ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Ramanagara Car Accident: ಟೈರ್‌ ಸ್ಫೋಟಗೊಂಡು ಮರಕ್ಕೆ ಡಿಕ್ಕಿಯಾದ ಕಾರು; ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರ ಸಾವು

ಕುಣಿಗಲ್‌ನಲ್ಲಿ ಆ್ಯಕ್ಟಿವಿಟಿ ಕ್ಲಾಸ್‌ ಇದ್ದ ಹಿನ್ನೆಲೆ ಇಬ್ಬರು ಯುವಕರು, ನಾಲ್ವರು ಯುವತಿಯರು ಸೇರಿ 6 ಮಂದಿ ಬೆಂಗಳೂರಿನಿಂದ ಕುಣಿಗಲ್‌ಗೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಮಾಗಡಿ ತಾಲೂಕಿನ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಮರಕ್ಕೆ ಕಾರು ಡಿಕ್ಕಿಯಾಗಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರ ಸಾವು

-

Prabhakara R
Prabhakara R Nov 17, 2026 4:56 PM

ರಾಮನಗರ: ಟೈರ್‌ ಸ್ಫೋಟಗೊಂಡ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿಯಾಗಿದ್ದರಿಂದ (Ramanagara Car Accident) ಬೆಂಗಳೂರಿನ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತಪಟ್ಟಿರುವುದು ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ.

ಗಾನವಿ (20), ವೈಷ್ಣವಿ (20) ಮೃತ ವಿದ್ಯಾರ್ಥಿಗಳು. ಕುಣಿಗಲ್‌ನಲ್ಲಿ ಆ್ಯಕ್ಟಿವಿಟಿ ಕ್ಲಾಸ್‌ ಇದ್ದ ಹಿನ್ನೆಲೆ ಇಬ್ಬರು ಯುವಕರು, ನಾಲ್ವರು ಯುವತಿಯರು ಸೇರಿ 6 ಮಂದಿ ಬೆಂಗಳೂರಿನಿಂದ ಕುಣಿಗಲ್‌ಗೆ ತೆರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಅಪಘಾತದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೇ, ನಾಲ್ವರ ಸ್ಥಿತಿ ಗಂಭೀರವಾಗಿದೆ. ಈ ಪೈಕಿ ಇಬ್ಬರು ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದು, ಇನ್ನಿಬ್ಬರಿಗೆ ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.