ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Karnataka Weather: ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ನಾಳೆ ರಾಜ್ಯಾದ್ಯಂತ ಅಬ್ಬರಿಸಲಿದೆ ಮುಂಗಾರು ಪೂರ್ವ ಮಳೆ

ಸಾಂದರ್ಭಿಕ ಚಿತ್ರ -

Ramesh Ballamoole
Ramesh Ballamoole May 21, 2026 7:01 PM

ಬೆಂಗಳೂರು, ಮೇ 21: ಸುಡು ಬಿಸಿಲಿನಿಂದ ಕಂಗೆಟ್ಟ ರಾಜ್ಯದ ಜನತೆಗೆ ಕೆಲವು ದಿನಗಳಿಂದ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆ ಸ್ವಲ್ಪ ಮಟ್ಟಿಗೆ ತಂಪೆರೆದಿದೆ (Karnataka Weather). ಇದರ ಜತೆ ಹಲವು ಕಡೆ ನಾಶವನ್ನೂ ತಂದಿಟ್ಟಿದೆ. ಈ ಮಧ್ಯೆ ಮುಂದಿನ 4 ದಿನಗಳ ಕಾಲ ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜತೆಗೆ ಬೆಂಗಳೂರು ಸೇರಿ ಕೆಲವು ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ (Orange Alert) ಘೋಷಿಸಿದೆ.

ಮೇ 22ರಂದು ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಮಧ್ಯಾಹ್ನ/ಸಂಜೆ ವೆೇಳೆಗೆ ಮೋಡ ದಟ್ಟವಾಗಲಿದ್ದು, ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಜತೆಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕನಿಷ್ಠ ಮತ್ತು ಗರಿಷ್ಠ ತಾಪಮಾನ ಕ್ರಮವಾಗಿ 22°C ಹಾಗೂ 33°C ಇರಲಿದೆ.

ಇನ್ನು ಶುಕ್ರವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆ ಸುರಿಯಲಿದೆ. ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಕೊಪ್ಪಳ, ಗದಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗಲಿದ್ದು, ಉಳಿದೆಡೆ ಒಣ ಹವಾಮಾನ ಮುಂದುವರಿಯಲಿದೆ.

ದಕ್ಷಿಣ ಒಳನಾಡಿನ ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳ ಹಲವೆಡೆ ಭಾರಿ ಗಾಳಿಯೊಂದು ಗುಡುಗು ಸಹಿತ ವರ್ಷಧಾರೆಯಾಗಲಿದೆ. ಬ‍್ಳಾರಿ, ವಿಜಯನಗರ, ಚಿತ್ರದುರ್ಗ ಜಿಲ್ಲೆಗಳಲಲಿ ಬಿರುಗಾಳಿಯೊಂದಿಗೆ ವರುಣಾರ್ಭಟ ಜೋರಾಗಿರಲಿದೆ. ಚಿಕ್ಕಮಗಳೂರು, ಚಾಮರಾಜನಗರ, ಶಿವಮೊಗ್ಗ, ಆವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳ ಹಲವೆಡೆ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರಿನಲ್ಲಿ ಮಳೆರಾಯನ ಅಬ್ಬರ; ಹಲವೆಡೆ ಧರೆಗುರುಳಿದ ಮರಗಳು, ರಸ್ತೆಗಳು ಜಲಾವೃತವಾಗಿ ಭಾರಿ ಸಂಚಾರ ದಟ್ಟಣೆ!

ಮುಂದಿನ ದಿನಗಳಲ್ಲಿ ಹೇಗಿರಲಿದೆ ಹವಾಮಾನ?

ಮೇ 23: ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವೆಡೆ ಬಿರುಗಾಳಿಯೊಂದಿಗೆ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದೆ.

ಮೇ 24: ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯಲಿದೆ.

ಮೇ 25: ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ವಿವಿಧ ಕಡೆಗಳಲ್ಲಿ ಬಿರುಗಾಳಿಯೊಂದಿಗೆ, ಗುಡುಗು ಸಹಿತ ಮಳೆ ಸುರಿಯಲಿದೆ.

ಮೇ 26: ಕರಾವಳಿಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕಲಬುರಗಿ, ಬೀದರ್‌, ರಾಯಚೂರು, ಯಾದಗಿರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದೆ. ಇತರ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಹಗುರ ಮಳೆಯಾಗಲಿದೆ.

ರಾಜ್ಯದ ಇನ್ನಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.