S Suresh Kumar: ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿರುವವರೆಗೆ ಕಾಂಗ್ರೆಸ್‌ಗೆ ಭವಿಷ್ಯವಿಲ್ಲ: ಸುರೇಶ್ ಕುಮಾರ್
S Suresh Kumar: ಹಿಂದಿನ ಲೋಕಸಭಾ ವಿಪಕ್ಷ ನಾಯಕರ ಸಾಮರ್ಥ್ಯ, ತಿಳಿವಳಿಕೆ, ವಿಶ್ವಾಸಾರ್ಹತೆ, ಅಗತ್ಯ ಬಿದ್ದಾಗ ದೇಶಕ್ಕೆ, ಆಳುವ ಪಕ್ಷಕ್ಕೆ ಮಾರ್ಗದರ್ಶನ ಮಾಡುತ್ತಿದ್ದ ರೀತಿಯನ್ನು ಗಮನಿಸಿ ಹೋಲಿಸಿದರೆ, ಭಾರತದ ಲೋಕಸಭೆಯ ಒಂದು ದುರದೃಷ್ಟದಂತೆ ರಾಹುಲ್ ಗಾಂಧಿಯವರು ವಿಪಕ್ಷ ನಾಯಕರಾಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಟೀಕಿಸಿದ್ದಾರೆ.


ಬೆಂಗಳೂರು: ಭಾರತದ ಲೋಕಸಭೆಯ ಒಂದು ದುರದೃಷ್ಟದಂತೆ ರಾಹುಲ್ ಗಾಂಧಿಯವರು (Rahul Gandhi) ವಿಪಕ್ಷ ನಾಯಕರಾಗಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ (S Suresh Kumar) ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ರಚನಾತ್ಮಕತೆಯ ಅರಿವೇ ಇಲ್ಲ. ನಡೆ- ನುಡಿಯಲ್ಲಿ ವಿಶ್ವಾಸಾರ್ಹತೆ ಗಳಿಸದ ಒಬ್ಬ ವ್ಯಕ್ತಿ ಎಂದು ಆರೋಪಿಸಿದರು. ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಿ ಮುಂದುವರೆಯುವವರೆಗೆ ಕಾಂಗ್ರೆಸ್ಸಿಗೆ ಭವಿಷ್ಯವಿಲ್ಲ. ದೇಶಕ್ಕೆ ಹಿತ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಹಿಂದಿನ ಲೋಕಸಭಾ ವಿಪಕ್ಷ ನಾಯಕರ ಸಾಮರ್ಥ್ಯ, ತಿಳಿವಳಿಕೆ, ವಿಶ್ವಾಸಾರ್ಹತೆ, ಅಗತ್ಯ ಬಿದ್ದಾಗ ದೇಶಕ್ಕೆ, ಆಳುವ ಪಕ್ಷಕ್ಕೆ ಮಾರ್ಗದರ್ಶನ ಮಾಡುತ್ತಿದ್ದ ರೀತಿಯನ್ನು ಗಮನಿಸಿ ಹೋಲಿಸಿದರೆ, ಭಾರತದ ಲೋಕಸಭೆಯ ಒಂದು ದುರದೃಷ್ಟದಂತೆ ರಾಹುಲ್ ಗಾಂಧಿಯವರು ವಿಪಕ್ಷ ನಾಯಕರಾಗಿದ್ದಾರೆ ಎಂದು ಟೀಕಿಸಿದರು.
ಹಿಟ್ ಆಂಡ್ ರನ್, ಸ್ಪಿಟ್ ಆಂಡ್ ರನ್
ಫ್ರೀಡಂ ಪಾರ್ಕ್‌ನಲ್ಲಿ ರಾಹುಲ್ ಅವರು ಭಾಷಣ ಮಾಡಿದ್ದಾರೆ. ಅಲ್ಲಿಂದ ಚುನಾವಣಾ ಆಯೋಗದ ಕಚೇರಿಗೆ 500 ಮೀಟರ್ ದೂರ. ಭಾಷಣ ಮುಗಿಸಿ ಅಲ್ಲಿಗೆ ಹೋಗಿ ದೂರು ಕೊಡುವುದನ್ನು ಬಿಟ್ಟು ಹಿಟ್ ಆಂಡ್ ರನ್, ಸ್ಪಿಟ್ ಆಂಡ್ ರನ್ ಮಾಡಿದ್ದಾರೆ. ಕೇಳಿದರೆ ನಾನು ಪ್ರತಿಜ್ಞೆ ಪಡೆಯುವುದಿಲ್ಲ. ನನ್ನ ಶಬ್ದಗಳೇ ಪ್ರತಿಜ್ಞೆ ಎನ್ನುತ್ತಾರೆ ಎಂದು ಅವರು ಟೀಕಿಸಿದರು.
ದೂರುವವರು ಇವರು. ದೂರು ಕೊಡಲು ಡಿ.ಕೆ. ಶಿವಕುಮಾರ್ ಅವರನ್ನು ಕಳಿಸಿದ್ದಾರೆ. ಒಂದು ಕುಟುಂಬಕ್ಕೆ ಸೇರಿದವರು ಎಂಬ ಕಾರಣಕ್ಕೆ ರಾಹುಲ್ ಅವರ ಠೇಂಕಾರ, ಅಹಂಕಾರದ ನಡವಳಿಕೆ ಎಂದು ದೂರಿದರು.
ಈ ಸುದ್ದಿಯನ್ನೂ ಓದಿ | Karnataka Rains: ನಾಳೆ ಕರಾವಳಿ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಭಾರಿ ಮಳೆ ಸಾಧ್ಯತೆ
ಈ ಶ್ರೇಷ್ಠ ದೇಶದ ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿಯವರನ್ನು ನೋಡಬೇಕಾಗಿ ಬಂದುದು ನಮ್ಮ ದುರದೃಷ್ಟ ಎಂದ ಅವರು, ಜಾಮೀನು ಪಡೆಯುವಾಗ ಮಾತ್ರ ಇವರಿಗೆ ಕೋರ್ಟ್ ಬೇಕು. ಚುನಾವಣಾ ಆಯೋಗದ ಮುಂದೆ ಪ್ರತಿಜ್ಞೆ ಮಾಡುವುದಿಲ್ಲ ಎನ್ನುವವರು ಕೋರ್ಟಿನಲ್ಲೂ ನಾನು ವಿಪಕ್ಷ ನಾಯಕ; ನಾನು ಪ್ರತಿಜ್ಞೆ ತೆಗೆದುಕೊಳ್ಳುವುದಿಲ್ಲ ಎನ್ನುತ್ತಾರಾ ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಪ್ರಶ್ನಿಸಿದರು.