ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ಬಿಜೆಪಿ-ದಳದ ಟೀಕೆಗಳು ಸತ್ತಿವೆ, ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ: ಡಿ.ಕೆ.ಶಿವಕುಮಾರ್

DK Shivakumar: ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬಿಜೆಪಿ-ದಳದ ಟೀಕೆಗಳು ಸತ್ತಿವೆ, ನಮ್ಮ ಕೆಲಸ ಶಾಶ್ವತವಾಗಿ ಉಳಿಯಲಿವೆ: ಡಿಕೆಶಿ

Profile Siddalinga Swamy Apr 26, 2025 9:14 PM

ಪಿರಿಯಾಪಟ್ಟಣ: ಪಿರಿಯಾಪಟ್ಟಣದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಉದ್ಘಾಟನೆ ಮಾಡಲಾಗಿದ್ದು, ಇದರಿಂದ ಬಿಜೆಪಿ ಹಾಗೂ ದಳದ ಟೀಕೆಗಳು ಸತ್ತಿವೆ. ನಮ್ಮ ಸರ್ಕಾರದ ಯೋಜನೆಗಳು ಶಾಶ್ವತವಾಗಿ ಉಳಿಯಲಿವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ತಿಳಿಸಿದರು. ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನಾ ಕಾರ್ಯಕ್ರಮ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಿಜೆಪಿ ಹಾಗೂ ದಳದವರು ಮಾತೆತ್ತಿದರೆ ಅಭಿವೃದ್ಧಿ ಇಲ್ಲ ಎನ್ನುತ್ತಿದ್ದಾರೆ. ನಮ್ಮ ಸರ್ಕಾರ ನಿಮ್ಮ ಒಂದೇ ತಾಲೂಕಿಗೆ ಸುಮಾರು ₹500 ಕೋಟಿ ಮೊತ್ತದ ಯೋಜನೆಗಳನ್ನು ನೀಡಿದೆ. ಇಂದು ನಡೆಯುತ್ತಿರುವ ಉದ್ಘಾಟನೆ ಅಭಿವೃದ್ಧಿಯಲ್ಲವೇ? ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಜಿಲ್ಲೆಗಳಿಗೆ ₹3500 ಕೋಟಿಯಷ್ಟು ಯೋಜನೆಗಳಿಗೆ ಅನುಮೊದನೆ ನೀಡಲಾಗಿದೆ. ಇದು ಅಭಿವೃದ್ಧಿಯಲ್ಲವೇ? ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿಗೂ ಹೆಚ್ಚಿನ ಬಜೆಟ್ ಮಂಡನೆ ಮಾಡಿದ್ದು ಅಭಿವೃದ್ಧಿಯಲ್ಲವೇ? ಬಡ ಕುಟುಂಬಗಳಿಗೆ ಪ್ರತಿ ತಿಂಗಳು 4-5 ಸಾವಿರ ಉಳಿತಾಯವಾಗುವಂತೆ ಮಾಡುತ್ತಿರುವುದು ಅಭಿವೃದ್ಧಿಯಲ್ಲವೇ? ಜನರು ಶಕ್ತಿಯುತವಾದರೆ ರಾಜ್ಯ ಹಾಗೂ ಸರ್ಕಾರ ಶಕ್ತಿಯುತವಾಗುತ್ತದೆ. ಇದು ಕಾಂಗ್ರೆಸ್ ಸರ್ಕಾರದ ಚಿಂತನೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆ ನೀಡಲು ತೀರ್ಮಾನ ಮಾಡಿದೆವು. ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಇಟ್ಟಿದ್ದೇವೆ. ನಮ್ಮ ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಮಂತ್ರಿಗಳಿಂದ ಹಿಡಿದು ಎಲ್ಲರೂ ಟೀಕೆ ಮಾಡಿದರು. ಈಗ ಎಲ್ಲಾ ರಾಜ್ಯಗಳಲ್ಲೂ ನಮಗಿಂತ ಮುಂಚೆ ಅವರೇ ಘೋಷಣೆ ಮಾಡುತ್ತಿದ್ದಾರೆ. ಬಿಜೆಪಿಯವರು ನಮ್ಮ ಯೋಜನೆಗಳಿಗೆ ಬೇರೆ ಹೆಸರುಗಳನ್ನು ಇಟ್ಟುಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ನಮ್ಮ ಸರ್ಕಾರ ಎಲ್ಲಾ ವರ್ಗದ ಜನರಿಗೆ ಯೋಜನೆ ನೀಡುತ್ತಾ ಬಂದಿದೆ. ಎಲ್ಲಾ ಜಾತಿ, ಧರ್ಮದವರಿಗೆ ಗ್ಯಾರಂಟಿ ಯೋಜನೆ ನೀಡುತ್ತಿದ್ದೇವೆ. ಈ ಭೂಮಿ ಮೇಲೆ ಇರುವುದು ಒಂದೇ ಜಾತಿ ಅದು ಮಾನವ ಜಾತಿ. ಇದು ನಮ್ಮ ಸರ್ಕಾರದ ನಂಬಿಕೆ. ಬಸವಣ್ಣನವರ ಆಚಾರ ವಿಚಾರದ ಮೇಲೆ ಸರ್ಕಾರ ನಂಬಿಕೆ ಇಟ್ಟಿದೆ ಎಂದರು.

