ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cabinet meeting: ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು 65 ವರ್ಷಕ್ಕೆ ಏರಿಕೆ; ಸಚಿವ ಸಂಪುಟ ನಿರ್ಧಾರ

Cabinet meeting: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸೂಪ‌ರ್ ಸ್ಪೆಷಾಲಿಟಿ ವೈದ್ಯರುಗಳ ವಯೋನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ ಮಾಡಲಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಇತರ ಪ್ರಮುಖ ನಿರ್ಣಯಗಳು ಕುರಿತ ಮಾಹಿತಿ ಇಲ್ಲಿದೆ.

ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು ಏರಿಕೆ

Profile Prabhakara R May 10, 2025 3:14 PM

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ವಯೋನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಿಸಲು ರಾಜ್ಯ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ (Cabinet meeting) ನಡೆದಿದ್ದು, ಸೂಪ‌ರ್ ಸ್ಪೆಷಾಲಿಟಿ ವೈದ್ಯರ ವಯೋನಿವೃತ್ತಿ ವಯಸ್ಸು ಹೆಚ್ಚಳ, ಮೇ 15 ರಿಂದ ಜೂನ್ 14ರವರೆಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ಕಲ್ಪಿಸಲು ನಿರ್ಧಾರ ಕೈಗೊಳ್ಳಲಾಗಿದೆ.

ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

  • ಬೆಳ್ಳಂದೂರು ಕೆರೆಯ ಪುನಶ್ವೇತನ ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯವಿರುವ 79.67 ಕೋಟಿ ರೂ. ಹೆಚ್ಚುವರಿ ಅನುದಾನ ಒದಗಿಸಲು ನಿರ್ಧಾರ.
  • ಬೆಳಗಾವಿ ಜಿಲ್ಲೆಯ ಬೆನಕನಹಳ್ಳಿ, ಹಿಂಡಲಗಾ ಹಾಗೂ ಹಿರೇಬಾಗೇವಾಡಿ ಗ್ರಾಮ ಪಂಚಾಯಿತಿಗಳನ್ನು ಪಟ್ಟಣ ಪಂಚಾಯತಿಗಳಾಗಿ ಮೇಲ್ದರ್ಜೆಗೇರಿಸಿ ತೀರ್ಮಾನ.
  • ರಾಮನಗರ ಜಿಲ್ಲೆಯ ಗನಾಳು ಬಳಿ ಅರ್ಕಾವತಿ ನದಿಯಿಂದ ನೀರನ್ನು ಎತ್ತಿ ರಾಮನಗರ ಮತ್ತು ಕನಕಪುರ ತಾಲೂಕಿನ 46 ಕೆರೆಗಳನ್ನು ತುಂಬಿಸುವ 110 ಕೋಟಿ ರೂ. ಅಂದಾಜು ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
  • 2025ರ ಮೇ 15 ರಿಂದ ಜೂನ್ 14ರವರೆಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ಕಲ್ಪಿಸಲು ನಿರ್ಧಾರ.
  • ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ 450 ಹಾಸಿಗೆಗಳ ಹೊಸ ಆಸ್ಪತ್ರೆಗೆ ಅವಶ್ಯವಿರುವ ವೈದ್ಯಕೀಯ ಯಂತ್ರೋಪಕರಣಗಳು ಹಾಗೂ ಪೀಠೋಪಕರಣಗಳನ್ನು 26.98 ಕೋಟಿ ರೂ. ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.
  • ಚನ್ನಪಟ್ಟಣ ತಾಲೂಕಿನ ಸರಗೂರು ಹಾಗೂ ಹೊಸಪುರ ನಡುವೆ ಶಿಂಷಾ ನದಿಗೆ ಅಡ್ಡಲಾಗಿ 15 ಕೋಟಿ ರೂ. ವೆಚ್ಚದಲ್ಲಿ ಸೇತುವೆ ನಿರ್ಮಾಣಕ್ಕೆ ನಿರ್ಧಾರ
  • ಮಾಗಡಿ, ರಾಮನಗರ ಹಾಗೂ ಕುಣಿಗಲ್ ತಾಲೂಕಿನ 38 ಕೆರೆಗಳು ಹಾಗೂ ಕಟ್ಟೆಗಳನ್ನು ತುಂಬಿಸುವ 98 ಕೋಟಿ ರೂ. ವೆಚ್ಚದ ಕಾಮಗಾರಿಗೆ ಅನುಮೋದನೆ.
  • ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾಯಂ ಸೂಪ‌ರ್ ಸ್ಪೆಷಾಲಿಟಿ ವೈದ್ಯರುಗಳ ವಯೋನಿವೃತ್ತಿ ವಯಸ್ಸನ್ನು 60 ರಿಂದ 65 ವರ್ಷಕ್ಕೆ ಹೆಚ್ಚಿಸಲು ನಿರ್ಧಾರ.
  • ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ ನೀರಿನಿಂದ ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ತಾಲೂಕಿನ 41 ಕೆರೆಗಳನ್ನು ತುಂಬಿಸುವ ಯೋಜನೆಯನ್ನು 280 ಕೋಟಿ ರೂ. ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
  • ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ಗ್ರೇಟರ್ ಬೆಂಗಳೂರು ಪ್ರದೇಶವಾಗಿ ಘೋಷಿಸಲು ಮೇ 15ರಂದು ಅಧಿಸೂಚನೆ ಹೊರಡಿಸಲು ಹಾಗೂ ಗ್ರೇಟರ್ ಬೆಂಗಳೂರು ಆಡಳಿತ ಕಾಯಿದೆಯನ್ನು ಜಾರಿಗೊಳಿಸಲು ನಿರ್ಧಾರ.

ಈ ಸುದ್ದಿಯನ್ನೂ ಓದಿ | Greater Bengaluru: ಮೇ 15ರಿಂದ ʼಗ್ರೇಟರ್‌ ಬೆಂಗಳೂರುʼ ಜಾರಿ; ಅಸ್ತಿತ್ವ ಕಳೆದುಕೊಳ್ಳಲಿದೆ ಬಿಬಿಎಂಪಿ!