ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಹಸೆಮಣೆ ಏರಲಿದ್ದ ಜೋಡಿ ರಸ್ತೆ ಅಪಘಾತದಲ್ಲಿ ದುರ್ಮರಣ

Shivamogga: ಓಮಿನಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಜೋಡಿ ಬೈಕ್‌ನಲ್ಲಿ ಪ್ರಯಾಣಿಸುತ್ತಿತ್ತು. ಸದ್ಯದಲ್ಲೇ ಇವರ ಮದುವೆ ನಿಶ್ಚಯವಾಗಿದ್ದು, ಇಬ್ಬರೂ ಹಸೆಮಣೆ ಏರುವ ಕನಸು ಕಾಣುತ್ತಿದ್ದರು. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡೂ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ.

ಹಸೆಮಣೆ ಏರಲಿದ್ದ ಜೋಡಿ ರಸ್ತೆ ಅಪಘಾತದಲ್ಲಿ ದುರ್ಮರಣ

-

ಹರೀಶ್‌ ಕೇರ ಹರೀಶ್‌ ಕೇರ Sep 11, 2025 10:29 AM

ಶಿವಮೊಗ್ಗ: ಸದ್ಯದಲ್ಲಿಯೇ ಹಸೆಮಣೆ ಏರಬೇಕಿದ್ದ ಜೋಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ (Road Accident) ಸಾವನ್ನಪ್ಪಿದ ದುರಂತ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga news) ಶಿಕಾರಿಪುರ ತಾಲೂಕಿನ ಅಂಬಾರಗೊಪ್ಪ ಕ್ರಾಸ್ ಬಳಿ ಸಂಭವಿಸಿದೆ. ಶಿಕಾರಿಪುರ ತಾಲೂಕಿನ ಮಟ್ಟಿಕೊಪ್ಪ ಗ್ರಾಮದ ರೇಖಾ (20) ಹಾಗೂ ಗಂಗೊಳ್ಳಿ ಗ್ರಾಮದ ಬಸವನಗೌಡ ದ್ಯಾಮನಗೌಡ (25) ಎಂಬ ಜೋಡಿ ಅಪಘಾತದಲ್ಲಿ ದುರ್ಮರಣ ಹೊಂದಿದ್ದಾರೆ.

ಓಮಿನಿ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ಜೋಡಿ ಬೈಕ್‌ನಲ್ಲಿ ಪ್ರಯಾಣಿಸುತ್ತಿತ್ತು. ಸದ್ಯದಲ್ಲೇ ಇವರ ಮದುವೆ ನಿಶ್ಚಯವಾಗಿದ್ದು, ಇಬ್ಬರೂ ಹಸೆಮಣೆ ಏರುವ ಕನಸು ಕಾಣುತ್ತಿದ್ದರು. ಅಪಘಾತದಲ್ಲಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದು, ಎರಡೂ ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪಿಯುಸಿ ವಿದ್ಯಾರ್ಥಿಗಳಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ (Bengaluru Crime News) ಬೆಚ್ಚಿ ಬೀಳಿಸುವಂತಹ ಘಟನೆಯೊಂದು ನಡೆದಿದೆ. ಬೆಂಗಳೂರಿನಲ್ಲಿ 10ನೇ ತರಗತಿ ವಿದ್ಯಾರ್ಥಿಯ ಮೇಲೆ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ (physcial Abuse) ಎಸಗಿದ್ದಾರೆ. ಬನ್ನೇರುಘಟ್ಟ (Bannerughatta) ಖಾಸಗಿ ಶಾಲಾ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ 10ನೇ ತರಗತಿ ವಿದ್ಯಾರ್ಥಿ ಮೇಲೆ ಲೈಂಗಿಕ ದೌರ್ಜನ್ಯ (Harassment) ಎಸಗಿರುವ ಆರೋಪ ಕೇಳಿ ಬಂದಿದೆ.

ಸಂತ್ರಸ್ತ ವಿದ್ಯಾರ್ಥಿ ಹೊಸದಾಗಿ ಶಾಲಾ ಹಾಸ್ಟೆಲ್‌ಗೆ ಸೇರಿಕೊಂಡಿದ್ದ. ರ್ಯಾಗಿಂಗ್ ಬಗ್ಗೆ ಹಾಸ್ಟೆಲ್ ವಾರ್ಡನ್ ಮತ್ತು ಪ್ರಿನ್ಸಿಪಾಲ್‌ಗೆ ಆತ ದೂರು ನೀಡಿದ್ದಾನೆ. ಅವರಿಗೆ ದೂರು ನೀಡಿದ್ದಾನೆ ಎಂದು ವಿದ್ಯಾರ್ಥಿಗಳು 10ನೇ ತರಗತಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಸೆ.3ರಿಂದ 6ರವರೆಗೆ 4 ದಿನಗಳ ಕಾಲ ಕೊಠಡಿಯಲ್ಲಿ ಕೂಡಿ ಹಾಕಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅದರ ಜೊತೆಗೆ ಹ್ಯಾಂಗರ್‌ನಿಂದ ಥಳಿಸಿ ಹಲ್ಲೆ ಸಹ ನಡೆಸಿದ್ದಾರೆ.

ಪ್ರಿನ್ಸಿಪಾಲ್ ಮತ್ತು ವಾರ್ಡನ್ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಪೋಷಕರು ಪೊಲೀಸ್ ಠಾಣೆಯ ಮೆಟ್ಟಿಲು ಏರಿದ್ದಾರೆ. ನಾಲ್ಕು ದಿನಗಳ ಕಾಲ ಹಾಸ್ಟೆಲ್ ಕೊಠಡಿಯಲ್ಲಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಸೆಪ್ಟೆಂಬರ್ 3 ರಿಂದ 6ರವರೆಗೆ ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಲೈಂಗಿಕ ದೌರ್ಜನ್ಯದ ಜೊತೆಗೆ ಕಬ್ಬಿಣದ ಹ್ಯಾಂಗರ್‌ನಿಂದಲೂ ಹಲ್ಲೆ ಮಾಡಿದ್ದಾರೆ. ಬಟ್ಟೆ ಬಿಚ್ಚಿಸಿ ನೃತ್ಯ ಮಾಡಿಸಿ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದಿದ್ದಾರೆ. ಈ ಕುರಿತು ಐವರು ವಿದ್ಯಾರ್ಥಿಗಳು, ಪ್ರಿನ್ಸಿಪಾಲ್ ಹಾಗೂ ವಾರ್ಡನ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಲೈಂಗಿಕ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿಯ ತಂದೆ ದೂರು ನೀಡಿದ್ದಾರೆ. ಘಟನೆ ಕುರಿತಂತೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Road Accident: ಹಸೆಮಣೆ ಏರಬೇಕಿದ್ದ ವರ ಮಸಣ ಸೇರಿದ; ಕಾಲೇಜಿನ ಗೋಡೆಗೆ ಕಾರು ಡಿಕ್ಕಿ ಹೊಡೆದು ಅವಘಡ