ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Gas Geyser leak: ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಅಕ್ಕ- ತಂಗಿ ಉಸಿರುಗಟ್ಟಿ ಸಾವು

Myusru News: ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಬಾಗಿಲು ತೆರೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ.

ಗ್ಯಾಸ್‌ ಗೀಸರ್‌ ಸೋರಿಕೆಯಾಗಿ ಅಕ್ಕ- ತಂಗಿ ಉಸಿರುಗಟ್ಟಿ ಸಾವು

-

ಹರೀಶ್‌ ಕೇರ ಹರೀಶ್‌ ಕೇರ Oct 25, 2025 9:43 AM

ಮೈಸೂರು : ಮೈಸೂರಿನಲ್ಲಿ ಘೋರವಾದ ದುರಂತವೊಂದು ಸಂಭವಿಸಿದೆ. ಸ್ನಾನಕ್ಕೆ ತೆರಳಿದ್ದಾಗ ಗ್ಯಾಸ್ ಗೀಸರ್ ಲೀಕ್ (Gas Geyser leakage) ಆಗಿ ಅಕ್ಕ ಮತ್ತು ತಂಗಿ ಇಬ್ಬರೂ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು (Mysuru news) ಜಿಲ್ಲೆಯ ಪಿರಿಯಾಪಟ್ಟಣದ ಬೆಟ್ಟದಪುರ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಗುಲ್ಫಾರ್ಮ್ (23) ಮತ್ತು ಸಿಮ್ರಾನ್ ತಾಜ್ (20) ಎಂದು ಗುರುತಿಸಲಾಗಿದೆ.

ಅಕ್ಕ-ತಂಗಿಯರಾದ ಗುಲ್ಫಾರ್ಮ್, ಸಿಮ್ರಾನ್ ತಾಜ್ ಇಬ್ಬರೂ ಒಟ್ಟಿಗೆ ಸ್ನಾನ ಮಾಡಲು ಹೋಗಿದ್ದಾರೆ. ಆದರೆ ಸ್ನಾನಕ್ಕೆ ಹೋದವರು ಬಹಳ ಸಮಯವಾದರೂ ಹೊರಗೆ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ತಂದೆ ಅಲ್ತಾಫ್‌ ಬಾಗಿಲು ಬಡಿದಿದ್ದಾರೆ. ಆಗಲೂ ಬಾಗಿಲು ತೆಗೆದಿಲ್ಲ. ತೆರೆದು ನೋಡಿದಾಗ ಮಕ್ಕಳಿಬ್ಬರು ಅರೆಪ್ರಜ್ಞಾವಸ್ಥೆಯಲ್ಲಿರೋದು ಕಂಡು ಶಾಕ್ ಆಗಿದ್ದಾರೆ. ತಕ್ಷಣ ಮಕ್ಕಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಿ ಇಬ್ಬರೂ ಮೃತಪಟ್ಟಿದ್ದರು.

ಇದನ್ನೂ ಓದಿ: Murder Case: ಅಮಾನುಷ ಘಟನೆ, ಮಲತಂದೆಯಿಂದ ಮಗಳ ಕೊಲೆ

ಮಗನ ತಲೆಗೆ ತಂದೆಯಿಂದ ಗುಂಡು

ಬೆಂಗಳೂರು: ಆಸ್ತಿ ವಿಚಾರವಾಗಿ ನಡೆದ ಗಲಾಟೆ ವೇಳೆ ಮಗನ ಮೇಲೆಯೇ ತಂದೆ ಗನ್‌ನಿಂದ ಶೂಟ್ ಮಾಡಿರುವ ಘಟನೆ (Shootout Case) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮರಳೇನಹಳ್ಳಿಯಲ್ಲಿ ನಡೆದಿದೆ. ಹರೀಶ್ (30) ಎಂಬುವವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಗ ಹಾಗೂ ತಂದೆಯ ನಡುವೆ ಆಸ್ತಿ ವಿಚಾರವಾಗಿ ಗಲಾಟೆ ನಡೆದು, ಮಗನ ಮೇಲೆ ತಂದೆ ಗನ್‌ನಿಂದ ಶೂಟ್ ಮಾಡಿದ್ದಾನೆ. ಮಗ ಹರೀಶ್‌ ಮೇಲೆ ತಂದೆ ಸುರೇಶ್ ಫೈರಿಂಗ್ ಮಾಡಿದ್ದಾನೆ. ಹಳೆ ಲೋಡ್ ಗನ್‌ನಿಂದ ಶೂಟ್ ಮಾಡಿದ್ದು, ಗಾಯಾಳುವನ್ನು ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಂದೆ ಸುರೇಶ್ ಮದ್ಯ ಸೇವಿಸಿ ಜಮೀನು ಮಾರಾಟ ಮಾಡಿದ್ದ. ಇದ್ದ ಜಮೀನು ಮಾರಾಟ ಮಾಡಲು ಹರೀಶ್‌ಗೆ ಕಿರುಕುಳ ನೀಡಿದ್ದಾನೆ. ಇದೇ ವಿಚಾರವಾಗಿ ಗಲಾಟೆ ನಡೆದಿದೆ. ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.