Muda Case: ಮುಡಾ ಪ್ರಕರಣ; ಇಡಿಯಿಂದ ಮತ್ತೆ 100 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು
Muda Case: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ.


ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ 100 ಕೋಟಿ ರೂ. ಮೌಲ್ಯದ 92 ಸ್ಥಿರಾಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಆಧರಿಸಿ ಆಸ್ತಿ ಜಪ್ತಿ ಮಾಡಲಾಗಿದೆ. ಈ ಮೂಲಕ ಮುಡಾದಲ್ಲಿ (Muda Case) ಬೃಹತ್ ಅಕ್ರಮ ನಡೆದಿರುವುದು ದೃಢಪಟ್ಟಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಾರಿ ನಿರ್ದೇಶನಾಲಯ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ, 2002 ರ ನಿಬಂಧನೆಗಳ ಅಡಿಯಲ್ಲಿ 100 ಕೋಟಿ ರೂ. ಮೌಲ್ಯದ 92 ಸ್ಥಿರ ಆಸ್ತಿಗಳನ್ನು (ಮುಡಾ ನಿವೇಶನಗಳು) ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಈ ಆಸ್ತಿಗಳನ್ನು ವಸತಿ ಸಹಕಾರಿ ಸಂಘ ಮತ್ತು ಮುಡಾ ಅಧಿಕಾರಿಗಳು ಸೇರಿ ಪ್ರಭಾವಿ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾಗಿದೆ ಎಂದು ಇಡಿ ಹೇಳಿದೆ.
ED, Bangalore has provisionally attached 92 immovable properties (MUDA sites) having market value of Rs. 100 Crore (approx.) on 9/06/2025 under the provisions of the PMLA, 2002, in connection with MUDA Scam case matter related to Siddaramaiah and others having cumulative…
— ED (@dir_ed) June 10, 2025
ನಗದು, ಬ್ಯಾಂಕ್ ವರ್ಗಾವಣೆ, ಚರ/ಸ್ಥಿರಾಸ್ತಿಗಳ ರೂಪದಲ್ಲಿ ಅಕ್ರಮ ಸೈಟ್ ಹಂಚಿಕೆ ಮಾಡಲು ಲಂಚ ಪಡೆದಿದ್ದಾರೆ. ಅನರ್ಹ ಫಲಾನುಭವಿಗಳನ್ನು ಗುರುತಿಸಿ ನಕಲಿ ದಾಖಲೆಗಳು ಸೃಷ್ಟಿದ್ದು, ಸರ್ಕಾರಿ ಆದೇಶಗಳನ್ನ ಉಲ್ಲಂಘನೆ ಮಾಡಿ ಹಂಚಿಕೆ ಮಾಡಿದ್ದಾರೆ. ಅಲ್ಲದೇ ಮುಡಾ ಅಧಿಕಾರಿಗಳ ಸಂಬಂಧಿಕರು, ಸಹವರ್ತಿಗಳ ಬ್ಯಾಂಕ್ ಖಾತೆಗಳ ಮೂಲಕ ಹಣ ರವಾನೆ ಆಗಿರುವುದು ತನಿಖೆಯಿಂದ ಬಯಲಾಗಿದೆ ಎನ್ನಲಾಗಿದೆ.
ಈ ಹಿಂದೆ ಇಡಿ ಸಂಸ್ಥೆಯು ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟಿ ಮೌಲ್ಯದ ನಿವೇಶಗಳನ್ನ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ 100 ಕೋಟಿ ಮೌಲ್ಯದ 92 ಮುಡಾ ಸೈಟ್ ಅನ್ನು ಸೀಜ್ ಮಾಡಿದೆ. ಈವರೆಗೆ ಸುಮಾರು 400 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಜಪ್ತಿ ಮಾಡಿದೆ.
ಸಿಎಂ ಸಿದ್ದರಾಮಯ್ಯ ಮತ್ತು ಪತ್ನಿ ಪಾರ್ವತಮ್ಮ ಸೇರಿ ಇತರರ ವಿರುದ್ಧ ಐಪಿಸಿ, 1860 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಲೋಕಾಯುಕ್ತ ಪೊಲೀಸರು ಮೈಸೂರಿನಲ್ಲಿ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಇಡಿ ತನಿಖೆ ಆರಂಭಿಸಿತ್ತು. ಇದೀಗ ಭ್ರಷ್ಟಾಚಾರ ನಡೆದಿರುವ ಬಗ್ಗೆ ಇಡಿ ಉಲ್ಲೇಖಿಸಿದೆ.
ಈ ಸುದ್ದಿಯನ್ನೂ ಓದಿ | ಫ್ರಾಂಚೈಸಿ ಮಾರಾಟ ಮಾಡಲು ಮುಂದಾದ ಆರ್‌ಸಿಬಿ ಮಾಲೀಕರು