Satish Jarkiholi: ಸಾಗರಕ್ಕೆ ಬಂದು ಬೆಂಗಳೂರಿಗೆ ವಾಪಾಸ್; ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಭಾಗವಹಿಸದೇ ತೆರಳಿದ ಸತೀಶ್ ಜಾರಕಿಹೊಳಿ
ಲೋಕೋಪಯೋಗಿ ಸಚಿವ ಜಾರಕಿಹೊಳೆಯವರು ಅವರು ಸಾಗರಕ್ಕೆ ಬಂದು, ಈ ಕಾರ್ಯಕ್ರಮದಲ್ಲಿ ಭಾಗವಹಿಸದೆ ಹಾಗೇ ವಾಪಾಸ್ ಆಗಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು ವಿಜಯಪುರದಲ್ಲಿ ನಡೆಯಲಿರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ ಸೇತುವೆ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾವಹಿಸಬಾರದು ಎಂದು ಸಿಎಂ ಆದೇಶ ನೀಡಿದ್ದಾರೆ ಎನ್ನಲಾಗಿದೆ.


ಸಾಗರ: ದೇಶದ ಎರಡನೇ ಅತೀ ದೊಡ್ಡ ಕೇಬಲ್ ಸೇತುವೆಯಾದ ಸಿಗಂದೂರಿನ ಸೇತುವೆ ಇಂದು ಲೋಕಾರ್ಪಣೆಗೊಳ್ಳಲಿದೆ. ಇದೀಗ ಈ ಸಂಬಂಧ ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗುತ್ತಿದೆ. ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ತಮ್ಮನ್ನು ಸರಿಯಾಗಿ ಆಹ್ವಾನಿಸಿಲ್ಲ ಎಂದು ಈ ಹಿಂದೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಬಳಿಕ ಆಹ್ವಾನ ಬಂದಿತ್ತಾದರೂ ಅದು ತಡವಾಗಿತ್ತು. ಹೀಗಾಗಿ ಕಾರ್ಯಕ್ರಮವನ್ನು ಮುಂದೂಡುವಂತೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿದ್ದರು. ಇದೀಗ ಕಾರ್ಯಕ್ರಮದಲ್ಲಿ ಬದಲಾವಣೆ ಮಾಡಲಾಗಿಲ್ಲ. ಹೀಗಾಗಿ ಸಿಎಂ ತಮ್ಮ ಪಕ್ಷದ ಸಚಿವರು ಹಾಗೂ ಶಾಸಕರಿಗೆ ಕಾರ್ಯಕ್ರಮಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಲೋಕೋಪಯೋಗಿ ಸಚಿವ ಜಾರಕಿಹೊಳೆಯವರು ಅವರು ಸಾಗರಕ್ಕೆ ಬಂದು, ಈ ಕಾರ್ಯಕ್ರಮದಲ್ಲಿ ಭಾಗವಹಿಸದೆ ಹಾಗೇ ವಾಪಾಸ್ ಆಗಿದ್ದಾರೆ. ಈ ಕುರಿತಂತೆ ಸಾಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಂಬಾರಗೊಡ್ಲು-ಕಳಸವಳ್ಳಿ ಸೇತುವೆ ಲೋಕಾರ್ಪಣೆ ಆಗುತ್ತಿರುವುದು ಸಂತಸದ ಸಂಗತಿಯಾಗಿದೆ. ಶರಾವತಿ ಹಿನ್ನೀರಿನ ಜನರ ದಶಕಗಳ ಕನಸು ನನಸಾಗುತ್ತಿದೆ. ಆ ಭಾಗದ ಜನರಲ್ಲಿ ಸಂತಸ ಮನೆ ಮಾಡಿದೆ ಎಂದರು. ಕಾರ್ಯಕ್ರಮಕ್ಕೆ ತೆರಳುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸದೆ ಅವರು ಬೆಂಗಳೂರಿಗೆ ತೆರಳಿದ್ದಾರೆ. ಸಚಿವರ ಈ ನಿರ್ಧಾರಕ್ಕೆ , ಸ್ಥಳೀಯ ಶಾಸಕ, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಕೂಡ ಸಾಥ್ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸುದ್ದಿಯನ್ನೂ ಓದಿ: Siganduru Bridge: ದಶಕಗಳ ಕನಸು ನನಸು; ಇಂದು ಐತಿಹಾಸಿಕ ಸಿಗಂದೂರು ಸೇತುವೆ ಲೋಕಾರ್ಪಣೆ
ಸಿಎಂ ಸಿದ್ದರಾಮಯ್ಯ ಇಂದು ವಿಜಯಪುರದಲ್ಲಿ ನಡೆಯಲಿರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ ಸೇತುವೆ ಲೋಕಾಪರ್ಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ. ಸಾಗರ ತಾಲೂಕಿನ ಇಂದಿನ ಕಾರ್ಯಕ್ರಮವನ್ನು ಸರ್ಕಾರದ ಯಾವುದೇ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸುತ್ತಿಲ್ಲ. ನಮ್ಮ ನಡುವೆ ತಿಕ್ಕಾಟವನ್ನು ಪ್ರಾರಂಭಿಸಿರುವುದು ಕೇಂದ್ರ ಸರ್ಕಾರವೇ. ಇಲ್ಲಿ ಶಿಷ್ಠಾಚಾರದ ಪಾಲನೆಯಾಗಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯ ಸರ್ಕಾರದ ಪಾಲೂ ಇರುತ್ತದೆ. ಅಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಲ್ಲ ಶಿಷ್ಠಾಚಾರಗಳನ್ನೂ ತಪ್ಪದೇ ಪಾಲಿಸುತ್ತದೆ. ಇಂದಿನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿಗಾಗಲಿ, ಸಂಬಂಧಪಟ್ಟ ಇಲಾಖಾ ಸಚಿವರಿಗಾಗಲೀ ಸ್ಥಳೀಯ ಶಾಸಕರಿಗಾಲೀ ಆಮಂತ್ರಣ ನೀಡಲಾಗಿಲ್ಲ ಎಂದು ಸಿಎಂ ಹೇಳಿದ್ದಾರೆ.