ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್; ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ರಾಜ್ಯದ ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ದಾಳಿ ನಡೆಸಿದ್ದಾರೆ. ಕಲಬುರಗಿ, ದಾವಣೆಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ ನೇತೃತ್ವದಲ್ಲಿ ಮೂರು ಅಧಿಕಾರಿಗಳ 12 ತಂಡ ಏಕಕಾಲಕ್ಕೆ 12 ಕಡೆ ದಾಳಿ ನಡೆಸಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ವಿವಿಧೆಡೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ದಾಳಿ ನಡೆಸಿದ್ದಾರೆ. ಕಲಬುರಗಿ, ದಾವಣೆಗೆರೆ, (Lokayukta raid) ಚಿತ್ರದುರ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಿದೆ. ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪುರೆ ನೇತೃತ್ವದಲ್ಲಿ ಮೂರು ಅಧಿಕಾರಿಗಳ 12 ತಂಡ ಏಕಕಾಲಕ್ಕೆ 12 ಕಡೆ ದಾಳಿ ನಡೆಸಿದೆ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ (ವಾಯವ್ಯ) ಚೀಫ್ ಮೆಕ್ಯಾನಿಕ್ ಆಗಿರುವ ಸಿದ್ದೇಶ್ವರ ಹೆಬ್ಬಾಳ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ 12 ತಂಡ ದಾಳಿ ನಡೆಸಿದೆ.
NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಸಿದ್ದೇಶ್ವರ ಹೆಬ್ಬಾಳ ಮನೆಯಲ್ಲಿ ಲಕ್ಷಾಂತರ ನಗದು, ಚಿನ್ನ, ಬೆಳ್ಳಿ ಆಭರಣಗಳು ಪತ್ತೆಯಾಗಿವೆ. ಸುಮಾರು 40 ಲಕ್ಷ ನಗದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇಂದು ಬೆಳಗ್ಗೆಯೇ ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿರುವ ಸಿದ್ದೇಶ್ವರ ಹೆಬ್ಬಾಳ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ಎಂಟ್ರಿ ಕೊಟ್ಟಿದ್ದರು. ಸಿದ್ದೇಶ್ವರ್ ಅವರಿಗೆ ಸಂಬಂಧಿಸಿದ ವಾಹನಗಳ ಪರಿಶೀಲನೆಯನ್ನು ಸಹ ಅಧಿಕಾರಿಗಳು ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ ಪಿ ಎಂ.ಎಸ್. ಕೌಲಾಪುರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
ಕಲಬುರಗಿಯಲ್ಲೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಪಂಚಾಯತ್ ರಾಜ್ ನಿವೃತ್ತ ಇಂಜನಿಯರ್ ಸೂಪರಿಡೇಂಟ್ ಮನೆ ಮೇಲೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ತಂಡ ದಾಳಿ ನಡೆಸಿದೆ. ನಗರದ ಗೋದುತಾಯಿ ಮನೆ ಸೇರಿ ಐದು ಕಡೆ, ಬೀದರ್ ಜಿಲ್ಲೆಯ ಹಳ್ಳಿಖೇಡ ಗ್ರಾಮದ ಮನೆ, ಹುಮ್ನಾಬಾದ್‌ನ 2 ಕಾಂಪ್ಲೆಕ್ಸ್, ಹಳ್ಳಿಖೇಡ ಗ್ರಾಮದ ತೋಟದ ಮನೆಯ ಮೇಲೆ ದಾಳಿಯಾಗಿದೆ.
ಅಧಿಕಾರಿಗಳು ಕಲಬುರಗಿಯ ಗೋದುತಾಯಿ ನಗರದ 2ನೇ ಕ್ರಾಸ್‌ನಲ್ಲಿರುವ ಮಾಣಿಕ್ ಕನಕಟ್ಟಿ ಅವರ ಎರಡು ನಿವಾಸಗಳು, ಬೀದರ್ ಜಿಲ್ಲೆಯ ಹಳ್ಳಿಖೇಡ (ಬಿ) ಗ್ರಾಮದಲ್ಲಿರುವ ಸ್ವಗೃಹ ಮತ್ತು ತೋಟದ ಮನೆ ಹಾಗೂ ಹುಮ್ನಾಬಾದ್‌ನಲ್ಲಿರುವ ಎರಡು ಬೃಹತ್ ವಾಣಿಜ್ಯ ಕಾಂಪ್ಲೆಕ್ಸ್‌ಗಳ ಮೇಲೆ ದಾಳಿ ನಡೆಸಿ ಪರಿಶೀಲಿಸುತ್ತಿದ್ದಾರೆ.
ದೇಶದ ಅತ್ಯಂತ ಭ್ರಷ್ಟ ರಾಜ್ಯಗಳಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ; ನ್ಯಾ. ಬಿ. ವೀರಪ್ಪ
ಚಿಕ್ಕಮಗಳೂರಿನಲ್ಲಿ ಎಸಿಎಫ್ ಮೋಹನ್ ಮನೆ ಮೇಲೆ ತಿರುಮಲೇಶ್ ನೇತೃತ್ವದ ತಂಡ ದಾಳಿ ನಡೆಸಿದೆ. ಅರಣ್ಯಾಧಿಕಾರಿ ಮನೆ ಮತ್ತು ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ. ಇದರೊಂದಿಗೆ ಕಡೂರಿನಲ್ಲಿರುವ ಶ್ರೀನಿವಾಸ್ ಸಹೋದರಿ ಮನೆ ಮೇಲೂ ದಾಳಿ ನಡೆಸಲಾಗಿದೆ.