ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಶಿವಮೊಗ್ಗದಲ್ಲಿ ಘೋರ ಘಟನೆ; ಕಾಲು ಜಾರಿ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಸಾವು

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚೆ ಕ್ಯಾಂಪ್‌ನಲ್ಲಿ ಘಟನೆ ನಡೆದಿದೆ. ಮಾರಿ ಹಬ್ಬಕ್ಕೆಂದು ಸಂಬಂಧಿಕರ ಮನೆಗೆ ಬಂದಿದ್ದಾಗ, ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದಾಗ ಒಬ್ಬರು ನೀರಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು ಹೋದ ವೇಳೆ ನಾಲ್ವರು ನೀರುಪಾಲಾಗಿದ್ದಾರೆ.

ಶಿವಮೊಗ್ಗದಲ್ಲಿ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರ ಸಾವು

ಸಾಂದರ್ಭಿಕ ಚಿತ್ರ -

Prabhakara R
Prabhakara R Jan 18, 2026 8:36 PM

ಶಿವಮೊಗ್ಗ: ಕಾಲುಜಾರಿ ಭದ್ರಾ ನಾಲೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಬಿಳಚೆ ಕ್ಯಾಂಪ್‌ನಲ್ಲಿ ನಡೆದಿದೆ. ಮೃತರನ್ನು ನೀಲಾ ಬಾಯಿ (50), ಪುತ್ರ ರವಿ (23), ಮಗಳು ಶ್ವೇತಾ (24) ಹಾಗೂ ಅಳಿಯ ಪರಶುರಾಮ(28) ಎಂದು ಗುರುತಿಸಲಾಗಿದೆ. ಬಟ್ಟೆ ತೊಳೆಯಲು ಭದ್ರಾ ನಾಲೆಗೆ ತೆರಳಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ.

ಮಾರಿ ಹಬ್ಬಕ್ಕೆಂದು ಭದ್ರಾವತಿ ತಾಲೂಕಿನ ಅರಬಿಳಚಿ ಕ್ಯಾಂಪ್​​ ಗ್ರಾಮದಲ್ಲಿರುವ ಸಂಬಂಧಿಕರ ಮನೆಗೆ ಇವರು ಆಗಮಿಸಿದ್ದರು. ಈ ವೇಳೆ ಬಟ್ಟೆ ತೊಳೆಯಲು ನಾಲೆಗೆ ತೆರಳಿದ್ದರು. ಒಬ್ಬರು ಕಾಲು ಜಾರಿ ಭದ್ರಾ ನಾಲೆಗೆ ಬಿದ್ದಿದ್ದು, ಅವರನ್ನ ರಕ್ಷಿಸಲು ಹೋಗಿ ನಾಲ್ವರೂ ನೀರುಪಾಲಾಗಿದ್ದಾರೆ. ಮೃತರು ಶಿಕಾರಿಪುರ ತಾಲೂಕಿನ ಬೆಂಡೆಕಟ್ಟೆ ಗ್ರಾಮಸ್ಥರು. ಸದ್ಯ ಶವಗಳಿಗಾಗಿ ಹೊಳೆಹೊನ್ನೂರು ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಶೋಧಕಾರ್ಯ ನಡೆಯುತ್ತಿದೆ.

ಗಾಳಿಪಟ ಹಿಡಿಯಲು ಹೋಗಿ ಕಟ್ಟಡದ ಮೇಲಿಂದ ಬಿದ್ದು ಬಾಲಕ ಸಾವು

ಬೀದರ್: ಗಾಳಿಪಟ ಹಿಡಿಯಲು ಹೋಗಿ ಯುವಕನೊಬ್ಬ ಕಟ್ಟಡದ ಮೇಲಿನಿಂದ ಬಿದ್ದು ಮೃತಪಟ್ಟಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ಹಾರಿಸಿದದ ಗಾಳಿಪಟ ಹಿಡಿಯಲು ತೆರಳಿದ್ದ ಶಶಿಕುಮಾರ್ ಶಿವಾನಂದ (19) ಎಂಬ ಬಾಲಕ, ಕಟ್ಟಡದ ಮೇಲಿನಿಂದ ಜಾರಿ ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Hangal News: ಪದೇಪದೆ ತವರು ಮನೆಗೆ ಹೋಗುತ್ತಾಳೆ ಎಂದು ಪತ್ನಿಯನ್ನೇ ಕೊಲೆಗೈದ ಪತಿ!

ಭಟ್ಕಳದಲ್ಲಿ ಭೀಕರ ಕಾರು ಅಪಘಾತ; ಇಬ್ಬರು ಯುವಕರ ದುರ್ಮರಣ

ಕಾರವಾರ: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಭಟ್ಕಳದ (Bhatkal Accident) ವೆಂಕಟಾಪುರದ ಬಳಿ ನಡೆದಿದೆ. ಭಟ್ಕಳದ ಆಜಾದ್ ನಗರ ನಿವಾಸಿ ಮೊಹಮ್ಮದ್ ಅಶ್ರಫ್ ರುಕ್ನುದ್ದೀನ್ ಶಿಪಾಯಿಯವರ ಪುತ್ರ ಬಿಲಾಲ್ (15) ಹಾಗೂ ಆಯಾನ್ (20) ಮೃತರು.

ಅಪಘಾತದ ವೇಳೆ ಬಿಲಾಲ್ ಸ್ಥಳದಲ್ಲೇ ಮೃತಪಟ್ಟಿದ್ದು, ಚಾಲನೆ ಮಾಡುತ್ತಿದ್ದ ಆಯಾನ್ ಗಾಯಗೊಂಡಿದ್ದ. ಆತನನ್ನು ಉಡುಪಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.‌ ಶಿರಾಲಿಯಿಂದ ಭಟ್ಕಳಕ್ಕೆ ಕಾರಿನಲ್ಲಿ ಬರುತ್ತಿದ್ದಾಗ ಈ ಅಪಘಾತ ನಡೆದಿದೆ. ಈ ಸಂಬಂಧ ಭಟ್ಕಳ ಶಹರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.