ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನ
Pavagada Venkataramanappa passes away: ವೆಂಕಟರಮಣಪ್ಪ ಅವರು ಪಾವಗಡ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಎರಡು ಬಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ತುಮಕೂರು ಜಿಲ್ಲೆ ರಾಜಕೀಯದಲ್ಲಿ ತನ್ನದೇ ಆದ ಪ್ರಭಾವ ಹೊಂದಿದ್ದರು. ಅವರ ಅಗಲಿಕೆಯಿಂದ ಪಾವಗಡ ಜನರಿಗೆ ಆಘಾತವುಂಟು ಮಾಡಿದೆ.
venkataramanappa -
Abhilash BC
May 29, 2026 8:18 AM
ಬೆಂಗಳೂರು, ಮೇ 29: ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (80) ಇಂದು(ಶುಕ್ರವಾರ) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ (Fortis Hospital) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ವೆಂಕಟರಮಣಪ್ಪ ಅವರು ಪಾವಗಡ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಎರಡು ಬಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ತುಮಕೂರು ಜಿಲ್ಲೆ ರಾಜಕೀಯದಲ್ಲಿ ತನ್ನದೇ ಆದ ಪ್ರಭಾವ ಹೊಂದಿದ್ದರು. ಅವರ ಅಗಲಿಕೆಯಿಂದ ಪಾವಗಡ ಜನರಿಗೆ ಆಘಾತವುಂಟು ಮಾಡಿದೆ.