ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Raichur News: ಪತಿಯನ್ನು ಪತ್ನಿ ನದಿಗೆ ತಳ್ಳಿದ ಕೇಸ್‌; ಬಾಲ್ಯವಿವಾಹವಾಗಿದ್ದ ತಾತಪ್ಪ ಅರೆಸ್ಟ್‌

Raichur child marriage Case: ಜು.21 ರಂದು ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ತಾತಪ್ಪನನ್ನು ರಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿರುವ ಪೊಲೀಸರು, ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ.

ಪತಿಯನ್ನು ನದಿಗೆ ತಳ್ಳಿದ ಕೇಸ್‌; ಬಾಲ್ಯವಿವಾಹವಾಗಿದ್ದ ತಾತಪ್ಪ ಅರೆಸ್ಟ್‌

Prabhakara R Prabhakara R Aug 3, 2025 9:18 PM

ರಾಯಚೂರು: ಪತಿಯನ್ನು ಪತ್ನಿಯೇ ನದಿಗೆ ತಳ್ಳಿದ ಪ್ರಕರಣಕ್ಕೆ ಸಂಬಂಧಿಸಿ ಬಾಲ್ಯವಿವಾಹ ಆರೋಪದಲ್ಲಿ ತಾತಪ್ಪನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ರಾಯಚೂರಿನ ಗುರ್ಜಾಪುರ ಬ್ಯಾರೇಜ್ ಬಳಿ ಪತ್ನಿಯೇ ಪತಿಯನ್ನು ಕೃಷ್ಣಾ ನದಿಗೆ ತಳ್ಳಿದ ಆರೋಪ ಕೇಳಿಬಂದಿತ್ತು. ಬಳಿಕ ಪತಿ ತಾತಪ್ಪ ಮೇಲೆ ಪೋಕ್ಸೊ ಹಾಗೂ ಬಾಲ್ಯ ವಿವಾಹ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿ ತಾತಪ್ಪನನ್ನು ಇದೀಗ ರಾಯಚೂರಿನಲ್ಲಿ (Raichur News) ಪೊಲೀಸರು ಬಂಧಿಸಿದ್ದಾರೆ.

ಜು.21 ರಂದು ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ತಾತಪ್ಪನನ್ನು ರಿಮ್ಸ್ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆಗೆ ಒಳಪಡಿಸಿರುವ ಪೊಲೀಸರು, ವಿಚಾರಣೆ ಬಳಿಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ.

ಇನ್ನು ಅಪ್ರಾಪ್ತೆಯ ಶಿಕ್ಷಣಕ್ಕೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರಿ ಯೋಜನೆಗಳ ಅಡಿ ಕೂಡಲೇ ಕ್ರಮಕೈಗೊಳ್ಳಬೇಕು, ಆ ಬಗ್ಗೆ ಆಯೋಗಕ್ಕೆ ವರದಿ ಕೊಡಬೇಕು ಅಂತ ರಾಯಚೂರು ಹಾಗೂ ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳ ಅಧಿಕಾರಿಗಳಿಗೆ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಸದಸ್ಯ ಶಶಿಧರ್ ಕೋಸಂಬೆ ಸೂಚಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Murder Case: ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆ: ಒಂದು ವರ್ಷದ ಬಳಿಕ ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ?

ವಿದ್ಯಾರ್ಥಿನಿಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ ಪಿಜಿ ಮಾಲೀಕ ಬಂಧನ

Physical Assault (1)

ಬೆಂಗಳೂರು: ರಾಜ್ಯದಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಪಿ.ಜಿ (Physical Assault) ಮಾಲೀಕನೊಬ್ಬ ಪಿಜಿಗೆ ಸೇರಿಕೊಂಡಿದ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿ ಅಶ್ರಫ್​ನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಕಳೆದ 10 ದಿನಗಳ ಹಿಂದೆ ಪಿಜಿಗೆ ಬಂದು ಸೇರಿದ್ದಳು. ಶನಿವಾರ ತಡರಾತ್ರಿ ಕಾರಿನಲ್ಲಿ ವಿದ್ಯಾರ್ಥಿನಿಯನ್ನು ಪಿಜಿ ಮಾಲೀಕ ಅಶ್ರಫ್​​ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರವೆಸಗಿದ್ದಾನೆ. ಸದ್ಯ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿ ಅಶ್ರಫ್‌ನನ್ನು ಬಂಧಿಸಲಾಗಿದೆ.