ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka weather: ಇಂದಿನ ಹವಾಮಾನ; ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನ ಹವಾಮಾನ; ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ!

Profile Prabhakara R Jun 29, 2025 6:00 AM

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಜೂನ್‌ 29ರಂದು ಗುಡುಗು ಸಹಿತ ಮಳೆ (Karnataka Weather) ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. 40-50 ಕಿ.ಮೀ.ನೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆ ಇದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಭಾನುವಾರ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದ‌ರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜೂನ್‌ 30ರಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಬೀದ‌ರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 1ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೋಲಾರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 2ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಸಾಧಾರಣ ಮಳೆಯಾಗಲಿದೆ. ಇನ್ನು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನೂ ಓದಿ | Health Tips: ರಕ್ತದೊತ್ತಡವನ್ನು ನಿಯಂತ್ರಿಸಲು ಈ ಆಹಾರ ಕ್ರಮ ಅಳವಡಿಸಿ

ಜುಲೈ 3 ಮತ್ತು 4ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಸಾಧಾರಣ ಮಳೆ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.