ. ನೀರಿನಲ್ಲಿ ಮುಳುಗಿದ ಅವರನ್ನು ರಕ್ಷಣೆ ಮಾಡಲು ಸ್ನೇಹಿತರಿಗೆ ಸಾಧ್ಯವಾಗಿಲ್ಲ. ಕೆ.ಆರ್.ಸಾಗರ ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಬಂದು, ಶವ ಹೊರತೆಗೆದು ಮೈಸೂರು ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.

ಕೈ ಮುಖಂಡನ ಶವ ಪತ್ತೆ

ಚಿತ್ರದುರ್ಗ: ನಗರದ ಹೊರವಲಯದ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಕಾಂಗ್ರೆಸ್​ ಮುಖಂಡನ ಶವ ಪತ್ತೆಯಾಗಿದೆ. ಮೃತರನ್ನು ರಸಗೊಬ್ಬರ ಅಂಗಡಿ ನಡೆಸುತ್ತಿದ್ದ ಕಾಂಗ್ರೆಸ್‌ ಮುಖಂಡ ಶಿವಲಿಂಗಪ್ಪ (50) ಎಂದು ಗುರುತಿಸಲಾಗಿದ್ದು, ಮೂರು ದಿನಗಳ ಹಿಂದೆ ಇವರು ನಾಪತ್ತೆಯಾಗಿದ್ದರು. ಇಂದು ಅವರ ಮೃತದೇಹ ಮುಖದ ಗುರುತು ಸಿಗದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ತನಿಖೆಗೆ ಸಂಬಂಧಿಕರಿಂದ ಆಗ್ರಹ ವ್ಯಕ್ತವಾಗಿದ್ದು, ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.