No Salary: 6 ತಿಂಗಳಿಂದ ಸಂಬಳ ಕೊಡಲಿಲ್ಲವೆಂದು ರಾಜೀನಾಮೆ ಕೊಟ್ಟ ವೈದ್ಯಾಧಿಕಾರಿ
ವೈದ್ಯರಾದ ಡಾ.ಕುಲದೀಪ್ ಎಂ.ಡಿ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಡಾ.ಕುಲದೀಪ್ ಎಂ.ಡಿ -
ಮಂಗಳೂರು, ಡಿ.22: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ದಕ್ಷಿಣ ಕನ್ನಡ (Dakshina Kannda) ಜಿಲ್ಲೆಯ ಸುಳ್ಯ (Sullia news) ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು (Doctor) ಸರಿಯಾಗಿ ಸಂಬಳ ಆಗದ (No Salary) ಕಾರಣ ರಾಜಿನಾಮೆ ನೀಡಿದ್ದಾರೆ. 6 ತಿಂಗಳಿಂದ ಸಂಬಳ ಬರದಿದ್ದಕ್ಕೆ ಬೇಸತ್ತು ಅವರು ಈ ನಿರ್ಧಾರ ಕೈಗೊಂಡಿದ್ದಾರೆ.
ವೈದ್ಯರಾದ ಡಾ.ಕುಲದೀಪ್ ಎಂ.ಡಿ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಳೆದ ಎರಡೂವರೆ ವರ್ಷದಿಂದ ವೈದ್ಯಾಧಿಕಾರಿಗಳಾಗಿ ಕೆಲಸ ಮಾಡುತ್ತಿದ್ದರು. ಸಂಬಳ ಬಾರದೇ ವೈಯಕ್ತಿಕ ಜೀವನಕ್ಕೆ ಸಮಸ್ಯೆ ಆಗುತ್ತಿದೆ. ಆರ್ಥಿಕ ಸಮಸ್ಯೆ ಉಂಟಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿಗಳಿಗೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ರಾಜ್ಯದ ಹಲವು ಪ್ರಾಥಮಿಕ ಗುತ್ತಿಗೆ ವೈದ್ಯಾಧಿಕಾರಿಗಳಿಗೆ ಸರ್ಕಾರ ಸಂಬಳ ಬಾಕಿ ಉಳಿಸಿಕೊಂಡಿದೆ. ಇನ್ನೂ ನೌಕರರ ಸಂಬಳದ ವಿಳಂಬದ ಬಗ್ಗೆ ವಿಪಕ್ಷಗಳು ಸರ್ಕಾರವನ್ನು ಎಚ್ಚರಿಸುತ್ತಿವೆ.
ಎಂಟನೇ ವೇತನ ಆಯೋಗ ಜಾರಿ ಹಿನ್ನೆಲೆ; ವೇತನ, ಪಿಂಚಣಿ ಹೊರೆ ನಿರ್ವಹಿಸಲು ರೈಲ್ವೆ ಇಲಾಖೆಯ ವೆಚ್ಚ ಕಡಿತ
ಕಾರ್ಮಿಕರಿಗೆ ಸಿಹಿ ಸುದ್ದಿ: ಕನಿಷ್ಠ ವೇತನ, ರಜೆ, ಪಿಎಫ್- ಇಎಸ್‌ಐ ಕಡ್ಡಾಯ
ನವದೆಹಲಿ: ಕಾರ್ಮಿಕರಿಗೆ ಸಿಹಿ ಸುದ್ದಿಯನ್ನು ಕೇಂದ್ರ ಸರಕಾರ ನೀಡಿದ್ದು, ಕಾರ್ಮಿಕ ಕಾನೂನುಗಳಲ್ಲಿ (Labour law) ಕೆಲವು ಮಹತ್ವದ ಬದಲಾವಣೆಗಳನ್ನು ತಂದಿದೆ. ಎಲ್ಲಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು ನೀಡಬೇಕು. ಪ್ರತಿ ತಿಂಗಳು 7ನೇ ತಾರೀಖಿನ ಒಳಗೆ ವೇತನ (Salary) ಪಾವತಿಸಬೇಕು ಎಂಬ ಸೂಚನೆಗಳನ್ನು ಸೇರಿದಂತೆ, ವಿವಿಧ ವಲಯಗಳಿಗೆ ಸಂಬಂಧಿಸಿದ 29 ಕಾರ್ಮಿಕ ಕಾನೂನುಗಳನ್ನು ಒಗ್ಗೂಡಿಸಿ ರೂಪಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳ (Labour Codes) ಜಾರಿಗೆ ಅಧಿಸೂಚನೆ ಹೊರಡಿಸಿದೆ.
