ಬೆಂಗಳೂರಿಗೆ ತೆರಳುತ್ತಿದ್ದ ಬಳಿ ಕೆಎಸ್ಆರ್ಟಿಸಿ ಬಸ್‌ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು
Bus Fire Accident: ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 'ಇವಿ ಪವರ್ ಪ್ಲಸ್' ಎಸಿ ಸ್ಲೀಪರ್ ಎಲೆಕ್ಟ್ರಿಕ್ ಬಸ್ ಶನಿವಾರ ಸಂಜೆ ಮೈಸೂರು ಬಳಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಸಂಪೂರ್ಣ ಸುಟ್ಟು ಹೋಗಿರುವ ಕೆಸ್‌ಆರ್‌ಟಿಸಿ ಬಸ್ -
ಮೈಸೂರು: ವಿರಾಜಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) 'ಇವಿ ಪವರ್ ಪ್ಲಸ್' (EV Power Plus) ಎಸಿ ಸ್ಲೀಪರ್ ಎಲೆಕ್ಟ್ರಿಕ್ ಬಸ್ ಶನಿವಾರ ಸಂಜೆ ಮೈಸೂರು ಬಳಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬಸ್‌ನಲ್ಲಿದ್ದ ಎಲ್ಲಾ 18 ಪ್ರಯಾಣಿಕರು ಮತ್ತು ಸಿಬ್ಬಂದಿ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರು ಕೇಂದ್ರ ಘಟಕಕ್ಕೆ ಸೇರಿದ ಈ ಎಲೆಕ್ಟ್ರಿಕ್ ಬಸ್ ಶನಿವಾರ ಸಂಜೆ 5:40 ರ ಸುಮಾರಿಗೆ ಮೈಸೂರು-ಹುಣಸೂರು ರಸ್ತೆಯ ಬಿಳಿಕೆರೆ ಬಳಿ ಚಲಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಚಾಲನೆ ವೇಳೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬಸ್‌ನ ಬ್ರೇಕ್ ಜಾಮ್ ಆಗಿದೆ. ಇದರಿಂದಾಗಿ ಚಕ್ರಗಳ ನಡುವೆ ತೀವ್ರ ಘರ್ಷಣೆ ಉಂಟಾಗಿ, ತಕ್ಷಣವೇ ಹಿಂಭಾಗದ ಚಕ್ರದಿಂದ ದಟ್ಟವಾದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣವೇ ಅಲರ್ಟ್ ಆದ ಬಸ್ ಚಾಲಕ, ವಾಹನವನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬೆಂಕಿ ಇಡೀ ಬಸ್‌ಗೆ ಆವರಿಸುವ ಮುನ್ನವೇ ನಿದ್ದೆಯಲ್ಲಿದ್ದ ಪ್ರಯಾಣಿಕರನ್ನು ತಕ್ಷಣವೇ ಬಸ್‌ನಿಂದ ಕೆಳಗೆ ಇಳಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ದಿದ್ದಾರೆ. ಇವಿ ಬಸ್‌ನ ಬ್ಯಾಟರಿ ಮತ್ತು ಇಂಟೀರಿಯರ್ ವಸ್ತುಗಳ ಕಾರಣದಿಂದಾಗಿ ಬೆಂಕಿ ವೇಗವಾಗಿ ಹರಡಿ ಇಡೀ ಬಸ್‌ಗೆ ಆವರಿಸಿದೆ. ಅವಘಡದಿಂದಾಗಿ ಹೈವೇಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ರಸ್ತೆಯಲ್ಲೇ ಉಳಿದಿದ್ದ ಪ್ರಯಾಣಿಕರಿಗೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ತಕ್ಷಣವೇ ಬೇರೆ ಪರ್ಯಾಯ ಬಸ್‌ಗಳ ವ್ಯವಸ್ಥೆ ಮಾಡಿ, ಸುರಕ್ಷಿತವಾಗಿ ಬೆಂಗಳೂರಿಗೆ ಕಳುಹಿಸಿಕೊಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆ.ಎಸ್.ಆರ್.ಟಿ.ಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ.
ಹೋಟೆಲ್‌ನಲ್ಲಿ ಬೆಂಕಿ ಅವಘಡ: ದುರಂತದಲ್ಲಿ ಏಳು ಮಂದಿ ಬಲಿ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸುವ ಕಾರ್ಯ ನಡೆಸಿದರು. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದು ತಕ್ಷಣಕ್ಕೆ ಖಚಿತವಾಗಿಲ್ಲ. ಬಸ್‌ನ ಇಂಜಿನ್ ಭಾಗದಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿತೇ ಅಥವಾ ಬೇರೆ ಯಾವುದೇ ಕಾರಣವಿದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಯಬೇಕಿದೆ. ನಿಖರ ಕಾರಣ ಹಾಗೂ ಸಂಭವಿಸಿರುವ ನಷ್ಟದ ಕುರಿತು ಅಧಿಕೃತ ತನಿಖೆಯ ಬಳಿಕವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.