SSLC result 2025: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ?
SSLC result 2025: ಮೇ 2ರಂದು ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ 12.30ಕ್ಕೆ ಕೆಎಸ್‌ಇಎಬಿ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ. ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.


ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ (SSLC result 2025) ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಪರೀಕ್ಷೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿರುವ ಕರ್ನಾಟಕ ರಾಜ್ಯ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಮೇ 2ರಂದು ಫಲಿತಾಂಶ ಪ್ರಕಟಿಸಲಿದೆ. ಶುಕ್ರವಾರ ಬೆಳಗ್ಗೆ 11.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಲಿದ್ದು, ಮಧ್ಯಾಹ್ನ 12.30ಕ್ಕೆ ಕೆಎಸ್‌ಇಎಬಿ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯವಾಗಲಿದೆ.
ಮಾರ್ಚ್ 21ರಿಂದ ಏಪ್ರಿಲ್ 04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸೂಸೂತ್ರವಾಗಿ ನಡೆದಿತ್ತು. ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಹೆಚ್ಚಿನ ಪ್ರಮಾಣದ ವಿದ್ಯಾರ್ಥಿಗಳು ಹಾಜರಾಗಿದ್ದರು.
ಫಲಿತಾಂಶ ಬಿಡುಗಡೆ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಎಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ಮಾ. 21ರಿಂದ ಏ. 4ರವರೆಗೆ ನಡೆಸಲಾಗಿತ್ತು.
ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಹೀಗಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ಮೇ 2ರಂದು ಬೆಳಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಫಲಿತಾಂಶ ವೀಕ್ಷಿಸುವುದು ಹೇಗೆ?
- ಫಲಿತಾಂಶಕ್ಕಾಗಿ ಸರ್ಕಾರದ ಅಧಿಕೃತ ವೆಬ್‌ಸೈಟ್ https://karresults.nic.in/ ನಲ್ಲಿ ಭೇಟಿ ನೀಡಿ.
- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ 2025 ಲಿಂಕ್ ಆಯ್ಕೆ ಮಾಡಿಕೊಳ್ಳಬೇಕು.
- ನಂತರ ನಿಮ್ಮ ಪರೀಕ್ಷಾ ನೋಂದಣಿ ಸಂಖ್ಯೆ, ಜನ್ಮ ದಿನಾಂಕ ಸೇರಿ ಅಗತ್ಯ ಮಾಹಿತಿ ದಾಖಲಿಸಬೇಕು.
- ನಂತರ ಅಂಕಟ್ಟಿ ತೆರೆದುಕೊಳ್ಳಲಿದ್ದು, ಡೌನ್‌ಲೋಡ್ ಮಾಡಿಕೊಳ್ಳಬಹುದು.
ಈ ಸುದ್ದಿಯನ್ನೂ ಓದಿ | Anti National Post: ದೇಶ ವಿರೋಧಿ ಪೋಸ್ಟ್ ಮಾಡಿದ ಮಂಗಳೂರಿನ ವೈದ್ಯೆ ಕೆಲಸದಿಂದ ವಜಾ, ಕೇಸು