ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

2nd PUC Exam 2 Result 2025: ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ; 60,692 ಮಂದಿ ಉತ್ತೀರ್ಣ

2nd PUC Exam 2 Result 2025: ಏ.24 ರಿಂದ ಮೇ 8ರವರೆಗೆ ಪರೀಕ್ಷೆ-2 ನಡೆದಿತ್ತು. ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸಿಇಟಿ ಫಲಿತಾಂಶಕ್ಕೂ ಮೊದಲು ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಬಿಡುಗಡೆ ಮಾಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

Profile Prabhakara R May 16, 2025 5:13 PM

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 (2nd PUC Exam 2 Result 2025) ಫಲಿತಾಂಶ ಶುಕ್ರವಾರ ಸಂಜೆ ಪ್ರಕಟವಾಗಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಾಹಿತಿ ನೀಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-2 ಏ.24ರಿಂದ ಮೇ 8ರವರೆಗೆ ಒಟ್ಟು 332 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಈ ಪರೀಕ್ಷೆಗೆ 1,94,077 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. 1,53,620 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇವರಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದು, ಶೇ.31.27 ಫಲಿತಾಂಶ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಜಾಲತಾಣಕ್ಕೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ನೇ ಪರೀಕ್ಷೆಗೆ 6,88,678 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಪರೀಕ್ಷೆ-1ರಲ್ಲಿ 4,76,256 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ಪರೀಕ್ಷೆ-2ರಲ್ಲಿ 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ ಎಂದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ನೇ ಪರೀಕ್ಷೆಯಲ್ಲಿ ಫಲಿತಾಂಶ ಪೂರ್ಣಗೊಳ್ಳದ ವಿದ್ಯಾರ್ಥಿಗಳಿಗೆ 3ನೇ ಪರೀಕ್ಷೆಯನ್ನು ಜೂನ್ 9ರಿಂದ 20ರವರೆಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ-2ಕ್ಕೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಶುಲ್ಕ ಇಲ್ಲದೇ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಿದ್ದರಿಂದ ಶೇ 92.4ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. 70 ಸಾವಿರ ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗೆ ಹಾಜರಾಗಿದ್ದರು.

ಏ.24 ರಿಂದ ಮೇ 8ರವರೆಗೆ ಪರೀಕ್ಷೆ-2 ನಡೆದಿತ್ತು. ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ನಡೆದಿದ್ದ ಸಿಇಟಿ ಪರೀಕ್ಷೆಯ ಅಭ್ಯರ್ಥಿಗಳಿಗೆ ಅನುಕೂಲ ಮಾಡಿಕೊಡಲು ಸಿಇಟಿ ಫಲಿತಾಂಶಕ್ಕೂ ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಬಿಡುಗಡೆ ಮಾಡಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ https://karresults.nic.in/

ದ್ವಿತೀಯ ಪಿಯು ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

  • ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ https://karresults.nic.in/ ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
  • ಹೋಂ ಪೇಜ್​ನಲ್ಲಿ, Second PU Results 2025 ಲಿಂಕ್ ಅನ್ನು ಕ್ಲಿಕ್ ಮಾಡಿ.
  • ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ಆಯ್ಕೆಮಾಡಿ.
  • Second PU Results 2025 ಎಂಬುದು ಸ್ಕ್ರೀನ್​ನಲ್ಲಿ ಕಾಣಿಸುತ್ತದೆ.
  • ಈಗ ನೀವು ರಿಸಲ್ಟ್ ನೋಡಬಹುದು. ಅಲ್ಲಿಯೇ ಪಿಡಿಎಫ್ ಡೌನ್​ಲೋಡ್ ಮಾಡಲು ಅವಕಾಶ ಇರುತ್ತದೆ.