BY Raghavendra: ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಕಾರು ಅಪಘಾತ; ಅಪಾಯದಿಂದ ಪಾರು
ಶಿಕಾರಿಪುರದಲ್ಲಿ ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದಾಗ ಕುಂಚೇನಹಳ್ಳಿ ಬಳಿ ಸಂಸದರ ಕಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಸಂಸದರ ಕಾರಿನ ಮುಂಭಾಗ ಮತ್ತು ಹಿಂಭಾಗಕ್ಕೆ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂಸದ ಬಿ.ವೈ.ರಾಘವೇಂದ್ರ -
ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ (B.Y. Raghavendra) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವುದು ಶಿವಮೊಗ್ಗ ತಾಲೂಕಿನ ಕುಂಚೇನಹಳ್ಳಿ ಗ್ರಾಮದ ಬಳಿ ಬುಧವಾರ ನಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಅಪಘಾತ ನಡೆದಿದ್ದು, ಸಂಸದರು ಅಪಾಯದಿಂದ ಪಾರಾಗಿದ್ದಾರೆ.
ಶಿಕಾರಿಪುರದಲ್ಲಿ ಕಾರ್ಯಕ್ರಮ ಮುಗಿಸಿ ಶಿವಮೊಗ್ಗ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದಾಗ ಈ ವೇಳೆ ಕುಂಚೇನಹಳ್ಳಿ ಬಳಿ ಸಂಸದರ ಕಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸಂಸದರ ಕಾರು ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಪೊಲೀಸ್ ಬೆಂಗಾವಲು ವಾಹನಕ್ಕೆ ಗುದ್ದಿದೆ. ಸರಣಿ ಅಪಘಾತದಿಂದ ಸಂಸದರ ಕಾರಿನ ಮುಂಭಾಗ ಮತ್ತು ಹಿಂಭಾಗಕ್ಕೆ ಹಾನಿಯಾಗಿದೆ.
ಅಪಘಾತವಾದ ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಸಂಸದರನ್ನು ಕಾರಿನಿಂದ ಕೆಳಗಿಳಿಸಿದ್ದಾರೆ. ಸಂಸದರಿಗೆ ಯಾವುದೇ ಗಾಯಗಳಾಗಿಲ್ಲ ಎಂಬುದು ಖಚಿತವಾದ ನಂತರ, ಅವರು ಅದೇ ಪೊಲೀಸ್ ಬೆಂಗಾವಲು ವಾಹನದಲ್ಲೇ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಅಲ್ಲಿಂದ ನಿಗದಿತ ವಿಮಾನದ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.
ರಾಯಚೂರಿನಲ್ಲಿ ಭೀಕರ ಸರಣಿ ಅಪಘಾತ; ಐವರು ಸ್ಥಳದಲ್ಲೇ ಸಾವು
ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಸದರ ಕಾರಿಗೆ ಡಿಕ್ಕಿ ಹೊಡೆದ ವಾಹನ ಮತ್ತು ಚಾಲಕನ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಚಂದ್ರದ್ರೋಣ ಪರ್ವತದಲ್ಲಿ ಹುಲಿ ಸಂಚಾರ; ಸ್ಥಳೀಯರಲ್ಲಿ ಆತಂಕ

ಚಿಕ್ಕಮಗಳೂರು: ಜಿಲ್ಲೆಯ ಚಂದ್ರದ್ರೋಣ ಪರ್ವತದ ಅತ್ತಿಗುಂಡಿ ಸಮೀಪ ಹುಲಿ ಓಟಾಡ ಕಂಡುಬಂದಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿರುವಂತಹ ಪ್ರದೇಶ ಇದಾಗಿದೆ.
ಪ್ರವಾಸಿ ತಾಣದಲ್ಲಿ ಹುಲಿ ಸಂಚಾರದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಮುಳ್ಳಯ್ಯನಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರಾ ಪ್ರವಾಸಿ ತಾಣಗಳಿರುವ ಚಂದ್ರದ್ರೋಣ ಪರ್ವತದ ಸಾಲು ಇದಾಗಿದೆ. ಸ್ಥಳೀಯರ ಮೊಬೈಲ್‌ನಲ್ಲಿ ಹುಲಿ ಸಂಚಾರದ ದೃಶ್ಯಗಳು ಸೆರೆಯಾಗಿವೆ. ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.