ಕಲಬುರಗಿಯಲ್ಲಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದ ಡಾ. ಶರಣಪ್ರಕಾಶ್ ಪಾಟೀಲ್
ಕಲಬುರಗಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಬಸವ ಜಯಂತ್ಯುತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ವಿಶ್ವಗುರು ಬಸವಣ್ಣನವರ ಜಯಂತಿ ಅಂಗವಾಗಿ ಕಲಬುರಗಿ ನಗರದ ಜಗತ್ ವೃತ್ತದಲ್ಲಿನ ಶ್ರೀ ಬಸವಣ್ಣನವರ ಪ್ರತಿಮೆಗೆ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.


ಕಲಬುರಗಿ: ಇಂದಿನ ಯುವಕರು ಬಸವಾದಿ ಶರಣರನ್ನು ನೆನೆಯುತ್ತಾ, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಎಲ್ಲರೂ ಬಸವತತ್ವ ಆಚರಣೆ ಮಾಡಿ, ಸಮ ಸಮಾಜ ನಿರ್ಮಾಣ ಮಾಡೋಣ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಬಸವ ಜಯಂತ್ಯುತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ ವಿಶ್ವಗುರು, ಕರ್ನಾಟಕದ ಸಂಸ್ಕೃತಿ ನಾಯಕ ಬಸವಣ್ಣನವರ 892ನೇ ಜಯಂತಿ ಹಿನ್ನಲೆ ನಗರದ ಜಗತ್ ವೃತ್ತದಲ್ಲಿನ ಶ್ರೀ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.
ಶ್ರೀಶೈಲಂನ ಸಾರಂಗ ಮಠದ ಜಗದ್ಗುರು ಶ್ರೀ ಸಾರಂಗಧರ ದೇಶಿಕೇಂದ್ರ ಮಹಾಸ್ವಾಮಿಗಳು ಷಟಸ್ಥಲ ಧ್ವಜರೋಹಣ ನೆರವೇರಿಸಿದರು. ಈ ವೇಳೆ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ, ಶಾಸಕ ಬಿ.ಆರ್ ಪಾಟೀಲ್, ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್ ಧರ್ಮಸಿಂಗ್, 892ನೇ ಜಯಂತ್ಯುತ್ಸವ ಸಮಿತಿ ಅಧ್ಯಕ್ಷ, ಶಾಸಕ ಎಂ.ವೈ ಪಾಟೀಲ್, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ಸಹಾಯಕ ಆಯುಕ್ತೆ ಸಾಹಿತ್ಯ, ಎಡಿಸಿ ರಾಯಪ್ಪ ಹುಣಸಗಿ ಅವರು ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸುದ್ದಿಯನ್ನೂ ಓದಿ | Laxmi Hebbalkar: ಬಸವಣ್ಣನವರ ತತ್ವ, ಆದರ್ಶಗಳು ಎಲ್ಲರಿಗೂ ಮಾದರಿ- ಲಕ್ಷ್ಮೀ ಹೆಬ್ಬಾಳ್ಕರ್
ಈ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಶರಣು ಮೋದಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ. ಜಿ.ಎಸ್ ಸಿದ್ದರಾಮಯ್ಯ, ಮುಖಂಡರಾದ ಡಾ.ಕಿರಣ್ ದೇಶಮುಖ, ಅರುಣಕುಮಾರ್ ಪಾಟೀಲ್, ಶಿವಾನಂದ್ ಪಾಟೀಲ್ ಮರತೂರು, ಸೋಮಶೇಖರ್ ಹಿರೇಮಠ್, ಪ್ರವೀಣ್ ಪಾಟೀಲ್ ಹರವಾಳ, ಪ್ರಭುಲಿಂಗ್ ಮಹಾಗಾಂವಕರ್, ಶ್ರೀಶೈಲ್ ಗೂಳಿ, ರವೀಂದ್ರ ಶಾಬಾದಿ, ವಿಜಯಕುಮಾರ್ ಹಿರೇಮಠ್, ಡಿ.ಜಿ ಸಾಗರ, ಮಹಾಂತಪ್ಪ ಸಂಗಾವಿ ಸೇರಿ ಸಮಾಜದ ಅನೇಕ ಮುಖಂಡರು ಪಾಲ್ಗೊಂಡಿದ್ದರು.