Shamanuru Shivashankarappa: ಪತ್ನಿಯ ಸಮಾಧಿ ಬಳಿಯೇ ಶಾಮನೂರು ಅಂತ್ಯಕ್ರಿಯೆ ಸಿದ್ಧತೆ, ಶಾಲೆ- ಕಾಲೇಜುಗಳಿಗೆ ರಜೆ
ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತಂದು, ಸಂಜೆ 5:30 ಸೂರ್ಯ ಮುಳುಗುವುದರ ಒಳಗಾಗಿ, ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಅವರ ಪತ್ನಿಯ ಸಮಾಧಿ ಪಕ್ಕವೇ ಶಾಮನೂರು ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ. ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ.
ಶಾಮನೂರು ಶಿವಶಂಕರಪ್ಪ -
ದಾವಣಗೆರೆ, ಡಿ. 15: ನಿನ್ನೆ ನಿಧನರಾದ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ (Shamanuru Shivashankarappa) ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಇಂದು ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ನಡೆಯಲಿದೆ. ಆನೆಕೊಂಡದ ಶಾಮನೂರ ಮನೆತನದ ಕಲ್ಲೇಶ್ವರ ರೈಸ್ ಮಿಲ್ ಜಾಗಕ್ಕೆ ಕರೆತಂದು, ಸಂಜೆ 5:30 ಸೂರ್ಯ ಮುಳುಗುವುದರ ಒಳಗಾಗಿ, ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಅವರ ಪತ್ನಿಯ ಸಮಾಧಿ ಪಕ್ಕವೇ ಶಾಮನೂರು ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದೆ.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲು ನಿರ್ಧರಿಸಲಾಗಿದೆ. ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ನಿಧನರಾಗಿದ್ದರು. ಇಂದು ಬೆಳಗ್ಗೆ 9 ಗಂಟೆಗೆ ದಾವಣಗೆರೆಯ ವೀರಶೈವ ಮಹಾಸಭಾ ಕಚೇರಿಗೆ ಪಾರ್ಥಿವ ಶರೀರವನ್ನು ತರಲಾಯಿತು. ಸಂಜೆ 4 ಗಂಟೆವರೆಗೆ ನಗರದ ಹೃದಯ ಭಾಗವಾದ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುತ್ತದೆ. ಅಲ್ಲಿಂದ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಕಲ್ಲೇಶ್ವರಕ್ಕೆ ಒಯ್ಯಲಾಗುತ್ತದೆ. ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.
ಶಾಲೆ – ಕಾಲೇಜುಗಳಿಗೆ ರಜೆ ಘೋಷಣೆ, ಪರೀಕ್ಷೆ ಮುಂದೂಡಿಕೆ
ಶಾಮನೂರು ಶಿವಶಂಕರಪ್ಪ ನಿಧನ ಹಿನ್ನಲೆಯಲ್ಲಿ ದಾವಣಗೆರೆ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಸೋಮವಾರ ರಜೆ ಘೋಷಣೆ ಮಾಡಲಾಗಿದೆ. ದಾವಣಗೆರೆ ವಿವಿಯ ಎಲ್ಲಾ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ದಾವಣಗೆರೆ ವಿಶ್ವ ವಿದ್ಯಾಲಯಕ್ಕೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನರಾದ ಹಿನ್ನಲೆಯಲ್ಲಿ ದಾವಣಗೆರೆ ವಿವಿಯ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಇಂದು ವಿವಿ, ಸ್ವಾಯತ್ತ, ಸ್ನಾತಕೋತ್ತರ ಕೇಂದ್ರಗಳಿಗೂ ರಜೆಯನ್ನು ಘೋಷಿಸಿ ವಿವಿಯ ಕುಲಪತಿ ಪ್ರೊ.ಬಿ.ಡಿ ಕುಂಬಾರ್ ಆದೇಶಿಸಿದ್ದಾರೆ.
ಶಾಮನೂರು ಶಿವಶಂಕರಪ್ಪನವರು ನಿಧನ ಹಿನ್ನೆಲೆ ಅವರ ಗೌರವಾರ್ಥವಾಗಿ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಡಿಸೆಂಬರ್ 15 ರಂದು ದಾವಣಗೆರೆ ಜಿಲ್ಲೆ ವ್ಯಾಪ್ತಿಯ ಎಲ್ಲಾ ಸರ್ಕಾರಿ ಅನುದಾನಿತ ಅನುದಾನ ರಹಿತ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ರಜೆಯನ್ನು ಮುಂದಿನ ಶನಿವಾರ ಡಿಸೆಂಬರ್ 27 ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ ಸರಿದೂಗಿಸಲು ಸೂಚಿಸಲಾಗಿದೆ.
5 ದಶಕಗಳ ರಾಜಕೀಯ ಜೀವನದಲ್ಲಿ ಒಮ್ಮೆ ಮಾತ್ರ ಸೋಲು ಕಂಡಿದ್ದ ಶಾಮನೂರು ಶಿವಶಂಕರಪ್ಪ!
100 ವಿಭೂತಿ ಗಟ್ಟಿಗಳು
ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಗೆ ಸಿದ್ದಗಂಗಾ ಮಠದಿಂದ ಸುಮಾರು 100 ವಿಶೇಷ ವಿಭೂತಿ ಗಟ್ಟಿಯನ್ನು ರವಾನಿಸಲಾಗಿದೆ. ಮಠಾಧ್ಯಕ್ಷ ಸಿದ್ದಲಿಂಗಾ ಸ್ವಾಮಿಜಿಗಳು (Siddaganga Mutt) ತಮ್ಮ ವಾಹನದಲ್ಲೇ ದಾವಣಗೆರೆಯತ್ತ (Davanagere) ವಿಶೇಷ ವಿಭೂತಿ ಗಟ್ಟಿಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶ್ರೀಗಳು, ಶಿವಶಂಕರಪ್ಪನವರು ನಮ್ಮ ಸಮಾಜದ ಮುಖಂಡರು. ಸುಧೀರ್ಘ ಸಾಮಾಜಿಕ ಶೈಕ್ಷಣಿಕ ರಾಜಕೀಯ ಸೇವೆ ಕೈಗೊಂಡವರು. ಇಡೀ ನಾಡಿಗೆ, ಜಗತ್ತಿಗೆ ಶಾಮನೂರು ಶಿವಶಂಕರಪ್ಪ ಪರಿಚಯವಾಗಿದ್ದಾರೆ. ವಾಣಿಜ್ಯ ನಗರಿ ದಾವಣಗೆರೆಯನ್ನು ಶೈಕ್ಷಣಿಕ ನಗರಿಯಾಗಿಯೂ ಮಾಡಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದಿದ್ದಾರೆ.