KN Rajanna: ಸಿದ್ದರಾಮಯ್ಯ ಇರುವವರೆಗೂ ನಾನು ಕಾಂಗ್ರೆಸ್‌ನಲ್ಲೇ: ಕೆಎನ್ ರಾಜಣ್ಣ
CM Siddaramaiah: ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವವರೆಗೂ ಹಾಗೂ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿಕೊಂಡಿರುವವರೆಗೂ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ಬೇರೆ ಯಾವುದೇ ಪಕ್ಷಕ್ಕೆ ಹೋಗಲ್ಲ. ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಯಾವನು ಹೇಳಿದ್ದು ಎಂದು ರಾಜಣ್ಣ ಸಿಡಿಮಿಡಿ ಮಾಡಿದ್ದಾರೆ.

-

ಬೆಂಗಳೂರು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಕೆ.ಎನ್ ರಾಜಣ್ಣ (KN Rajanna) ಬಿಜೆಪಿ (BJP) ಪಕ್ಷಕ್ಕೆ ಸೇರಿಕೊಳ್ಳಲು ಅರ್ಜಿ ಹಾಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಾಲಕೃಷ್ಣ (Congress MLA Balakrishna) ನಿನ್ನೆ ಸ್ಪೋಟಕ ಹೇಳಿಕೆ ನೀಡಿದ್ದರು. ಇವರ ಹೇಳಿಕೆಗೆ ಇದೀಗ ಮಾಜಿ ಸಚಿವ ರಾಜಣ್ಣ ತಿರುಗೇಟು ನೀಡಿದ್ದು ಸಿಎಂ ಸಿದ್ದರಾಮಯ್ಯ (CM Siddaramaiah) ಇರುವವರೆಗೂ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ ಎಂದು ತಿಳಿಸಿದರು.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವವರೆಗೂ ಹಾಗೂ ಕಾಂಗ್ರೆಸ್ ಪಕ್ಷದ ನೇತೃತ್ವ ವಹಿಸಿಕೊಂಡಿರುವವರೆಗೂ ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ಬೇರೆ ಯಾವುದೇ ಪಕ್ಷಕ್ಕೆ ಹೋಗಲ್ಲ. ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಯಾವನು ಹೇಳಿದ್ದು? ಅವನು ಹೇಳೋದು ಹೇಳಿಕೊಳ್ಳಲಿ, ಅವನೇ ಬೇಕಾದರೆ ಬ್ರೆನ್ ಮ್ಯಾಪಿಂಗ್ ಮಾಡಿಕೊಳ್ಳಲಿ ಎಂದು ಏಕವಚನದಲ್ಲಿ ತಿರುಗೇಟು ನೀಡಿದರು.
ನಾನ್ಯಾಕೆ ಬಿಜೆಪಿಗೆ ಹೋಗಲಿ. ನಾನ್ಯಾಕೆ ಪಕ್ಷ ಬಿಡಲಿ. ಪಕ್ಷ ನನಗೇನು ಕಡಿಮೆ ಮಾಡಿದೆ? ಸಿದ್ದರಾಮಯ್ಯ ಸಿಎಂ ಆಗಿ ಇರುವ ತನಕ ಹಾಗೂ ಪಕ್ಷದ ನೇತೃತ್ವ ವಹಿಸಿಕೊಂಡಿರುವವರೆಗೆ ನಾನು ಕಾಂಗ್ರೆಸ್‌ನಲ್ಲಿಯೇ ಇರುತ್ತೇನೆ. ಅವರು ಪಕ್ಷದಲ್ಲಿ ಇರುವವರೆಗೂ ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋಗುತ್ತೇನೆ. ಸಿದ್ದರಾಮಯ್ಯನವರ ಕೈಯಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ಇರೋವರೆಗೂ ನನ್ನ ಭವಿಷ್ಯಕ್ಕೆ ಏನೂ ತೊಂದರೆ ಇಲ್ಲ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯಲ್ಲ ಎಂದರು.
ಇದನ್ನೂ ಓದಿ: K N Rajanna: ಕೆ.ಎನ್.ರಾಜಣ್ಣ ಅವರನ್ನು ಕೂಡಲೇ ಸಂಪುಟಕ್ಕೆ ಸೇರ್ಪಡೆ ಮಾಡಬೇಕು : ಆರ್.ಅಶೋಕ್ ಕುಮಾರ್ ಆಗ್ರಹ