ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

N Ravikumar: ಸಿಎಸ್‌ ಬಗ್ಗೆ ಅವಹೇಳನದ ಮಾತು, ಬಿಜೆಪಿಯ ರವಿಕುಮಾರ್‌ ಮೇಲೆ ಕೇಸ್‌

N Ravikumar: ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಪರಿಷತ್​ ವಿಪಕ್ಷ ಮುಖ್ಯ ಸಚೇತಕ ಎನ್​ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಸುದ್ದಿಯಾಗಿತ್ತು.

ಸಿಎಸ್‌ ಬಗ್ಗೆ ಅವಹೇಳನದ ಮಾತು, ಬಿಜೆಪಿಯ ರವಿಕುಮಾರ್‌ ಮೇಲೆ ಕೇಸ್‌

ಹರೀಶ್‌ ಕೇರ ಹರೀಶ್‌ ಕೇರ Jul 3, 2025 7:50 AM

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ (Karnataka Government Chief Secretary) ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್​. ರವಿಕುಮಾರ್ (N Ravikumar) ವಿರುದ್ಧ ಕೆಪಿಸಿಸಿ (KPCC) ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಎನ್​ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಪರಿಷತ್​ ವಿಪಕ್ಷ ಮುಖ್ಯ ಸಚೇತಕ ಎನ್​ ರವಿಕುಮಾರ್ ಅವರು ʼರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆʼ ಎಂದಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ವಿಧಾನ ಪರಿಷತ್​ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟಿಸುತ್ತಿರುವ ವೇಳೆ ಉಪ ಪೊಲೀಸ್​ ಆಯುಕ್ತ (ವಿಧಾನಸೌಧ ಭದ್ರತೆ) ಎಂ ಎನ್​ ಕರಿಬಸವನಗೌಡ ಅವರೊಂದಿಗೆ ಮಾತನಾಡುತ್ತಿರುವಾಗ ರವಿಕುಮಾರ್ ಈ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.

ಮೇ 24 ರಂದು ಬಿಜೆಪಿಯ ಕಲಬುರಗಿ ಚಲೋ ಪ್ರತಿಭಟನೆ ವೇಳೆ ಆಯೋಜಿಸಲಾದ ಪ್ರತಿಭಟನಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ರವಿಕುಮಾರ್, ʻʻಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು (ಕಾಂಗ್ರೆಸ್) ಹೇಳುವುದನ್ನು ಸಹ ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲʼʼ ಎಂದು ಹೇಳಿದ್ದರು. ಈ ವೇಳೆ ಜನರ ಚಪ್ಪಾಳೆಗೆ ಪ್ರತಿಕ್ರಿಯಿಸಿ, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದೂ ಅವಹೇಳನ ಮಾಡಿದ್ದರು. ಈ ಹೇಳಿಕೆ ಬಳಿಕ ಕಾಂಗ್ರೆಸ್​ ನಾಯಕರು ರಾಜ್ಯಪಾಲ ಮತ್ತು ಸಭಾಪತಿಗಳಿಗೆ ದೂರು ನೀಡಿದ್ದರು.

ಇದನ್ನೂ ಓದಿ: N. Ravikumar: ಡಿಸಿ ಬಗ್ಗೆ ಅವಹೇಳನಕಾರಿ ಹೇಳಿಕೆ; ಎಂಎಲ್‌ಸಿ ಎನ್.ರವಿಕುಮಾರ್ ವಿಚಾರಣೆಗೆ ಹಾಜರು