ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

HD Kumaraswamy: ಪಂದ್ಯ ಆರಂಭಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿತ್ತಾ RCB?

Bengaluru Stampede: ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಆರ್ಸಿಬಿ ವಿಜಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಆರ್ಸಿಬಿ ಮ್ಯಾನೇಜ್ಮೆಂಟ್ ಮನವಿ ಮಾಡಿತ್ತು ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆರ್‌ಸಿಬಿ ಗೆಲುವಿನ ಬಗ್ಗೆ ಮ್ಯಾನೇಜ್‌ಮೆಂಟ್‌ಗೆ ಹೇಗೆ ತಿಳಿದಿತ್ತು ಎಂದು ಹೆಚ್‌.ಡಿ. ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಪಂದ್ಯಕ್ಕೂ ಮುನ್ನವೇ ವಿಜಯೋತ್ಸವಕ್ಕೆ ಅನುಮತಿ ಕೇಳಿತ್ತಾ  RCB?

Profile Rakshita Karkera Jun 8, 2025 7:53 AM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆರ್‌ಸಿಬಿ(RCB) ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ(HD Kumaraswamy) ಹೊಸ ಬಾಂಬ್‌ ಸಿಡಿದ್ದಾರೆ. ಐಪಿಎಲ್ ಫೈನಲ್ ಪಂದ್ಯ ಆರಂಭಕ್ಕೂ ಮುನ್ನವೇ ಆರ್ಸಿಬಿ ವಿಜಯೋತ್ಸವ ಆಚರಿಸಲು ಅನುಮತಿ ನೀಡುವಂತೆ ಆರ್ಸಿಬಿ ಮ್ಯಾನೇಜ್ಮೆಂಟ್ ಮನವಿ ಮಾಡಿತ್ತು ಎಂಬ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಆರ್‌ಸಿಬಿ ಗೆಲುವಿನ ಬಗ್ಗೆ ಮ್ಯಾನೇಜ್‌ಮೆಂಟ್‌ಗೆ ಹೇಗೆ ತಿಳಿದಿತ್ತು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂದ್ಯವು ಸಂಜೆ 7.30 ಕ್ಕೆ ಪ್ರಾರಂಭವಾಗಬೇಕಿತ್ತು, ಆದರೆ ಪಂದ್ಯದ ದಿನದಂದು ಸಂಜೆ 6 ಗಂಟೆ ಸುಮಾರಿಗೆ ಆರ್ಸಿಬಿ ಮ್ಯಾನೇಜ್ಮೆಂಟ್ ವಿಜಯೋತ್ಸವಕ್ಕೆ ಅನುಮತಿ ಕೋರಿ ವಿನಂತಿಯನ್ನು ಸಲ್ಲಿಸಿರುವುದು ಆಶ್ಚರ್ಯಕರವಾಗಿದೆ. ಇದು ಹೇಗೆ ಸಾಧ್ಯ? ತಮ್ಮ ತಂಡ ಗೆಲ್ಲುತ್ತದೆ ಎಂದು ಆರ್ಸಿಬಿ ಮ್ಯಾನೇಜ್ಮೆಂಟ್ಗೆ ಮೊದಲೇ ಹೇಗೆ ತಿಳಿದಿತ್ತು? ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಕೋರಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಮನವಿ ಸಲ್ಲಿಸಿರುವ ಬಗ್ಗೆಯೂ ಕುಮಾರಸ್ವಾಮಿ ಪ್ರಸ್ತಾಪಿಸಿದರು.

ಈ ಸುದ್ದಿಯನ್ನೂ ಓದಿ: Bengaluru Stampede: RCB ಮ್ಯಾನೇಜ್‌ಮೆಂಟ್‌ ಮಾಡಿದ ಆ ಒಂದು ತಪ್ಪು 11 ಜನರ ಜೀವವನ್ನೇ ಬಲಿ ಪಡೆಯಿತಾ? ತನಿಖೆಯಲ್ಲಿ ಗೊತ್ತಾಗಿದ್ದೇನು?

ಇದೇ ವೇಳೆ ಅವರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಆರ್‌ಸಿಬಿ ವಿಜಯೋತ್ಸವ ಆಚರಣೆಗೆ ಪೊಲೀಸರ ಮೇಲೆ ಒತ್ತಡ ಹೇರಿದವರು ಯಾರು ಎಂಬುದು ಎಲ್ಲರಿಗೂ ತಿಳಿದೇ ಇದೆ. ಇಲ್ಲಿ ರಾಜಕೀಯ ಮಾಡುವ ಉದ್ದೇಶ ನಮಗಿಲ್ಲ. ನಾನು ವಾಸ್ತವಾಂಶ ಹೇಳುತ್ತಿದ್ದೇನೆ ಅಷ್ಟೇ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಎಂಎಲ್ಸಿ ಕೆ.ಗೋವಿಂದರಾಜ್ ಅವರನ್ನು ತೆಗೆದುಹಾಕಿದ ಬಗ್ಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಇದು ‘ಉತ್ತಮ ನಿರ್ಧಾರ’ ಮತ್ತು ‘ಅಂತಿಮವಾಗಿ ತನ್ನ ತಪ್ಪನ್ನು ಅರಿತುಕೊಂಡಿದ್ದಕ್ಕಾಗಿ ಸರ್ಕಾರವನ್ನು ಅಭಿನಂದಿಸುತ್ತೇನೆ’ ಎಂದು ಹೇಳಿದರು.