ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಬಸವನ ಬಾಗೇವಾಡಿ ಸಮೀಪ ಭೀಕರ ಅಪಘಾತ, 6 ಮಂದಿ ದುರ್ಮರಣ

Road Accident: ವಿಜಯಪುರದ ಕಡೆಗೆ ತೆರಳುತ್ತಿದ್ದ ಮಹಿಂದ್ರಾ ಕಾರ್‌ ಡಿವೈಡರ್‌ ಮೇಲೆ ಹಾರಿ ಎದುರಿಗೆ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ.

ಬಸವನ ಬಾಗೇವಾಡಿ ಸಮೀಪ ಭೀಕರ ಅಪಘಾತ, 6 ಮಂದಿ ದುರ್ಮರಣ

ಹರೀಶ್‌ ಕೇರ ಹರೀಶ್‌ ಕೇರ May 21, 2025 12:35 PM

ವಿಜಯಪುರ: ವಿಜಯಪುರ (Vijayapura news) ಜಿಲ್ಲೆಯ ಬಸವನ ಬಾಗೇವಾಡಿ ಸಮೀಪ ಮನಗೂಳಿ ಎಂಬಲ್ಲಿ ಇಂದು ಮುಂಜಾನೆ ಖಾಸಗಿ ಬಸ್, ಯುವಿ ಕಂಟೈನರ್‌ ಹಾಗೂ ಕಾರಿನ ಮಧ್ಯೆ ಭೀಕರ ರಸ್ತೆ ಅಪಘಾತ (Road Accident news) ಸಂಭವಿಸಿದ್ದು, ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಬ್ಬ ವ್ಯಕ್ತಿ ಆಸ್ಪತ್ರೆಗೆ ದಾಖಲಿಸಿದ ನಂತರ ಕೊನೆಯುಸಿರೆಳೆದಿದ್ದಾರೆ. ಅಪಘಾತದಲ್ಲಿ ಅನೇಕರಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ಮಾಡಿದ ಪೋಲಿಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಲು ವ್ಯವಸ್ಥೆ ಕಲ್ಪಿಸಿದ್ದಾರೆ.

ವಿಜಯಪುರದ ಕಡೆಗೆ ತೆರಳುತ್ತಿದ್ದ ಮಹಿಂದ್ರಾ ಕಾರ್‌ ಡಿವೈಡರ್‌ ಮೇಲೆ ಹಾರಿ ಎದುರಿಗೆ ಚಲಿಸುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದೆ. ಬಸ್‌ ಚಾಲಕನಿಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೆ ಆತ ಸಾವನ್ನಪ್ಪಿದ್ದಾನೆ. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಯಾವುದೇ ತೊಂದರೆಗಳಾಗಿಲ್ಲ ಎನ್ನಲಾಗಿದೆ.

ಮಹಿಂದ್ರಾ ಕಾರಿನಲ್ಲಿ ತೆಲಂಗಾಣ ಮೂಲದ ಪಿ ಭಾಸ್ಕರ್ ಎನ್ನುವವರ ಕುಟುಂಬದವರು ಪ್ರಯಾಣಿಸುತ್ತಿದ್ದರು. ಮುರುಡೇಶ್ವರ ಸೇರಿದಂತೆ ವಿವಿಧ ಪ್ರವಾಸಿ ತಾಣಗಳನ್ನು ನೋಡಿಕೊಂಡು ಮರಳಿ ಬರುವಾಗ ಈ ಘಟನೆ ಸಂಭವಿಸಿದೆ. ಭಾಸ್ಕರ್ ಅವರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಗ್ರಾಮದ ಶಾಖೆಯ ಕೆನರಾ ಬ್ಯಾಂಕ್​​ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಕುಟುಂಬದ ಸದಸ್ಯರೊಂದಿಗೆ ದಕ್ಷಿಣ ಕರ್ನಾಟಕದ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಣೆ ಮಾಡಿಕೊಂಡು ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಟಿ ಭಾಸ್ಕರ್ ಹಾಗೂ ಕುಟುಂಬದ ಪವಿತ್ರ, ಅಭಿರಾಮ್ ಹಾಗೂ ಜೋಶ್ನಾ ಎಂಬವರು ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕ ಹೊರ್ತಿ ಗ್ರಾಮದ ವಿಕಾಸ್ ಮಣಿ ಕೂಡ ಸಾವಿಗೀಡಾಗಿದ್ದಾರೆ. ಕಾರಿನಲ್ಲಿದ್ದ 10 ವರ್ಷದ ಬಾಲಕ ಅಪಾಯದಿಂದ ತಪ್ಪಿಸಿಕೊಂಡಿದ್ದಾನೆ. ಆತನನ್ನು ಆಸ್ಪತ್ರೆಗೆ ಸೇರಿಸಿ ಸೂಕ್ತ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬಸ್ಸು ಮುಂಬೈಯಿಂದ ಬಳ್ಳಾರಿ ಕಡೆಗೆ ಹೋಗುತ್ತಿತ್ತು ಬಸ್​​ನಲ್ಲಿದ್ದ ಸಂಚರಿಸುತ್ತಿದ್ದ ಪ್ರಯಾಣಿಕರನ್ನು ಅಪಘಾತ ಸಂಭವಿಸಿದ ಮೇಲೆ ಬೇರೆ ಬಸ್​​​ನಲ್ಲಿ ಕಳುಹಿಸಿಕೊಡಲಾಗಿದೆ. ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: Car Accident: ಆಂಧ್ರದಲ್ಲಿ ಭೀಕರ ಕಾರು ಅಪಘಾತ; ಚಿ.ನಾ.ಹಳ್ಳಿ ತಾಪಂ ಮಾಜಿ ಅಧ್ಯಕ್ಷ ಸೇರಿ ಮೂವರ ದುರ್ಮರಣ