ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಗವಿಸಿದ್ದೇಶ್ವರ ಸ್ವಾಮೀಜಿ; ಈ ಬಾರಿ ವಿಶೇಷತೆ ಏನು?

ವಿಶ್ವವಿಖ್ಯಾತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ 2026 ಕ್ಕೆ ಇಂದು ಅಧಿಕೃತವಾಗಿ ಅದ್ಧೂರಿ ಚಾಲನೆ ದೊರೆತಿದೆ. ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಈ ಬಾರಿ ಅಧಿಕೃತವಾಗಿ ದಸರಾಗೆ ಚಾಲನೆ ನೀಡಿದ್ದಾರೆ. ಇನ್ನು ಭಾನುವಾರ ಸಂಜೆ ದಸರಾ ಮಹೋತ್ಸದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಗವಿಸಿದ್ದೇಶ್ವರ ಸ್ವಾಮೀಜಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Oct 11, 2026 1:26 PM

ಮೈಸೂರು: ವಿಶ್ವವಿಖ್ಯಾತ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ 2026 ಕ್ಕೆ (Mysore Dasara) ಇಂದು ಅಧಿಕೃತವಾಗಿ ಅದ್ಧೂರಿ ಚಾಲನೆ ದೊರೆತಿದೆ. ಈ ಬಾರಿಯ ನಾಡಹಬ್ಬವನ್ನು ಕೊಪ್ಪಳದ ಗವಿಮಠದ ಮಹಾಗುರುಗಳಾದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ( Gavisiddeshwara Swamiji) ದೀಪ ಬೆಳಗಿಸಿ, ಚಾಮುಂಡೇಶ್ವರಿ ಅಮ್ಮನವರ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅಧಿಕೃತವಾಗಿ ಉದ್ಘಾಟಿಸಿದರು.

ಈ ವೇಳೆ ಸಿಎಂ ಡಿ ಕೆ ಶಿವಕುಮಾರ್, ಡಾ ಯತೀಂದ್ರ ಸಿದ್ದರಾಮಯ್ಯ, ರಿಜ್ವಾನ್ ಅರ್ಷದ್, ಶಿವರಾಜ ಎಸ್ ತಂಗಡಗಿ ಸೇರಿದಂತೆ ಹಲವು ಗಣ್ಯರು ಸಾಕ್ಷಿಯಾದರು. ಸರ್ಕಾರದ ವತಿಯಿಂದ ಗವಿಸಿದ್ಧೇಶ್ವರ ಮಹಾಸ್ವಾಮಿಗಳಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀಗಳು, "ದಸರಾ ಕೇವಲ ಒಂದು ಹಬ್ಬವಲ್ಲ, ಇದು ನಾಡಿನ ಸಾಂಸ್ಕೃತಿಕ ಶ್ರೀಮಂತಿಕೆ ಮತ್ತು ಒಗ್ಗಟ್ಟಿನ ಪ್ರತೀಕ" ಎಂದು ಸಂದೇಶ ನೀಡಿದರು.

ಇನ್ನು ಭಾನುವಾರ ಸಂಜೆ ದಸರಾ ಮಹೋತ್ಸದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಸಂಜೆ 5 ಗಂಟೆಗೆ ಮೈಸೂರು ಅರಮನೆ ವೇದಿಕೆಯಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ದಸರಾ ಪ್ರಯುಕ್ತವಾಗಿ ಭಾನುವಾರ ಸಂಜೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳಕ್ಕೆ ಚಾಲನೆ ಸಿಗಲಿದೆ. ಅಷ್ಟೇ ಅಲ್ಲದೆ, ದೇವರಾಜ ಅರಸು ಕ್ರೀಡಾಂಗಣದಲ್ಲಿ ಕುಸ್ತಿ ಪಂದ್ಯಾವಳಿಗೂ ಚಾಲನೆ ಸಿಗಲಿದೆ.

ಧನುರ್ ಲಗ್ನದಲ್ಲಿ ದಸರಾಕ್ಕೆ ಗವಿಮಠ ಶ್ರೀ ಚಾಲನೆ: ಅ.11ಕ್ಕೆ ಚಾಮುಂಡಿ ಬೆಟ್ಟದಲ್ಲಿ ದಸರಾ-2026ಕ್ಕೆ ಅಧಿಕೃತ ಚಾಲನೆ

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಡೀ ಮೈಸೂರು ನಗರಕ್ಕೆ ವಧುವಿನಂತೆ ಸಿಂಗಾರ ಮಾಡಲಾಗಿದೆ. ನಗರದ ಪ್ರಮುಖ ವೃತ್ತಗಳು, ರಸ್ತೆಗಳು ಹಾಗೂ ಸರ್ಕಾರಿ ಕಟ್ಟಡಗಳು ಸೇರಿದಂತೆ ಸುಮಾರು 146 ಕಿಲೋಮೀಟರ್‌ಗೂ ಹೆಚ್ಚು ಉದ್ದದ ರಸ್ತೆಗಳಿಗೆ ದೀಪಾಲಂಕಾರ ಮಾಡಲಾಗಿದೆ.