ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Salary Hike: ಗುಡ್‌ನ್ಯೂಸ್‌! ಗುತ್ತಿಗೆ ವೈದ್ಯರು, ಸ್ಟಾಫ್ ನರ್ಸ್ ವೇತನವನ್ನು ಹೆಚ್ಚಳ

ರಾಜ್ಯದ ರಾಷ್ಟ್ರೀಯ ಆರೋಗ್ಯ ಯೋಜನೆಯ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಮಾಡಿ ಇಂದು ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಸೇವೆ ಒದಗಿಸುವಲ್ಲಿ ತಜ್ಞ ವೈದ್ಯರ ಸೇವೆ ಮುಖ್ಯವಾದದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಮಹತ್ವದ ತೀರ್ಮಾನ ಎನ್ನುವಂತೆ ವೇತನ ಹೆಚ್ಚಳ ಮಾಡಲಾಗಿದೆ ಎಂದಿದೆ.

ಗುತ್ತಿಗೆ ವೈದ್ಯರು, ಸ್ಟಾಫ್ ನರ್ಸ್ ವೇತನವನ್ನು ಹೆಚ್ಚಳ

Profile Rakshita Karkera Jun 1, 2025 11:16 AM

ಬೆಂಗಳೂರು: ಗುತ್ತಿಗೆ ವೈದ್ಯರು, ಸ್ಟಾಫ್ ನರ್ಸ್‌ಗಳ ವೇತನವನ್ನು(Salary Hike) ಹೆಚ್ಚಳ ಮಾಡಿ ಕರ್ನಾಟಕ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ರಾಜ್ಯದ ರಾಷ್ಟ್ರೀಯ ಆರೋಗ್ಯ ಯೋಜನೆಯ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಮಾಡಿ ಇಂದು ಸರ್ಕಾರ ಆದೇಶ ಹೊರಡಿಸಿದೆ. ಆರೋಗ್ಯ ಸೇವೆ ಒದಗಿಸುವಲ್ಲಿ ತಜ್ಞ ವೈದ್ಯರ ಸೇವೆ ಮುಖ್ಯವಾದದ್ದು, ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಮಹತ್ವದ ತೀರ್ಮಾನ ಎನ್ನುವಂತೆ ವೇತನ ಹೆಚ್ಚಳ ಮಾಡಲಾಗಿದೆ ಎಂದಿದೆ. ಎನ್ ಹೆಚ್ ಎಂ ಅಡಿ ನೇಮಕವಾದಂತ ಗುತ್ತಿಗೆ ವೈದ್ಯರು, ಶುಶ್ರೂಷಕರ ವೇತನವನ್ನು ಕೇಂದ್ರದ ಅನುಮತಿ ಪಡೆದು ಶೇ.25ರಿಂದ 50ರಷ್ಟು ಹೆಚ್ಚಳ ಮಾಡಲಾಗಿದೆ ಎಂದು ಹೇಳಿದೆ.

government

ವೇತನ ಹೆಚ್ಚಳ ಹೀಗಿದೆ

MBBS ವೈದ್ಯರ ವೇತನವನ್ನು ರೂ.45,000ದಿಂದ ರೂ.75,000ಕ್ಕೆ ಹೆಚ್ಚಳ ಮಾಡಲಾಗಿದೆ. 1,10,000 ಇದ್ದಂತ ತಜ್ಞ ವೈದ್ಯರ ವೇತನವನ್ನು ರೂ.1,40,000 ಮಾಡಲಾಗಿದೆ. ನರ್ಸ್ ವೇತನವನ್ನು ರೂ.18,000ದಿಂದ ರೂ.22,000ಕ್ಕೆ ಹೆಚ್ಚಳ ಮಾಡಲಾಗಿದೆ. ಇನ್ನು ಈ ವೇತನ ಹೆಚ್ಚಳ ನಿಯಮವು ಹೊಸದಾಗಿ ನೇಮಕಗೊಂಡ ಸಿಬ್ಬಂದಿಗಳಿಗೆ ಮಾತ್ರ ಅನ್ವಯಿಸುತ್ತದೆ. ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಹಾಲಿ ಪಡೆಯುತ್ತಿರುವ ವೇತನ ಶ್ರೇಣಿಯಲ್ಲಿಯೇ ಮಂದುವರಿಯುತ್ತಾರೆ. ಇನ್ನು ಈ ಸೌಲಭ್ಯ ಪಡೆಯಬೇಕಿದ್ದರೆ ಈ ನೌಕರರು ರಾಜೀನಾಮೆ ಸಲ್ಲಿಸಿ, ಹೊಸ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ಈ ಸುದ್ದಿಯನ್ನೂ ಓದಿ: Sambhal Temple: 45 ವರ್ಷಗಳ ಬಳಿಕ ತೆರೆದ ಸಂಭಾಲ್‌ ದೇವಾಲಯ-ದೇವರ ವಿಗ್ರಹಗಳು ಪತ್ತೆ; ಉತ್ಖನನ ಕಾರ್ಯ ಇನ್ನಷ್ಟು ಚುರುಕು