ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪತ್ರಕರ್ತರ ಮಾಸಾಶನ 15 ಸಾವಿರಕ್ಕೆ ಹೆಚ್ಚಳ: ಎಂಎಲ್‌ಸಿ ದಿನೇಶ್ ಗೂಳಿಗೌಡ

ಮದ್ದೂರು ನಗರದ ಹಳೇ ಬಸ್ ನಿಲ್ದಾಣದ ಬಳಿಯಿರುವ ಶ್ರೀ ವೆಂಕಟೇಶ್ವರ ಕನ್‌ವೆನ್ಶನ್‌ ಹಾಲ್‌ನಲ್ಲಿ ಆಯೋಜಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾತನಾಡಿದ್ದಾರೆ.

ಪತ್ರಕರ್ತರ ಮಾಸಾಶನ 15 ಸಾವಿರಕ್ಕೆ ಹೆಚ್ಚಳ: ದಿನೇಶ್ ಗೂಳಿಗೌಡ

-

Prabhakara R
Prabhakara R Mar 15, 2026 10:38 PM

ಮದ್ದೂರು: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪತ್ರಕರ್ತರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸುವ ಜತೆಗೆ ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಸೌಲಭ್ಯ ಕಲ್ಪಿಸಲು ಮುಂದಾಗಿದ್ದು, ಈಗಾಗಲೇ ನೋಂದಣಿ ಪ್ರಕ್ರಿಯೆ ಜಾಲ್ತಿಯಲ್ಲಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪತ್ರಕರ್ತರ ಮಾಸಾಶನವನ್ನು 10 ಸಾವಿರ ರೂ.ನಿಂದ 15 ಸಾವಿರ ರೂ.ಗೆ ಹೆಚ್ಚಳ ಮಾಡಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ನಗರದ ಹಳೇ ಬಸ್ ನಿಲ್ದಾಣದ ಬಳಿಯಿರುವ ಶ್ರೀ ವೆಂಕಟೇಶ್ವರ ಕನ್‌ವೆನ್ಶನ್‌ ಹಾಲ್‌ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕು ಘಟಕ ಆಯೋಜಿಸಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ದು, ರಾಜ್ಯ ಸರ್ಕಾರ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಹತ್ತು ಹಲವು ಸೌಲಭ್ಯಗಳನ್ನು ಕಲ್ಪಿಸಲು ಮುಂದಾಗಿರುವ ಜತೆಗೆ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ಕೆ.ಎಂ.ಉದಯ್, ಪತ್ರಕರ್ತರು ಯಾವಾಗಲೂ ರಾಜಕಾರಣಿ ಮತ್ತು ಅಧಿಕಾರಿಗಳನ್ನು ಬಡಿದೆಬ್ಬಿಸುವ ಮೂಲಕ ಸಮಾಜದ ಅಭ್ಯುದಯಕ್ಕೆ ನಿರಂತರವಾಗಿ ಶ್ರಮಿಸಬೇಕಾಗಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕಾ ರಂಗಕ್ಕೂ ತಮ್ಮದೇ ಆದ ವೌಲ್ಯವಿದ್ದು, ಅದಕ್ಕೆ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದರು.

Operation Kamala: ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪ

ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಎಂ.ಉದಯ್, ದಿನೇಶ್ ಗೂಳೀಗೌಡ ಹಾಗೂ ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್ ಅವರನ್ನು ತಾಲೂಕು ಸಂಘದ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.