Actor Chetan Ahimsa: ಸಂರಕ್ಷಿತಾರಣ್ಯ ಅಕ್ರಮ ಪ್ರವೇಶ, ನಟ ಚೇತನ್ ಅಹಿಂಸಾ ಮೇಲೆ ಪ್ರಕರಣ ದಾಖಲು
Nagarahole Forest: ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ.ಅನನ್ಯಕುಮಾರ್ ಪ್ರಕರಣ ದಾಖಲಿಸಿದ್ದಾರೆ.

ನಟ ಚೇತನ್ ಅಹಿಂಸ

ಮಡಿಕೇರಿ: ನಾಗರಹೊಳೆ ರಕ್ಷಿತಾರಣ್ಯ (Nagarahole forest) ಪ್ರದೇಶಕ್ಕೆ ಅಕ್ರಮ ಪ್ರವೇಶ ಮಾಡಿದ ಆರೋಪದಡಿ ನಟ ಚೇತನ್ ಅಹಿಂಸಾ (Actor Chetan Ahimsa) ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿಗೆ ಒಳಪಡುವ ಕರಡಿಕಲ್ಲು ಅತ್ತೂರು ಕೊಲ್ಲಿ ಹಾಡಿಯಲ್ಲಿ ಆ.8 ರಂದು ಅರಣ್ಯ ಹಕ್ಕು ಕಾಯ್ದೆಯಡಿ ವೈಯಕ್ತಿಕ ಹಕ್ಕು ಮತ್ತು ಸಮುದಾಯದ ಹಕ್ಕಿಗಾಗಿ ಒತ್ತಾಯಿಸಿ ಪ್ರತಿಭಟನೆಗೆ ಬೆಂಬಲ ನೀಡಿದ ನಟ ಚೇತನ್ ಅಹಿಂಸಾ ಸೇರಿ ಐವರ ವಿರುದ್ಧ ಪ್ರಕರಣ ದಾಖಲಾಗಿದೆ.
ಸಂರಕ್ಷಿತಾರಣ್ಯ ಪ್ರದೇಶದೊಳಗೆ ಅರಣ್ಯ ಇಲಾಖೆ ಅನುಮತಿಯಿಲ್ಲದೆ ಪ್ರವೇಶಿಸುವುದು, ಚಟುವಟಿಕೆಗಳನ್ನು ನಡೆಸುವುದು ಕರ್ನಾಟಕ ಅರಣ್ಯ ಸಂರಕ್ಷಣಾ ಕಾಯಿದೆಯಡಿ ಅಪರಾಧವಾಗಿದೆ. ಈ ಕುರಿತು ಚೇತನ್ ಅಹಿಂಸಾ, ನ್ಯಾಷನಲ್ ಆದಿವಾಸಿ ಸಂಘಟನೆ ಮುಖ್ಯಸ್ಥ ರಾಯ್ ಡೇವಿಡ್, ರಾಜಾರಾಮ್, ಪತ್ರಕರ್ತೆ ನಿಕಿತಾ ಜೈನ್, ಸರ್ತ ಜಾಲಿ ವಿರುದ್ಧ ನಾಗರಹೊಳೆ ಅರಣ್ಯಕ್ಕೆ ಅಕ್ರಮ ಪ್ರವೇಶ ಆರೋಪದಡಿ ನಾಗರಹೊಳೆ ವನ್ಯಜೀವಿ ಉಪ ವಿಭಾಗದ ಸಂರಕ್ಷಣಾಧಿಕಾರಿ ಜೆ.ಅನನ್ಯಕುಮಾರ್ ಪ್ರಕರಣ ದಾಖಲಿಸಿದ್ದಾರೆ.
ರಮ್ಯಾಗೆ ಅಶ್ಲೀಲ ಸಂದೇಶ ಕಳಿಸಿದ ಪ್ರಮುಖ ಆರೋಪಿ ಬಂಧನ
ಬೆಂಗಳೂರು: ನಟಿ ಹಾಗೂ ಮಾಜಿ ಸಂಸದೆ ರಮ್ಯಾ (Actress Ramya) ಅವರಿಗೆ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಶ್ಲೀಲವಾಗಿ ಕಮೆಂಟ್ (obscene message) ಮಾಡಿದ್ದ ಮತ್ತು ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣದ ಮೊದಲ ಆರೋಪಿ, ಕೆಆರ್ ಪುರಂ ನಿವಾಸ ಪ್ರಮೋದ್ ಗೌಡ(20)ನನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಮೋದ್ ಗೌಡ, ತನ್ನ ಫ್ರೆಂಡ್ ಮೊಬೈಲ್‌ನಲ್ಲಿ ಅಕೌಂಟ್ ಓಪನ್ ಮಾಡಿ, ನಟಿ ರಮ್ಯಾ ಅವರ ಇನ್‌ಸ್ಟಾಗ್ರಾಂ ಖಾತೆಗೆ ಅಶ್ಲೀಲ ಮತ್ತು ಬೆದರಿಕೆ ಸಂದೇಶ ಕಳುಹಿಸಿದ್ದ ಎನ್ನಲಾಗಿದೆ. ಪ್ರಮೋದ್ ಗೌಡ- 87 ಎಂಬ ಅಕೌಂಟ್‌ನಿಂದ ಮೆಸೇಜ್ ಮಾಡಿದ್ದ ಪ್ರಮೋದ್ ಗೌಡನನ್ನು ಗುರುವಾರ ರಾತ್ರಿ ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ.
ನಟ ದರ್ಶನ್ ಅವರ ಅಭಿಮಾನಿಗಳು ಎಂದು ಹೇಳಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ನಟಿ ರಮ್ಯಾ ಅವರು ಜುಲೈ 28ರಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು. ಈ ಸಂಬಂಧ ಸೈಬರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಸದ್ಯ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ: 'ಆ ದಿನಗಳು' ಚಿತ್ರದ ನಟ ಚೇತನ್ ವಿರುದ್ಧ ದೂರು ದಾಖಲು