ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

CM Siddaramaiah: ರಾಜ್ಯದಲ್ಲಿ 16 ವರ್ಷದೊಳಗಿನವರಿಗೆ ಮೊಬೈಲ್‌ ನಿಷೇಧ: ಸಿಎಂ ಸಿದ್ದರಾಮಯ್ಯ ಪ್ರಸ್ತಾಪ

ಬಹಳಷ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ವೀಕ್ಷಣೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ಅವರು ತರಗತಿ ಓದಿನ ಜೊತೆ ವೈಚಾರಿಕ, ವೈಜ್ಞಾನಿಕ, ಮೌಲ್ಯಾಧಾರಿತ ಶಿಕ್ಷಣದಿಂದ ವಂಚಿತರಾಗಿ ಹಾಳಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಹೀಗಾಗಿ ರಾಜ್ಯದಲ್ಲಿ 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 16 ವರ್ಷದೊಳಗಿನವರಿಗೆ ಮೊಬೈಲ್‌ ನಿಷೇಧ: ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ -

ಹರೀಶ್‌ ಕೇರ
ಹರೀಶ್‌ ಕೇರ Feb 23, 2026 8:23 AM

ಬೆಂಗಳೂರು, ಫೆ.23 : ರಾಜ್ಯದಲ್ಲಿ ಶಾಲಾ ಮಕ್ಕಳಲ್ಲಿ (School children) ಮೊಬೈಲ್ ಗೀಳು ಹೆಚ್ಚುತ್ತಿರುವುದನ್ನು ತಡೆಯಲು 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ (mobile usage ban) ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ. ಸರ್ಕಾರದ ಈ ಚಿಂತನೆಗೆ ಶನಿವಾರ ನಡೆದ ರಾಜ್ಯದ ವಿಶ್ವವಿದ್ಯಾಲಯಗಳ ಪ್ರಗತಿಪರಿಶೀಲನಾ ಸಭೆಯಲ್ಲಿ ಅಭಿಪ್ರಾಯ ಪಡೆದಿದ್ದು ಬಹುತೇಕ ಕುಲಪತಿಗಳು ಸಹಮತ ವ್ಯಕ್ತಪಡಿಸಿದ್ದಾರೆ.

ಉನ್ನತ ಶಿಕ್ಷಣ ಪರಿಷತ್‌ನಲ್ಲಿ ಇಡೀ ದಿನ ನಡೆದ ಕುಲಪತಿಗಳ ಸಮ್ಮೇಳನದ ಬಳಿಕ ಸಂಜೆ ಸಮಾರೋಪದ ವೇಳೆ ಮಾತನಾಡಿದ ಸಿದ್ದರಾಮಯ್ಯ ಅವರು, ಈಗಾಗಲೇ ಆಸ್ಟ್ರೇಲಿಯಾ, ಯೂರೋಪ್ ನ ಕೆಲ ರಾಷ್ಟ್ರಗಳಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ ಮಾಡಲಾಗಿದೆ. ನಮ್ಮ ರಾಜ್ಯದಲ್ಲೂ ಬಹಳಷ್ಟು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ವೀಕ್ಷಣೆಯಲ್ಲಿ ಕಾಲ ಕಳೆಯುತ್ತಿದ್ದಾರೆ. ಇದರಿಂದ ಅವರು ತರಗತಿ ಓದಿನ ಜೊತೆ ವೈಚಾರಿಕ, ವೈಜ್ಞಾನಿಕ, ಮೌಲ್ಯಾಧಾರಿತ ಶಿಕ್ಷಣದಿಂದ ವಂಚಿತರಾಗಿ ಹಾಳಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಹೀಗಾಗಿ ರಾಜ್ಯದಲ್ಲಿ 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ವಿಶ್ವದಲ್ಲಿ ನಡೆಯುತ್ತಿರುವ ಬೆಳವಣಿಗೆಯನ್ನು ಮಕ್ಕಳಿಗೆ ಪರಿಚಯಿಸಬೇಕು. ವಿದ್ಯಾರ್ಥಿಗಳನ್ನು ವಿಶ್ವಪ್ರಜೆಯನ್ನಾಗಿಸಲು ಬೇಕಾದ ವೇದಿಕೆಯನ್ನು ಸಿದ್ಧಪಡಿಸಬೇಕು. ಜಾತಿ, ಮತ, ಧರ್ಮ ಮೀರಿ ವೈಜ್ಞಾನಿಕತೆ ಮತ್ತು ವೈಚಾರಿಕೆಯನ್ನು ಬೆಳೆಸಬೇಕು. ಆದರೆ ವಿಶ್ವವಿದ್ಯಾಲಯಗಳು ಜಾತಿಕೂಪಗಳಾಗುತ್ತಿವೆ. ಇದರಿಂದ ಯುವಜನತೆಯನ್ನು ಹೊರ ತರುವ ಕೆಲಸ ಮಾಡಬೇಕು. ಇದಕ್ಕಾಗಿ ಏನು ಮಾಡಬೇಕೆಂಬ ಯೋಜನೆಗಳನ್ನು ಸಿದ್ಧಪಡಿಸಬೇಕು ಎಂದು ಹೇಳಿದ್ದಾರೆ.

Virajpet MLA A S Ponnanna Interview: ನಾಯಕತ್ವದ ಬಗ್ಗೆ ಸಿಎಂ-ಡಿಸಿಎಂ ಮಧ್ಯೆ ಚರ್ಚೆಯಾಗಿದೆ