ವೇತನ ಸಂಹಿತೆ (2020), ಕೈಗಾರಿಕೆ ಸಂಬಂಧಗಳ ಸಂಹಿತೆ (2019), ಸಾಮಾಜಿಕ ಭದ್ರತಾ ಸಂಹಿತೆ (2020), ವೃತ್ತಿ ಸುರಕ್ಷತೆ, ಆರೋಗ್ಯ ಮತ್ತು ಕಾರ್ಯನಿರ್ವಹಣೆ ಸ್ಥಿತಿ ಸಂಹಿತೆ (2020) ಜಾರಿಗೆ ಬಂದಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ತಿಳಿಸಿದೆ.
ಎಲ್ಲ ಉದ್ಯೋಗದಾತರು ಕಡ್ಡಾಯವಾಗಿ ನೇಮಕಾತಿ ಪತ್ರಗಳನ್ನು ನೀಡಬೇಕು. ಪ್ರತಿ ತಿಂಗಳು 7ನೇ ತಾರೀಖಿನ ಒಳಗೆ ವೇತನ ಪಾವತಿಸಬೇಕು. ಯಾವುದೇ ಉದ್ಯೋಗವಾದರೂ ಮಹಿಳೆಯರಿಗೆ ರಾತ್ರಿಪಾಳಿ ಕೆಲಸಗಳಿಗೆ ಅವಕಾಶ ಹಾಗೂ ರಾತ್ರಿಪಾಳಿಯಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಸೂಕ್ತ ಭದ್ರತೆ ಕಲ್ಪಿಸಬೇಕು. 40 ವರ್ಷ ಮೇಲ್ಪಟ್ಟ ವಯೋಮಾನದ ಎಲ್ಲ ಕೆಲಸಗಾರರಿಗೆ ವಾರ್ಷಿಕವಾಗಿ ಉಚಿತ ಆರೋಗ್ಯ ತಪಾಸಣೆ ಮಾಡಿಸಬೇಕು ಎನ್ನುವುದು ಹೊಸ ಕಾರ್ಮಿಕ ಸಂಹಿತೆಗಳ ಪ್ರಮುಖ ಸಂಗತಿಗಳಾಗಿವೆ.
‘‘ದೇಶದ ಬಹುತೇಕ ಕಾರ್ಮಿಕ ಕಾನೂನುಗಳನ್ನು ಸ್ವಾತಂತ್ರ್ಯಪೂರ್ವ ಮತ್ತು ಸ್ವಾತಂತ್ರ್ಯನಂತರದ ಆರಂಭದಲ್ಲಿ(1930-1950ರ ದಶಕ) ರಚಿಸಲಾಗಿದೆ. ಆ ಸಮಯದಲ್ಲಿಆರ್ಥಿಕತೆ ಮತ್ತು ಕೆಲಸದ ಸ್ವರೂಪಗಳು ಮೂಲಭೂತವಾಗಿ ವಿಭಿನ್ನವಾಗಿದ್ದವು. ಈಗಿನ ಅಗತ್ಯತೆಗೆ ಅನುಗುಣವಾಗಿ ಕಾರ್ಮಿಕ ನಿಯಮಗಳನ್ನು ಮರುರೂಪಿಸಲಾಗಿವೆ. ಈ ಸಂಹಿತೆಗಳು ಸ್ವಾವಲಂಬಿ ರಾಷ್ಟ್ರಕ್ಕೆ ಅಗತ್ಯವಿರುವ ಬಲಿಷ್ಠ ಕಾರ್ಯಪಡೆಯನ್ನು ರೂಪಿಸುತ್ತವೆ,’’ ಎಂದು ಸಚಿವಾಲಯ ತಿಳಿಸಿದೆ.