Road Accident: ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿ, ಮಹಿಳೆ ಸಾವು, 6 ಜನರಿಗೆ ಗಾಯ
ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಘಟನೆ ತಿಳಿಯುತ್ತಲೇ ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.

ಸಾಂದರ್ಭಿಕ ಚಿತ್ರ

ರಾಯಚೂರು: ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಒಂದು ಚಾಲಕನ ನಿಯಂತ್ರಣ ತಪ್ಪಿ ತುಂಗಭದ್ರಾ ಎಡದಂಡೆ ಉಪ ಕಾಲುವೆಯಲ್ಲಿ (Road Accident) ಪಲ್ಟಿಯಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ (woman death) ಸಾವನ್ನಪ್ಪಿದ್ದು, 6 ಜನರಿಗೆ ಗಾಯಗಳಾಗಿರುವ (injured) ಘಟನೆ ರಾಯಚೂರು (Raichur news) ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಗಂಗಮ್ಮ (40) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಆರು ಜನರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗೆ ರಾಯಚೂರಿಗೆ ದಾಖಲಿಸಲಾಗಿದೆ.
ಭತ್ತದ ರಾಶಿ ಮಾಡಲು ಕೂಲಿಕಾರರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಘಟನೆ ತಿಳಿಯುತ್ತಲೇ ಶಾಸಕ, ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್. ಬಸನಗೌಡ ತುರ್ವಿಹಾಳ ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಜಿಲ್ಲಾ ವೈದ್ಯಾಧಿಕಾರಿಗಳ ಜೊತೆ ದೂರವಾಣಿಯಲ್ಲಿ ಮಾತನಾಡಿ ರಾಯಚೂರಿಗೆ ಬಂದ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.
ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಂಡಕ್ಟರ್ ಪೊಲೀಸ್ ವಶಕ್ಕೆ
ಮಂಗಳೂರು: ಮಂಗಳೂರಿನ (Mangaluru) ಕೆಎಸ್‌ಆರ್‌ಟಿಸಿ ಬಸ್‌ವೊಂದರಲ್ಲಿ ಯುವತಿಯೊಬ್ಬರಿಗೆ ಬಸ್ ಕಂಡಕ್ಟರ್ (KSRTC bus conductor) ಲೈಂಗಿಕ ಕಿರುಕುಳ (Harassment) ನೀಡಿದ ಘಟನೆ ನಡೆದಿದ್ದು , ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಂಗಳೂರಿನ ಮುಡಿಪು -ಸ್ಟೇಟ್ ಬ್ಯಾಂಕ್ ಭಾಗದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಈ ಘಟನೆ ಸಂಭವಿಸಿದೆ. ಕಂಡಕ್ಟರ್ ಪ್ರದೀಪ್ ಎಂಬಾತ ಯುವತಿಯ ಪಕ್ಕದಲ್ಲಿ ನಿಂತು ಅವರ ಖಾಸಗಿ ಅಂಗಕ್ಕೆ ಕೈ ಹಾಕಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆಯನ್ನು ಸಹ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಈ ಕೃತ್ಯದಿಂದ ಸಾರ್ವಜನಿಕರಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಮಂಗಳೂರು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಕ ರಾಜೇಶ್ ಶೆಟ್ಟಿ ಕ್ರಮ ಕೈಗೊಂಡಿದ್ದಾರೆ. ಆರೋಪಿ ಕಂಡಕ್ಟರ್ ಪ್ರದೀಪ್‌ನನ್ನು ಅಮಾನತುಗೊಳಿಸಲಾಗಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಪೊಲೀಸ್ ತನಿಖೆಗೆ ಒಪ್ಪಿಸಲಾಗಿದೆ. ಸಾರ್ವಜನಿಕರು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಮಹಿಳೆಯರ ಸುರಕ್ಷತೆಗಾಗಿ ಬಸ್‌ಗಳಲ್ಲಿ ಸಿಸಿಟಿವಿ ಕ್ಯಾಮರಾಗಳ ಸ್ಥಾಪನೆ ಮತ್ತು ಕಠಿಣ ಕಾನೂನು ಕ್ರಮಗಳನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: Om Prakash Murder Case: ಓಂ ಪ್ರಕಾಶ್ ಹತ್ಯೆ ಕೇಸ್, ಆರೋಪಿ ಪಲ್ಲವಿ 7 ದಿನ ಸಿಸಿಬಿ ಕಸ್ಟಡಿಗೆ