Road Accident: ದೊಡ್ಡಬಳ್ಳಾಪುರದಲ್ಲಿ ಕಾರು ಅಪಘಾತ, ನಾಲ್ವರು ಸಾವು
Road Accident : ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಮೃತ ದೇಹಗಳು ರಸ್ತೆಯ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನುಳಿದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ.


ಬೆಂಗಳೂರು: ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲೂಕಿನ ಮಾಕಳಿ ಎಂಬಲ್ಲಿ ಭೀಕರವಾದ ರಸ್ತೆ ಅಪಘಾತ (Road Accident) ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಅಸುನೀಗಿದ್ದಾರೆ. ದೊಡ್ಡಬಳ್ಳಾಪುರದ ಮಾಕಳಿ ಬಳಿಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಇನ್ನೋವಾ ಕಾರು ಪಲ್ಟಿಯಾಗಿದೆ. ಬೆಳಿಗ್ಗೆ ದೇವಸ್ಥಾನಕ್ಕೆ ಕಾರಿನಲ್ಲಿ ಎಂಟು ಜನರು ತೆರಳುತ್ತಿದ್ದರು. ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಇನ್ನುಳಿದ ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ.
ಈಶ್ವರಪ್ಪ, ಪುರುಷೋತ್ತಮ, ಕಾಳಪ್ಪ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಮೃತ ದೇಹಗಳು ರಸ್ತೆಯ ಮೇಲೆ ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಳೆ ಬರುತ್ತಿದ್ದುದರಿಂದ ಕಾರು ಚಾಲಕನ ನಿಯಂತ್ರಣಕ್ಕೆ ಸಿಕ್ಕದೆ ರಸ್ತೆಯಂಚಿಗೆ ಸರಿದು ಪಲ್ಟಿಯಾಗಿದೆ ಎಂದು ತರ್ಕಿಸಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ವಾರ್ಡ್‌ನಲ್ಲಿ ಬೆಂಕಿ ಆಕಸ್ಮಿಕ, ರೋಗಿಗಳು ಪಾರು
ಬೆಂಗಳೂರು: ರಾಜಧಾನಿಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಅಗ್ನಿ ಅವಘಡ (Fire accident) ಸಂಭವಿಸಿದ್ದು, ಒಟ್ಟು 26 ರೋಗಿಗಳು ಇದ್ದ ವಾರ್ಡ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹಾಗೂ ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ವೈದ್ಯರು ಹಾಗೂ ಸಿಬ್ಬಂದಿ ದಿಢೀರ್ ಕಾರ್ಯಾಚರಣೆ ನಡೆಸಿ ಎಲ್ಲಾ ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಿದ್ದಾರೆ. ಅಗ್ನಿ ಅವಘಡದಿಂದ ಅದೃಷ್ಟವಶಾತ್ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ವರದಿ ಆಗಿದೆ.
ವಿಕ್ಟೋರಿಯಾ ಆಸ್ಪತ್ರೆಯ ಸ್ವಿಚ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗುತ್ತಿದೆ. ಬರ್ನ್ ವಾರ್ಡ್ನ ಸೆಮಿನಾರ್ ಕೋಣೆಯಲ್ಲಿ ಬೆಂಕಿ ಹತ್ತಿಕೊಂಡಿತ್ತು. ಈ ವಾರ್ಡ್‌ನಲ್ಲಿ ಒಟ್ಟು 26 ರೋಗಿಗಳಿದ್ದರು. 14 ಪುರುಷರು, 5 ಮಹಿಳೆಯರು, 7 ಮಕ್ಕಳಿಗೆ ಪಕ್ಕದ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬರ್ನ್ಸ್ ವಾರ್ಡ್ ಮೊದಲ ಮಹಡಿಯಲ್ಲಿದ್ದ ಸೆಮಿನಾರ್ ಹಾಲ್ನಲ್ಲಿ ಬೆಂಕಿ ಹೊತ್ತಿಕೊಂಡ ವೇಳೆ ಪಕ್ಕದಲ್ಲೇ ಐದು ಮಂದಿ ಐಸಿಯುನಲ್ಲಿದ್ದರು. ಬೆಂಕಿ ಮತ್ತು ಹೊಗೆ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತ ವೈದ್ಯರು ಕೂಡಲೇ ಎಲ್ಲಾ ರೋಗಿಗಳನ್ನು ಹೆಚ್ ಬ್ಲಾಕ್‌ಗೆ ಶಿಫ್ಟ್ ಮಾಡಿದ್ದಾರೆ. ಕೋಡ್ ರೆಡ್ ಹೆಸರಲ್ಲಿ ದಿಢೀರ್ ರಕ್ಷಣಾ ಕಾರ್ಯ ನಡೆಸಲಾಗಿದೆ.
ಬರ್ನ್ಸ್ ವಾರ್ಡ್ ಅಧೀಕ್ಷಕರು, ವೈದ್ಯರು, ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿಕೊಂಡಿದ್ದ ಬೆಂಕಿ ನಂದಿಸುವ ಕಾರ್ಯ ಕೂಡ ನಡೆದಿದೆ. ರೋಗಿಗಳನ್ನು ಬೇರೆ ಬ್ಲಾಕ್‌ಗೆ ಶಿಫ್ಟ್ ಮಾಡಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Road Accident: ಕುಣಿಗಲ್‌ನಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ನಾಲ್ವರ ಸಾವು