Namaz in bus: ಬಸ್ ನಿಲ್ಲಿಸಿ ನಮಾಜ್: ನೌಕರನ ವಿರುದ್ಧ ಕ್ರಮಕ್ಕೆ ಸಚಿವರ ಸೂಚನೆ
ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್ ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ ಎಂಬುದಾಗಿ ತಿಳಿಸಿದ್ದಾರೆ.


ಬೆಂಗಳೂರು: ಮಾರ್ಗ ಮಧ್ಯದಲ್ಲೇ ಬಸ್ ನಿಲ್ಲಿಸಿ, ಬಸ್ಸಿನಲ್ಲೇ ನಮಾಜ್ (Namaz in bus) ಮಾಡಿದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡ್ರೈವರ್ ಕಂ ಕಂಡಕ್ಟರ್ (KSRTC driver) ಪ್ರಕರಣದ ಬಗ್ಗೆ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Transport minister Ramalinga reddy) ಸೂಚಿಸಿದ್ದಾರೆ. ಕರ್ತವ್ಯದ ಸಮಯದಲ್ಲಿ ಮಾರ್ಗಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್‌ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ ಎಂದು ಅವರು ಹೇಳಿದ್ದಾರೆ.
ಹುಬ್ಬಳ್ಳಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಅವರು ಈ ಕುರಿತು ಪತ್ರ ಬರೆದಿದ್ದು, ದಿನಾಂಕ 29-04-2025 ರ ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಕಾರ್ಯಾಚರಣೆ ಯಾಗುತ್ತಿದ್ದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಚಾಲಕ-ಕಂ-ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಬಗ್ಗೆ ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿದೆ ಎಂದಿದ್ದಾರೆ.
ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್ ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ ಎಂಬುದಾಗಿ ತಿಳಿಸಿದ್ದಾರೆ.
ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ ಕ್ರಮ ಜರುಗಿಸಲು ಸೂಚಿಸಿದೆ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸುವಂತೆ ಸೂಚಿಸಿದ್ದಾರೆ.
ಇದನ್ನೂ ಓದಿ: KSRTC news: ರಾಜ್ಯದ ಹೆಮ್ಮೆಯ ಕೆಎಸ್‌ಆರ್‌ಟಿಸಿಗೆ 9 ರಾಷ್ಟ್ರೀಯ ಪ್ರಶಸ್ತಿ!