ಮಗಳನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಯುವಕನ ಮನೆಗೆ ಬೆಂಕಿ ಇಟ್ಟ ಮಾವ!
Mandya News: ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಪ್ರಾಣಾಪಾಯ ಸಂಭವಿಸಿಲ್ಲ. ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಅಡುಗೆ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.
ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ಮನೆಗೆ ಬೆಂಕಿ ಹಚ್ಚಿರುವುದು. -
ಮಂಡ್ಯ: ತನ್ನ ವಿರೋಧದ ನಡುವೆಯೂ ಪ್ರಿತಿಸಿದವನನ್ನು ಮದುವೆಯಾಗಿದ್ದಕ್ಕೆ ಯುವಕನ ಮನೆಗೆ ಯುವತಿಯ ತಂದೆ ಬೆಂಕಿ ಹಚ್ಚಿರುವ ಘಟನೆ ಮದ್ದೂರು ತಾಲೂಕಿನ ಚುಂಚಗಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ವಿನೋದ್ ಎಂಬ ಯುವಕ ಹಾಗೂ ಪಕ್ಕದ ಮನೆಯ ಯುವತಿ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಮನೆಯವರ ವಿರೋಧದ ಫೆ.12 ರಂದು ಮದುವೆಯಾಗಿದ್ದರು. ಇದರಿಂದ ಕೋಪಗೊಂಡ ಯುವತಿಯ ತಂದೆ ಚನ್ನೇಗೌಡ ಶನಿವಾರ ಬೆಳಗ್ಗೆ ವಿನೋದ್ ಮನೆಗೆ ಬೆಂಕಿ ಹಚ್ಚಿದ್ದಾನೆ.
ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಪ್ರಾಣಾಪಾಯ ಸಂಭವಿಸಿಲ್ಲ. ಮನೆ ಸಂಪೂರ್ಣ ಭಸ್ಮವಾಗಿದ್ದು, ಮನೆಯಲ್ಲಿದ್ದ ಎಲೆಕ್ಟ್ರಾನಿಕ್ ವಸ್ತುಗಳು, ಬಟ್ಟೆ, ಅಡುಗೆ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.
ಬೆಂಕಿಯಿಟ್ಟ ಚನ್ನೇಗೌಡನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆತನಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿನೋದ್ ಕುಟುಂಬಸ್ಥರು ಮನೆಯಲ್ಲಿ 10 ಲಕ್ಷ ರೂ. ನಗದು, 250 ಗ್ರಾಂ ಚಿನ್ನವಿತ್ತು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಮುಂಜಾಗ್ರತೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಶಿವಮೊಗ್ಗದಲ್ಲಿ ಮಹಿಳೆ ಆತ್ಮಹತ್ಯೆ ಕೇಸ್: ಕಾನ್ಸ್‌ಟೇಬಲ್ ಮೋಹನ್ ವಿರುದ್ಧ ಎಫ್‌ಐಆರ್
ಶಿವಮೊಗ್ಗ: ಪತಿ ಮೃತಪಟ್ಟ ಒಂದೇ ವಾರಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಪೇದೆ ಮೋಹನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೊಲೀಸ್ ಪೇದೆ ಕಿರುಕುಳಕ್ಕೆ ಬೇಸತ್ತು ಸ್ವಾತಿ ಎಂಬ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಡೆತ್‌ನೋಟ್‌ನಲ್ಲಿ ಪಿಸಿ ಮೋಹನ್ ಕಿರುಕುಳ ಉಲ್ಲೇಖಿಸಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆತ್ಮಹತ್ಯೆ ಕುರಿತು ಮೃತ ಸ್ವಾತಿ ತಾಯಿ ನ್ಯೂ ಟೌನ್ ಠಾಣೆಗೆ ತೆರಳಿ ದೂರು ನೀಡಿದ್ದರು. ಈ ದೂರು ಆಧರಿಸಿ ತೀರ್ಥಹಳ್ಳಿ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಮೋಹನ್ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ.
ನೆನ್ನೆ ಶಿವಮೊಗ್ಗದ ಭದ್ರಾವತಿಯ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸ್ವಾತಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ತಾಯಿಗೆ ವಾಟ್ಸ್‌ಆಪ್ ಮೂಲಕ ಡೆತ್ ನೋಟ್ ಕಳುಹಿಸಿದ್ದರು. ಅದರಲ್ಲಿ ಪೊಲೀಸ್ ಆಗಿರುವ ಮೋಹನ್ ನನಗೆ ಫೇಸ್ ಬುಕ್‌ನಲ್ಲಿ ಮೆಸೇಜ್ ಮಾಡುತ್ತಿದ್ದರು. ಹೀಗಾಗಿ ಅವರ ಅಕೌಂಟ್ ಬ್ಲಾಕ್ ಮಾಡಿದ್ದೆ. ಇದಕ್ಕೆ ಸಿಟ್ಟಾಗಿ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ಮೋಹನ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.