ಟೀಕೆ ಮಾಡುವವರು ಇರಬೇಕು. ಟೀಕೆ ಮಾಡುವವರು ಇದ್ದಾಗ ಮಾತ್ರ ನಮಗೆ ಶಕ್ತಿ ಬರುತ್ತದೆ. ಟೀಕೆ ಮಾಡುವವರನ್ನು ನಾವು ತಡೆಯಬಾರದು. ಅವರು ಟೀಕೆ ಮಾಡಿದರೆ ನಾವು ಸರಿಯಾದ ದಾರಿಯಲ್ಲಿ ಹೋಗುತ್ತೇವೆ. ಟೀಕೆಗಳನ್ನು ನಾನು ಸದಾ ಸ್ವಾಗತಿಸುತ್ತೇನೆ. ಕಾರಣ, ಟೀಕೆಗಳು ಸಾಯುತ್ತವೆ ನಮ್ಮ ಕೆಲಸಗಳು ಉಳಿಯುತ್ತವೆ. ಬಿಜೆಪಿ ಹಾಗೂ ದಳದ ನಾಯಕರು ಮಾಡುತ್ತಿದ್ದ ಟೀಕೆಗಳು ಸತ್ತು ಹೋಗಿವೆ. ನಮ್ಮ ಸರ್ಕಾರ ಕೈಗೊಂಡಿರುವ ಕೆಲಸಗಳು ಶಾಶ್ವತವಾಗಿ ಉಳಿಯಲಿವೆ. ಇದೊಂದು ಇತಿಹಾಸ. ಇತಿಹಾಸ ಮರೆತವ, ಇತಿಹಾಸ ಸೃಷ್ಟಿಸಲಾರ ಎಂದು ಹೇಳಿದರು.

ಪಿರಿಯಾಪಟ್ಟಣದಲ್ಲಿ ಅಭಿವೃದ್ಧಿ ಜಾತ್ರೆ

ಇಂದು ಪಿರಿಯಾಪಟ್ಟಣದಲ್ಲಿ ಅಭಿವೃದ್ಧಿಯ ಜಾತ್ರೆ ನಡೆಯುತ್ತಿದೆ. 47 ಮೆ.ವ್ಯಾಟ್ ಸೌರ ವಿದ್ಯುತ್ ಉತ್ಪಾದನೆ ಮಾಡಲು 140 ಕೋಟಿ ಮೊತ್ತದ ಯೋಜನೆಯನ್ನು ಪ್ರಾರಂಭಿಸಲಾಗಿದೆ. ನಮ್ಮ ತಾಲೂಕಿನಲ್ಲಿ 20 ಮೆ.ವ್ಯಾಟ್ ಸೌರ ವಿದ್ಯುತ್ ಉತ್ಪಾದನಾ ಘಟಕ ಸ್ಥಾಪಿಸಲಾಗಿದೆ. ಈ ಭಾಗದಲ್ಲಿ ಆನೆ ಹಾವಳಿ ಹೆಚ್ಚಾಗಿದೆ. ರಾತ್ರಿ ವೇಳೆ ಜಮೀನಿನಲ್ಲಿ ನೀರು ಕಟ್ಟಲು ಸಾಧ್ಯವಾಗುವುದಿಲ್ಲ. ಇದರಿಂದ ಹಗಲಿನಲ್ಲೇ ರೈತರ ಪಂಪ್ ಸೆಟ್‌ಗೆ ವಿದ್ಯುತ್ ಪೂರೈಸಬಹುದು. ಕಾಂಗ್ರೆಸ್ ಸರ್ಕಾರವೇ ರೈತರಿಗೆ ಉಚಿತ ವಿದ್ಯುತ್ ಪೂರೈಸಲು ತೀರ್ಮಾನ ಮಾಡಿತು. ನಂತರ ಸಿದ್ದರಾಮಯ್ಯ ಅವರ ಕಳೆದ ಸರ್ಕಾರದಲ್ಲಿ ನಾನು ಇಂಧನ ಸಚಿವನಾಗಿದ್ದಾಗ, ರೈತರಿಗೆ ನೀಡುವ ವಿದ್ಯುತ್ ಅವಧಿಯನ್ನು 6 ರಿಂದ 7 ಗಂಟೆಗೆ ಏರಿಸಲಾಯಿತು ಎಂದರು.

