ರೇಷನ್ ಕಾರ್ಡ್ ಇ-ಕೆವೈಸಿ ಕಡ್ಡಾಯ: ಕೊನೆಯ ದಿನ ಯಾವಾಗ? ಹೇಗೆ ಮಾಡಿಸಬೇಕು? ಇಲ್ಲಿದೆ ಮಾಹಿತಿ
Ration Card e-KYC: ರಾಜ್ಯದ ಬಿಪಿಎಲ್ (BPL) ಎಪಿಎಲ್ (APL) ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತ್ಯಂತ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಸರ್ಕಾರದ ನಿಯಮಾವಳಿಗಳ ಪ್ರಕಾರ, ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರೂ ತಮ್ಮ ಆಧಾರ್ ಸಂಖ್ಯೆಯೊಂದಿಗೆ ಇ-ಕೆವೈಸಿ ಮಾಡಿಸುವುದು ಅತ್ಯಗತ್ಯ.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದ ಬಿಪಿಎಲ್ (BPL) ಎಪಿಎಲ್ (APL) ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಗ್ರಾಹಕರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತ್ಯಂತ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರೂ ತಮ್ಮ ಆಧಾರ್ ಇ-ಕೆವೈಸಿ (e-KYC) ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.
ಸರ್ಕಾರದ ನಿಯಮಾವಳಿಗಳ ಪ್ರಕಾರ, ಪಡಿತರ ಚೀಟಿಯಲ್ಲಿ ಹೆಸರಿರುವ ಪ್ರತಿಯೊಬ್ಬ ಸದಸ್ಯರೂ ತಮ್ಮ ಆಧಾರ್ ಸಂಖ್ಯೆಯೊಂದಿಗೆ ಇ-ಕೆವೈಸಿ ಮಾಡಿಸುವುದು ಅತ್ಯಗತ್ಯ. ಒಂದು ವೇಳೆ ನಿಗದಿತ ಅವಧಿಯೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ, ಅಂತಹ ಸದಸ್ಯರ ಹೆಸರುಗಳನ್ನು ರೇಷನ್ ಕಾರ್ಡ್‌ನಿಂದ ತೆಗೆದುಹಾಕುವ ಅಥವಾ ಕಾರ್ಡ್ ಅಮಾನತುಗೊಳಿಸುವ ಸಾಧ್ಯತೆ ಇರುತ್ತದೆ. ಸೆಪ್ಟೆಂಬರ್ 30, 2026 ಕೊನೆಯ ದಿನಾಂಕವಾಗಿದ್ದು, ನಿಗದಿತ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಅಂತಹ ಸದಸ್ಯರ ಹೆಸರನ್ನು ರೇಷನ್ ಕಾರ್ಡ್‌ನಿಂದ ಕೈಬಿಡಲಾಗುವುದು. ಅಲ್ಲದೆ ಅವರಿಗೆ ಸಿಗುವ ಉಚಿತ ಅಕ್ಕಿ ಮತ್ತು ಅನ್ನಭಾಗ್ಯ ಯೋಜನೆಯ ನಗದು ವರ್ಗಾವಣೆ ಹಣ ಸ್ಥಗಿತಗೊಳ್ಳಲಿದೆ ಎಂದು ಇಲಾಖೆ ಎಚ್ಚರಿಸಿದೆ.
ಇ ಕೆವೈಸಿ ಮಾಡಿಸುವುದು ಹೇಗೆ?
ಆಫ್‌ಲೈನ್ ವಿಧಾನ:
ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ (Ration Shop) ಭೇಟಿ ನೀಡಿ.ಕುಟುಂಬದ ಎಲ್ಲಾ ಸದಸ್ಯರು ತಮ್ಮ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಸಂಖ್ಯೆಯನ್ನು ತೆಗೆದುಕೊಂಡು ಹೋಗಬೇಕು. ಅಲ್ಲಿನ ವಿತರಕರು ನಿಮ್ಮ ಬಯೋಮೆಟ್ರಿಕ್ (ಬೆರಳು ಗುರುತು ಅಥವಾ ಕಣ್ಣಿನ ಸ್ಕ್ಯಾನ್) ಪಡೆದು ಇ-ಕೆವೈಸಿ ಪ್ರಕ್ರಿಯೆಯನ್ನು ಉಚಿತವಾಗಿ ಪೂರ್ಣಗೊಳಿಸಿಕೊಡುತ್ತಾರೆ.
LPG ಇ-ಕೆವೈಸಿ ಪೂರ್ಣಗೊಳಿಸಲು ಇಂದೇ ಕೊನೆ ದಿನ; ಮಾಡದಿದ್ದರೆ ದುಬಾರಿಯಾಗಲಿದೆ ಸಿಲಿಂಡರ್!
ಆನ್‌ಲೈನ್ ವಿಧಾನ (ಮೊಬೈಲ್ ಮೂಲಕ):
- ನಿಮ್ಮ ಆಧಾರ್ ಕಾರ್ಡ್‌ಗೆ ಸಕ್ರಿಯ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ದರೆ, ನೀವು ಮನೆಯಲ್ಲೇ ಕುಳಿತು ಮೊಬೈಲ್ ಮೂಲಕವೂ ಮಾಡಬಹುದು
- ಗೂಗಲ್ ಪ್ಲೇ ಸ್ಟೋರ್‌ನಿಂದ Mera Ration ಅಪ್ಲಿಕೇಶನ್ ಹಾಗೂ Aadhaar FaceRD ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಿ.
- ಆಪ್‌ನಲ್ಲಿ 'Aadhaar Seeding' ಅಥವಾ ಇ-ಕೆವೈಸಿ ಆಯ್ಕೆಯನ್ನು ಆರಿಸಿ, ನಿಮ್ಮ ರೇಷನ್ ಕಾರ್ಡ್ ಮತ್ತು ಆಧಾರ್ ವಿವರಗಳನ್ನು ನಮೂದಿಸಿ.
- ಒಟಿಪಿ (OTP) ಅಥವಾ ಫೇಸ್ ಅಥೆಂಟಿಕೇಶನ್ (ಮುಖದ ಗುರುತು) ಮೂಲಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ಗ್ರಾಹಕರು ತಮ್ಮ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಲು ಅಥವಾ ಹೆಚ್ಚಿನ ಮಾಹಿತಿ ಪಡೆಯಲು ಇಲಾಖೆಯ ಅಧಿಕೃತ ವೆಬ್‌ಸೈಟ್ ahara.karnataka.gov.in ಗೆ ಭೇಟಿ ನೀಡಬಹುದು. ಯಾವುದೇ ದೂರು ಅಥವಾ ತಾಂತ್ರಿಕ ತೊಂದರೆಗಳಿದ್ದಲ್ಲಿ ಸರ್ಕಾರದ ಉಚಿತ ಸಹಾಯವಾಣಿ ಸಂಖ್ಯೆ 1967 ಕ್ಕೆ ಕರೆ ಮಾಡಲು ಕೋರಲಾಗಿದೆ.