Mysuru News: ಹುಣಸೂರಿನಲ್ಲಿ ಹೃದಯ ವಿದ್ರಾವಕ ಘಟನೆ; ದಾಸವಾಳ ಹೂವು ನುಂಗಿ 6 ತಿಂಗಳ ಮಗು ಸಾವು
Hunsur Child Death: ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಹೊಸ್ತಿಲಿಗೆ ಇಟ್ಟಿದ್ದ ದಾಸವಾಳ ಹೂವನ್ನು ಮಗು ನುಂಗಿದೆ. ಮಗುವಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ.
-
ಮೈಸೂರು: ಮನೆಯಲ್ಲಿ ಆಟವಾಡುತ್ತಿದ್ದ ಆರೂವರೆ ತಿಂಗಳ ಮಗು, ದಾಸವಾಳದ ಹೂವು ನುಂಗಿ ಉಸಿರುಗಟ್ಟಿ ಮೃತಪಟ್ಟಿರುವ ಘಟನೆ (Hunsur Child Death) ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ನಡೆದಿದೆ. ಸುದರ್ಶನ್ ಮತ್ತು ನವ್ಯ ದಂಪತಿಯ ಎರಡನೇ ಪುತ್ರ ಆರೂವರೆ ತಿಂಗಳ ಚಿನ್ಮಯಿಗೌಡ ಮೃತ ಮಗು.
ಅಣ್ಣನೊಂದಿಗೆ ಮನೆಯಲ್ಲಿ ಶನಿವಾರ ಆಟವಾಡುತ್ತಿದ್ದ ವೇಳೆ ಮನೆಯ ಹೊಸ್ತಿಲಿನಲ್ಲಿ ಪೂಜೆ ಮಾಡಿ ಇಟ್ಟಿದ್ದ ದಾಸವಾಳದ ಹೂವು ಒಣಗಿ ಬಿದ್ದಿತ್ತು. ಆಟವಾಡುವ ವೇಳೆ ಮಗು ಆ ಒಣಗಿದ ಹೂವನ್ನು ಬಾಯಿಗೆ ಹಾಕಿಕೊಂಡಿದೆ. ಈ ಸಂದರ್ಭದಲ್ಲಿ ಹೂವು ಗಂಟಲಿನಲ್ಲಿ ಸಿಲುಕಿಕೊಂಡಿದ್ದರಿಂದ ಮಗುವಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡು ಅಸ್ವಸ್ಥಗೊಂಡಿದೆ.
ಆರಂಭದಲ್ಲಿ ಮಗುವಿಗೆ ಉಸಿರಾಟದ ಸಮಸ್ಯೆಗೆ ಕಾರಣವೇನು ಅನ್ನೋದು ಗೊತ್ತಾಗಿರಲಿಲ್ಲ. ಆಸ್ಪತ್ರೆಗೆ ತೆಗೆದುಕೊಂಡು ಹೋದ ಬಳಿಕವೇ ಮಗು ಹೂವು ನುಂಗಿದ್ದು ಗೊತ್ತಾಗಿದೆ. ಉಸಿರನ್ನು ಎಳೆದುಕೊಳ್ಳುತ್ತಲೇ, ಆಸ್ಪತ್ರೆಯ ಬೆಡ್ ಮೇಲೆ ಮಗು ಪ್ರಾಣ ಬಿಟ್ಟಿದೆ.
Self Harming: ಸಾಲದ ಸುಳಿಗೆ ಸಿಲುಕಿದ ಕುಟುಂಬ, ಮೂವರ ಕತ್ತು ಸೀಳಿ ಆತ್ಮಹತ್ಯೆ ಯತ್ನ, ಇಬ್ಬರು ಸಾವು
ಮೊದಲಿಗೆ ಮಗುವನ್ನು ಹನಗೋಡಿನ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ತದನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಕೊನೆಯುಸಿರೆಳೆದಿದೆ. ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.