ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mysuru News: ದೋಷಯುಕ್ತ ನಂಬರ್ ಪ್ಲೇಟ್; 159 ಬೈಕ್‌ ಸೀಜ್‌

ದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ ಹಿನ್ನೆಲೆಯಲ್ಲಿ , ಮೈಸೂರು ನಗರ ಸಂಚಾರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, 159 ಬೈಕ್ ಗಳನ್ನು ಸೀಜ್‌ ಮಾಡಲಾಗಿದೆ. ದಂಡದಿಂದ ತಪ್ಪಿಸಿಕೊಳ್ಳಲು ಈ ರೀತಿ ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿದರ ಹಿನ್ನೆಲೆಯಲ್ಲಿ ಪೊಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ.

159 ಬೈಕ್‌ ಸೀಜ್‌ ಮಾಡಿದ ಪೊಲೀಸರು! ಕಾರಣವೇನು?

Vishakha Bhat Vishakha Bhat Aug 3, 2025 7:55 AM

ಮೈಸೂರು: ದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ ಹಿನ್ನೆಲೆಯಲ್ಲಿ , (Mysuru News) ಮೈಸೂರು ನಗರ ಸಂಚಾರ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದು, 159 ಬೈಕ್ ಗಳನ್ನು ಸೀಜ್‌ ಮಾಡಲಾಗಿದೆ. ದಂಡದಿಂದ ತಪ್ಪಿಸಿಕೊಳ್ಳಲು ಈ ರೀತಿ ದೋಷಪೂರಿತ ನಂಬರ್ ಪ್ಲೇಟ್ ಅಳವಡಿಸಿದರ ಹಿನ್ನೆಲೆಯಲ್ಲಿ ಪೊಲೀಸರು ಈ ಒಂದು ಕಾರ್ಯಾಚರಣೆ ನಡೆಸಿದ್ದಾರೆ. ದೇವರಾಜ್ ಟ್ರಾಫಿಕ್ ಠಾಣೆಯಲ್ಲಿ 24, ಕೆ.ಆರ್ ಸಂಚಾರ ಠಾಣೆಯಲ್ಲಿ 30, ಎನ್ ಆರ್ ಸಂಚಾರ ಠಾಣೆಯಲ್ಲಿ 28, ಸಿದ್ದಾರ್ಥ ನಗರ ಸಂಚಾರ ಠಾಣೆಯಲ್ಲಿ 27 ಹಾಗು ವಿವಿಪುರಂ ಟ್ರಾಫಿಕ್ ವ್ಯಾಪ್ತಿಯಲ್ಲಿ 50 ಬೈಕ್ ಗಳು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ದಂಡದಿಂದ ತಪ್ಪಿಸಿಕೊಳ್ಳಲು ದೋಷಪೂರಿತ ನಂಬರ್ ಪ್ಲೇಟ್ ಬಳಕೆ ಮಾಡಿದ್ದಾರೆ ಈ ಹಿನ್ನೆಲೆ ಪೊಲೀಸರು ಕಾರ್ಯಾಚರಣೆ ನಡೆಸಿ ಬೈಕ್ ಗಳನ್ನು ಜಪ್ತಿ ಮಾಡಿದ್ದಾರೆ.

ಕಾನೂನು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಅಳವಡಿಸಿಕೊಳ್ಳುತ್ತಿದ್ದ ದೋಷಪೂರಿತ ನಂಬರ್ ಪ್ಲೇಟ್‌ಗಳ ಬಳಕೆಯನ್ನು ತಡೆಯುವ ಪ್ರಯತ್ನದಲ್ಲಿ ಕರ್ನಾಟಕ ಪೊಲೀಸರು ರಾಜ್ಯಾದ್ಯಂತ ಕಠಿಣ ಕ್ರಮ ಆರಂಭಿಸಿದ್ದಾರೆ. ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಈ ಕಾರ್ಯಾಚರಣೆ ನಡೆಸಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಹೊಸ ನಂಬರ್ ಪ್ಲೇಟ್‌ಗಳನ್ನು ಅಳವಡಿಸಲು ಸೂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೋಷಪೂರಿತ ನಂಬರ್ ಪ್ಲೇಟ್ ಹೊಂದಿರುವ ಹೆಚ್ಚಿನ ವಾಹನಗಳು ವಾಹನ ಚಾಲಕರಿಗೆ ಸೇರಿದ್ದು, ಕೆಲವರು ಪೊಲೀಸರಿಂದ ತಪ್ಪಿಸಿಕೊಳ್ಳಲು ರಸ್ತೆಯಲ್ಲಿ ಅಪಾಯಕಾರಿ ಸಾಹಸಗಳನ್ನು ಮಾಡುತ್ತಾರೆ. ಈ ಅಪರಾಧಿಗಳು ಸ್ಟಿಕ್ಕರ್‌ಗಳೊಂದಿಗೆ ನಂಬರ್ ಪ್ಲೇಟ್‌ಗಳನ್ನು ಮರೆಮಾಡುತ್ತಾರೆ, ಪ್ಲೇಟ್‌ಗಳನ್ನು ಮಡಚುತ್ತಾರೆ ಮತ್ತು ಮಡಚಬಹುದಾದ ನಂಬರ್ ಪ್ಲೇಟ್‌ಗಳನ್ನು ಹೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Rahul Gandhi: ಬಿಜೆಪಿ ಮತ ಕಳ್ಳತನ ಆರೋಪಿಸಿ ಆ.5ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ, ಕಾಂಗ್ರೆಸ್‌ ಪ್ರತಿಭಟನೆ

ನಂದಿನಿ ಪಾರ್ಲರ್‌ನಲ್ಲಿ ಕಳ್ಳತನ

ಬೆಂಗಳೂರಿನಲ್ಲಿ ನಂದಿನಿ ಪಾರ್ಲರ್ ಬೀಗ ಮುರಿದು 3 ಲಕ್ಷ ರೂಪಾಯಿ ಕಳ್ಳತನ ಮಾಡಲಾಗಿದೆ. ಮಳಿಗೆಯ ಬೀಗ ಕುರಿತು ಹಣ ದೋಚುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿರೂಪಾಕ್ಷ ಎಂಬವರಿಗೆ ಸೇರಿದ ನಂದಿನಿ ಪಾರ್ಲರ್ ನಲ್ಲಿ ಕಳುವಾಗಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.