ವೆಂಕಟೇಶ್ ಅವರು ಈ ಹಿಂದೆ 300 ಕೋಟಿ ವೆಚ್ಚದ 150 ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಿದ್ದರು. ಈಗ 110 ಕೋಟಿ ವೆಚ್ಚದಲ್ಲಿ 25 ಕಾಮಗಾರಿಗಳು, 64 ಕೋಟಿ ವೆಚ್ಚದ ಯೋಜನೆ, ಹಾರಂಗಿ ಜಲಾಶಯ ವ್ಯಾಪ್ತಿಯ ಪಿರಿಯಾಪಟ್ಟಣ ಏತ ನೀರಾವರಿ ಯೋಜನೆಗೆ 198 ಕೋಟಿ ಅನುದಾನವನ್ನು ಮೊನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡಲು ಈ ಯೋಜನೆಗಳನ್ನು ನೀಡಲಾಗಿದೆ ಎಂದು ಹೇಳಿದರು.

ನಮಗೆ ಸಿಕ್ಕ ಅವಕಾಶದಲ್ಲಿ ನಾವು ಏನು ಸಾಕ್ಷಿಗುಡ್ಡೆ ಮಾಡುತ್ತೇವೆ ಎಂಬುದು ಮುಖ್ಯ. ವೆಂಕಟೇಶ್ ಅವರು ಈ ಕ್ಷೇತ್ರದ ಶಾಸಕರಾಗಿ ಅನೇಕ ಸಾಕ್ಷಿಗುಡ್ಡೆಗಳನ್ನು ಸೃಷ್ಟಿಸಿದ್ದಾರೆ. ವೆಂಕಟೇಶ್ ಅವರು ಮತದಾರರ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ. ಸಾವಿರಾರು ರೈತರಿಗೆ ನೆರವಾಗಲು ನಮ್ಮ ಮೇಲೆ ಒತ್ತಡ ಹಾಕಿ ಈ ಯೋಜನೆಗಳನ್ನು ತಂದಿದ್ದಾರೆ. ವೆಂಕಟೇಶ್ ಅವರು ಎಲ್ಲಾ ವರ್ಗದ ಜನರಿಗೆ ಸೇವೆ ಮಾಡುವ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Karnataka Rains: ನಾಳೆ ಬಾಗಲಕೋಟೆ, ಬೆಳಗಾವಿ ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆ ಮುನ್ಸೂಚನೆ

ನನ್ನ ಆತ್ಮೀಯ ಮಿತ್ರ ವೆಂಕಟೇಶ್ ಅವರ ಪರವಾಗಿ ಇಡೀ ಸರ್ಕಾರ ನಿಂತಿದೆ ಎಂದು ಹೇಳಲು ನಾವಿಲ್ಲಿಗೆ ಬಂದಿದ್ದೇವೆ. ನಾನು ಚುನಾವಣೆ ಸಮಯದಲ್ಲಿ ಪ್ರಚಾರಕ್ಕೆ ಬಂದಾಗ ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರಕ್ಕೆ ಬಂದ ಕಾರಣಕ್ಕೆ ಗ್ಯಾರಂಟಿ ಯೋಜನೆಗಳು ಜಾರಿಯಾದವು. ಐದು ಬೆರಳು ಸೇರಿ ಕೈ ಮುಷ್ಠಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ಈ ಕೈಗೆ ಆಶೀರ್ವಾದ ಮಾಡಿರುವ ನಿಮ್ಮ ಸೇವೆಗೆ ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ತಿಳಿಸಿದರು.