ತಾತನಾದ ಸಂಭ್ರಮದಲ್ಲಿದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಂಸದ ತೇಜಸ್ವಿ ಸೂರ್ಯ ಅಭಿನಂದನೆ
D.K. Shivakumar: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪುತ್ರಿ ಐಶ್ವರ್ಯಾ ಹೆಗ್ಡೆ ಶುಕ್ರವಾರ (ಮೇ 1) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ನಾಯಕ, ಸಂಸದ ತೇಜಸ್ವಿ ಸೂರ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಡಿಕೆಶಿ ಮತ್ತು ತೇಜಸ್ವಿ ಸೂರ್ಯ (ಸಂಗ್ರಹ ಚಿತ್ರ) -
ಬೆಂಗಳೂರು, ಮೇ 1: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K.Shivakumar) ತಾತ ಆಗಿದ್ದಾರೆ. ಹೌದು, ಅವರ ಪುತ್ರಿ ಐಶ್ವರ್ಯಾ ಹೆಗ್ಡೆ (Aishwarya Dks Hegde) ಶುಕ್ರವಾರ (ಮೇ 1) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಐಶ್ವರ್ಯಾ ಹೆಗ್ಡೆ ಅವರಿಗೆ ಹೆಣ್ಣು ಮಗು ಜನಿಸಿದ್ದು, ತಾಯಿ-ಮಗಳು ಆರೋಗ್ಯವಾಗಿದ್ದಾರೆ. ತಾತನಾದ ಸಂಭ್ರಮದಲ್ಲಿರುವ ಡಿ.ಕೆ. ಶಿವಕುಮಾರ್ ಅವರಿಗೆ ಬಿಜೆಪಿ ನಾಯಕ, ಸಂಸದ ತೇಜಸ್ವಿ ಸೂರ್ಯ (Tejasvi Surya) ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ತೇಜಸ್ವಿ ಸೂರ್ಯ ಬರೆದುಕೊಂಡಿದ್ದಾರೆ. ರಾಜಕೀಯವಾಗಿ ವಿರೋಧವಿದ್ದರೂ ಡಿಕೆಶಿ ಅವರ ಸಂಭ್ರಮದಲ್ಲಿ ತೇಜಸ್ವಿ ಸೂರ್ಯ ಕೂಡ ಭಾಗಿದ್ದಕ್ಕೆ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.
ʼʼಇವತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಜತೆ ಬೆಂಗಳೂರು ದಕ್ಷಿಣದ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದೆ. ಕಾರ್ಯಕ್ರಮಗಳ ಮಧ್ಯೆ ಕಾರಿನಲ್ಲಿ ಜತೆಗೆ ಪ್ರಯಾಣಿಸುವಾಗ ಅವರಿಗೆ ಮನೆಯಿಂದ ಪದೇ ಪದೆ ಫೋನ್ ಬರುತ್ತಿತ್ತು. ವಿಚಾರಿಸಿದಾಗ ಇವತ್ತು ನನ್ನ ಮಗಳ ಡೆಲಿವರಿ. ನಾನು ತಾತ ಆಗುತ್ತಿದ್ದೇನೆ ಎಂದರು. ಒಂದು ಕಡೆ ಕುಟುಂಬದ ಅತ್ಯಂತ ಸಂತೋಷದ ಕ್ಷಣ. ಇನ್ನೊಂದು ಕಡೆ ಸಾರ್ವಜನಿಕ ಜವಾಬ್ದಾರಿ. ಆದರೂ ಅವರು ಫ್ಲೈಓವರ್ ಉದ್ಘಾಟನೆ, ಸ್ಕೈವಾಕ್ ಶಂಕುಸ್ಥಾಪನೆ ಸೇರಿದಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾದರುʼʼ ಎಂದು ತೇಜಸ್ವಿ ಸೂರ್ಯ ವಿವರಿಸಿದ್ದಾರೆ.
ತೇಜಸ್ವಿ ಸೂರ್ಯ ಫೇಸ್‌ಬುಕ್ ಪೋಸ್ಟ್:
ʼʼThe first casualty of public life is personal life ಅಂತ ಮಾತಿದೆ. ಇಂತಹ ಸಂದರ್ಭಗಳಲ್ಲಿ ಆ ಮಾತಿನ ಅರ್ಥ ಇನ್ನಷ್ಟು ಸ್ಪಷ್ಟವಾಗುತ್ತದೆ. ತಾತನಾದ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಮಗಳು ಐಶ್ವರ್ಯಾ ಅವರಿಗೆ, ಮಗುಗೆ ಮತ್ತು ಕುಟುಂಬಕ್ಕೆ ಭಗವಂತ ಆಯುಷ್ಯ, ಆರೋಗ್ಯ ಮತ್ತು ಸಂತೋಷ ಕರುಣಿಸಲಿʼʼ ಎಂದು ಪ್ರಾರ್ಥಿಸಿದ್ದಾರೆ.
ಅಜ್ಜನಾದ ಸಂಭ್ರಮದಲ್ಲಿ ಡಿಸಿಎಂ; ಹೆಣ್ಣು ಮಗುವಿಗೆ ಜನ್ಮ ನೀಡಿದ ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯ ಹೆಗ್ಡೆ
ಆಸ್ಪತ್ರೆಗೆ ಭೇಟಿ ನೀಡಿದ ಡಿಕೆಶಿ
ಸಾರ್ವಜನಿಕ ಕಾರ್ಯಕ್ರಮ ಮುಗಿಸಿ ಡಿಕೆಶಿ ಆಸ್ಪತ್ರೆಗೆ ಭೇಟಿ ನೀಡಿ ಮಗಳು ಹಾಗೂ ಮೊಮ್ಮಗಳ ಆರೋಗ್ಯ ವಿಚಾರಿಸಿದ್ದಾರೆ. ಡಿಕೆಶಿ ಅವರ ರಾಜಕೀಯ ಗುರು ಎಸ್.ಎಂ. ಕೃಷ್ಣ ಅವರ ಹುಟ್ಟುಹಬ್ಬದಂದೇ ಅವರ ಮೊಮ್ಮಗನ ಪತ್ನಿ ಐಶ್ವರ್ಯಾ ಮಗುವಿಗೆ ಜನ್ಮ ನೀಡಿರುವುದು ವಿಶೇಷ.
ಡಿ.ಕೆ. ಶಿವಕುಮಾರ್ ಪುತ್ರಿ ಐಶ್ವರ್ಯಾ ಹಾಗೂ ಕೆಫೆ ಕಾಫಿ ಡೇ ಸಂಸ್ಥಾಪಕ ದಿ. ವಿ.ಜಿ. ಸಿದ್ಧಾರ್ಥ ಅವರ ಪುತ್ರ ಅಮರ್ತ್ಯ ಹೆಗ್ಡೆ 2021ರ ಫೆಬ್ರವರಿ 14ರಂದು ವಿವೈವಾಹಿಕ ಜೀವನಕ್ಕೆ ಕಾಟಿಟ್ಟಿದ್ದರು. ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಶೆರಟಾನ್ ಗ್ರ್ಯಾಂಡ್ ಹೋಟೆಲ್‌ನಲ್ಲಿ ನಡೆದ ವಿವಾಹ ಕಾರ್ಯಕ್ರಮದಲ್ಲಿಅನೇಕ ಗಣ್ಯರು ಭಾಗವಹಿಸಿದ್ದರು.