Kukke Subrahmanya: ಕುಕ್ಕೆ ಸುಬ್ರಹ್ಮಣ್ಯದ ಆದಾಯದಲ್ಲಿ ಭಾರಿ ಹೆಚ್ಚಳ, ರಾಜ್ಯಕ್ಕೆ ನಂಬರ್ ವನ್
ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು 155.95 ಕೋಟಿ ರೂ ಆದಾಯವಾಗಿದೆ. ದೇವಸ್ಥಾನದ ಒಟ್ಟು ಖರ್ಚು 79.82 ಕೋಟಿ ರೂ.

ಕುಕ್ಕೆ ಸುಬ್ರಹ್ಮಣ್ಯ

ಮಂಗಳೂರು: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya) ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ (Revenue) 155.95 ಕೋಟಿ ರೂ.ಗೆ ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ (income) 146.01 ಕೋಟಿ ರೂ. ಆಗಿತ್ತು. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ. ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.
ವರ್ಷದಿಂದ ವರ್ಷಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಬಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಪ್ರಥಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳವಾಗಿದೆ ಎನ್ನಲಾಗುತ್ತಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯಡಿ ಬರುತ್ತದೆ. ಇನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು 155.95 ಕೋಟಿ ರೂ ಆದಾಯವಾಗಿದೆ. ದೇವಸ್ಥಾನದ ಒಟ್ಟು ಖರ್ಚು 79.82 ಕೋಟಿ ರೂ.
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವರ್ಷವಾರು ಆದಾಯ
2011-12 ರಲ್ಲಿ 56.24 ಕೋಟಿ ರೂ.
2020-21ರಲ್ಲಿ 68.94 ಕೋಟಿ ರೂ.
2021-22 ರಲ್ಲಿ 72.73 ಕೋಟಿ ರೂ.
2022-23ರಲ್ಲಿ 123 ಕೋಟಿ ರೂ.
2023-24 146.01 ಕೋಟಿ ರೂ.
ಅತೀ ಹೆಚ್ಚು ಆದಾಯ ಗಳಿಸುವ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪ್ರಥಮ ಸ್ಥಾನದಲ್ಲಿದ್ದರೆ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನ ಎರಡನೇ ಸ್ಥಾನದಲ್ಲಿದೆ. ಈ ದೇವಸ್ಥಾನದ ಆದಾಯ 31 ಕೋಟಿ ರೂ. ಅದೇ ರೀತಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 20 ಕೋಟಿ ರೂ.ಗಳ ಅಂದಾಜು ಆದಾಯದೊಂದಿಗೆ ಮೂರನೇ ಸ್ಥಾನದಲ್ಲಿದೆ.
ಇದನ್ನೂ ಓದಿ: Post Office Monthly Income Scheme: ಪ್ರತಿ ತಿಂಗಳು 9,250 ರೂ. ಆದಾಯ ಪಡೆಯಲು ಈ ಯೋಜನೆಯಲ್ಲಿ ಹೂಡಿಕೆ ಮಾಡಿ