ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rahul Gandhi: ಆಗಸ್ಟ್‌ 4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ

Bengaluru: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

ಆಗಸ್ಟ್‌ 4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ

ಹರೀಶ್‌ ಕೇರ ಹರೀಶ್‌ ಕೇರ Jul 30, 2025 8:05 AM

ಬೆಂಗಳೂರು: ಆಗಸ್ಟ್ 4ರಂದು ಕಾಂಗ್ರೆಸ್ ನಾಯಕ ಹಾಗೂ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿಯವರು (Rahul Gandhi) ಬೆಂಗಳೂರಿಗೆ (Bengaluru) ಆಗಮಿಸಲಿದ್ದಾರೆ. ಅವರು ಮಹದೇವಪುರ ವಿಧಾನಸಭಾ ಕ್ಷೇತ್ರದಿಂದ ಮುಖ್ಯ ಚುನಾವಣಾಧಿಕಾರಿ ಕಚೇರಿವರೆಗೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ರಾಹುಲ್ ಗಾಂಧಿಯವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ (CM Siddaramaiah), ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಸೇರಿ ಕೈ ನಾಯಕರು ಸಾಥ್ ನೀಡಲಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ. ಮಹದೇವಪುರ ವಿಧಾನಸಭೆ ಕ್ಷೇತ್ರದಲ್ಲಿ ಕೆಲ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ದಾಖಲೆ ಇದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ಕೈ ನಾಯಕ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಘಟಾನಘಟಿ ನಾಯಕರು ಚುನಾವಣಾ ಆಯೋಗದ ವಿರುದ್ಧ ಪ್ರತಿಭಟನೆ ಮತ್ತು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ರಾಹುಲ್ ಗಾಂಧಿ ರಾಜ್ಯಕ್ಕೆ ಬರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, 4ನೇ ತಾರೀಕಿಗೆ ಬರ್ತಾರೆ ಅನ್ನೋದಿದೆ. ಅಧಿಕಾರಿಗಳ ಬಳಿ ಮಾತಾಡಬೇಕು. ಸಿಎಂ ಬಳಿ ಮಾತಾಡ್ತೇನೆ ಎಂದರು. ದರ್ಶನ್ ಫ್ಯಾನ್ಸ್ ವಿಚಾರದಲ್ಲಿ ರಮ್ಯಾಗೆ ಕೆಪಿಸಿಸಿ ಮಹಿಳಾ ಘಟಕ ಬೆಂಬಲ ಘೋಷಣೆ ಹಿನ್ನೆಲೆಯಲ್ಲಿ, ನಮಗೆ ಯಾರು ಬೆಂಬಲ ಕೊಡ್ತಾರೋ, ಅವರಿಗೆ ನಾವೂ ಬೆಂಬಲ ಕೊಡ್ತೇವೆ ಎಂದರು.

ಇದನ್ನೂ ಓದಿ: Rahul Gandhi: ನರೇಂದ್ರ ಮೋದಿ ದೊಡ್ಡ ಸಮಸ್ಯೆಯಲ್ಲ, ಅವರು ಕೇವಲ ಪ್ರದರ್ಶನಕ್ಕಷ್ಟೇ; ರಾಹುಲ್‌ ಗಾಂಧಿ ವಾಗ್ದಾಳಿ