ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

SSLC result: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆ ಇಂದಲ್ಲ, ಏ.23ರ ನಂತರ!

ಉತ್ತರ ಪತ್ರಿಕೆಗಳ ಮೌಲ್ಯಮಾಪನ ಇನ್ನೂ ಪ್ರಗತಿಯಲ್ಲಿದೆ. ಕೆಲವು ಕಿಡಿಗೇಡಿಗಳು ಫಲಿತಾಂಶದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಇಂತಹ ಹಾದಿತಪ್ಪಿಸುವ ಮಾಹಿತಿಯನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ನಂಬಬಾರದು ಎಂದು ಮಂಡಳಿ ಮನವಿ ಮಾಡಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಣೆ ಇಂದಲ್ಲ, ಏ.23ರ ನಂತರ!

ಎಸ್‌ಎಸ್‌ಎಲ್‌ಸಿ ಫಲಿತಾಂಶ -

ಹರೀಶ್‌ ಕೇರ
ಹರೀಶ್‌ ಕೇರ Apr 15, 2026 7:19 AM

ಬೆಂಗಳೂರು, ಏ.15: ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಕೇವಲ ವದಂತಿಗಳಾಗಿದ್ದು, ಇಂದು ಯಾವುದೇ ಫಲಿತಾಂಶ ಪ್ರಕಟವಾಗುತ್ತಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸ್ಪಷ್ಟಪಡಿಸಿದೆ.

ಕೆಲವು ಕಿಡಿಗೇಡಿಗಳು ಫಲಿತಾಂಶದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡುತ್ತಿದ್ದಾರೆ. ಇಂತಹ ಹಾದಿತಪ್ಪಿಸುವ ಮಾಹಿತಿಯನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ನಂಬಬಾರದು ಎಂದು ಮಂಡಳಿ ಮನವಿ ಮಾಡಿದೆ.

ಮೌಲ್ಯಮಾಪನ ಪ್ರಗತಿಯಲ್ಲಿದೆ. ಪ್ರಸ್ತುತ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಈಗಷ್ಟೇ ಆರಂಭವಾಗಿದ್ದು, ಪ್ರಕ್ರಿಯೆ ಚಾಲ್ತಿಯಲ್ಲಿದೆ. ಮೌಲ್ಯಮಾಪನ ಮುಗಿದ ನಂತರ, ಮುಂದಿನ ವಾರ ಫಲಿತಾಂಶ ಪ್ರಕಟಿಸುವ ಸಾಧ್ಯತೆಯಿದೆ. ಮಂಡಳಿಯ ಅಧಿಕೃತ ಮಾಹಿತಿಯ ಪ್ರಕಾರ, ಏಪ್ರಿಲ್ 23ರ ನಂತರ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.

ಅಧಿಕೃತ ವೆಬ್‌ಸೈಟ್ ಅಥವಾ ಸರ್ಕಾರದ ಪ್ರಕಟಣೆ ಹೊರತುಪಡಿಸಿ ಬೇರೆ ಯಾವುದೇ ಮೂಲಗಳಿಂದ ಬರುವ ಮಾಹಿತಿಯನ್ನು ದೃಢೀಕರಿಸಿಕೊಳ್ಳದೆ ಹಂಚಿಕೊಳ್ಳಬೇಡಿ ಎಂದು ಮಂಡಳಿ ಮನವಿ ಮಾಡಿದೆ.

SSLC valuation: ಎಸ್‌ಎಸ್‌ಎಲ್‌ಸಿ ಮೌಲ್ಯಮಾಪಕರಿಗೆ ಗುಡ್‌ ನ್ಯೂಸ್‌, ಸಂಭಾವನೆ ಹೆಚ್ಚಳ