Hippopotamus: ಪಶುವೈದ್ಯೆ ಸಾವಿಗೆ ಕಾರಣವಾದ ತಾವರೆಕೊಪ್ಪದ ನೀರಾನೆ ಮರಿ ಗರ್ಭದಲ್ಲೇ ಸಾವು!
ಹಂಸಿನಿ ಹೆಸರಿನ ನೀರಾನೆ ಈ ಹಿಂದೆ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿತ್ತು. ಆದರೆ ದುರಾದೃಷ್ಟವಶಾತ್ ಎರಡೂ ಬಾರಿ ಮರಿಗಳು ಸಾವನ್ನಪ್ಪಿದ್ದವು. ಈ ಬಾರಿಯಾದರೂ ಮರಿ ಉಳಿಯಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಫಾರಿ ಸಿಬ್ಬಂದಿಗೆ ಈಗ ನಿರಾಸೆಯಾಗಿದೆ.
ನೀರಾನೆ ಹಂಸಿನಿ, ಸಮೀಕ್ಷಾ ರೆಡ್ಡಿ -
ಶಿವಮೊಗ್ಗ, ಏ.12: ಕಳೆದ ಮಾರ್ಚ್ 19ರಂದು ಶಿವಮೊಗ್ಗದ (Shivamogga) ತಾವರೆಕೊಪ್ಪ ಹುಲಿ ಸಿಂಹ ಸಫಾರಿಯಲ್ಲಿ (tyavarekoppa lion safari) ತರಬೇತಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಮೇಲೆ ಗರ್ಭಿಣಿ ನೀರಾನೆ (Hippopotamus) ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಸಮೀಕ್ಷಾ ರೆಡ್ಡಿ ಮೃತಪಟ್ಟಿದ್ದರು. ಇದೀಗ ಆ ನೀರಾನೆ, ಮರಿಗೆ ಜನ್ಮ ನೀಡಿದ್ದು ಆ ಮರಿ ಸಾವನ್ನಪ್ಪಿದೆ.
ಹಂಸಿನಿ ಹೆಸರಿನ ನೀರಾನೆ ಈ ಹಿಂದೆ ಎರಡು ಬಾರಿ ಮರಿಗಳಿಗೆ ಜನ್ಮ ನೀಡಿತ್ತು. ಆದರೆ ದುರಾದೃಷ್ಟವಶಾತ್ ಎರಡೂ ಬಾರಿ ಮರಿಗಳು ಸಾವನ್ನಪ್ಪಿದ್ದವು. ಈ ಬಾರಿಯಾದರೂ ಮರಿ ಉಳಿಯಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಫಾರಿ ಸಿಬ್ಬಂದಿಗೆ ಈಗ ನಿರಾಸೆಯಾಗಿದೆ. ಹಂಸಿನಿಯ ಮರಿಯು ಸಾವನ್ನಪ್ಪಿರುವುದಕ್ಕೆ ಸಫಾರಿ ಸಿಬ್ಬಂದಿ ಹಾಗೂ ಪ್ರಾಣಿ ಪ್ರೇಮಿಗಳಲ್ಲಿ ತೀವ್ರ ನಿರಾಶೆ ಮೂಡಿಸಿದೆ.
ವನ್ಯಜೀವಿ ತಜ್ಞರ ಪ್ರಕಾರ, ಮಾರ್ಚ್‌ನಲ್ಲಿ ನಡೆದ ಆ ಅನಿರೀಕ್ಷಿತ ಘಟನೆಯ ಸಮಯದಲ್ಲಿ ಹಂಸಿನಿ ತೀವ್ರ ದೈಹಿಕ ಅನಾರೋಗ್ಯ ಮತ್ತು ಮಾನಸಿಕ ಒತ್ತಡಕ್ಕೆ (Stress) ಒಳಗಾಗಿತ್ತು. ಸಾಮಾನ್ಯವಾಗಿ ಗರ್ಭಿಣಿ ಪ್ರಾಣಿಗಳು ಅತಿಯಾದ ಸೂಕ್ಷ್ಮತೆಯನ್ನು ಹೊಂದಿರುತ್ತವೆ. ವೈದ್ಯೆಯ ಮೇಲೆ ದಾಳಿ ಮಾಡಿದ ಆಘಾತ ಮತ್ತು ನಂತರದ ಚಿಕಿತ್ಸಾ ಪ್ರಕ್ರಿಯೆಗಳು ಹಂಸಿನಿಯ ದೈಹಿಕ ಆರೋಗ್ಯದ ಮೇಲೆ ಭಾರಿ ಪರಿಣಾಮ ಬೀರಿದ್ದವು. ಈ ಮಾನಸಿಕ ಆಘಾತ ಮತ್ತು ಹಾರ್ಮೋನುಗಳ ಏರುಪೇರಿನಿಂದಾಗಿ ಮರಿಯು ಗರ್ಭದಲ್ಲೇ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಸ್ತುತ ಹಂಸಿನಿಯ ಆರೋಗ್ಯದ ಮೇಲೆ ಅರಣ್ಯ ಇಲಾಖೆ ಮತ್ತು ಪಶುವೈದ್ಯರು ತೀವ್ರ ನಿಗಾ ಇರಿಸಿದ್ದಾರೆ.
Hippopotamus Attack: ತಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಬಲಿ
ದಾಳಿ ಯಾವಾಗ ನಡೆದಿತ್ತು?
ಮಾ.19ರಂದು ರಾತ್ರಿ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಮೇಲೆ ನೀರಾನೆ ದಾಳಿ ಮಾಡಿತ್ತು. ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಮೃಗಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ತರಬೇತಿ ಪಡೆಯುತ್ತಿದ್ದರು.
ಆ ದಿನ ರಾತ್ರಿ ಸುಮಾರು 10.30 ರ ಸುಮಾರಿಗೆ ಅವರು ಮೃಗಾಲಯದ ಆಸ್ಪತ್ರೆಗೆ ಹೋಗಿ ಹಕ್ಕಿಯೊಂದಕ್ಕೆ ಚಿಕಿತ್ಸೆ ನೀಡಿದರು. ನಂತರ ಅವರು ಗರ್ಭಿಣಿ ಹಿಪಾಪಟಮಸ್‌ನ ಆವರಣಕ್ಕೆ ಪ್ರವೇಶಿಸಿ ಥರ್ಮಲ್ ಕ್ಯಾಮೆರಾ ಬಳಸಿ ಅದರ ದೇಹದ ಉಷ್ಣತೆಯನ್ನು ಪರಿಶೀಲಿಸಿದ್ದರು. ಈ ಸಮಯದಲ್ಲಿ, ನೀರಾನೆ ಅವರ ಮೇಲೆ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಮೀಕ್ಷಾ ಮೃತಪಟ್ಟಿದ್ದರು.
ಕಸ್ತೂರಿ ರಂಗನ್ ವರದಿ ಒಪ್ಪಲು ಸಾಧ್ಯವಿಲ್ಲ; ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದ ಈಶ್ವರ ಖಂಡ್ರೆ
ಸುರಕ್ಷತೆ ಕಾರ್ಯವಿಧಾನ
ನೀರಾನೆ ದಾಳಿಯಿಂದ ಪಶುವೈದ್ಯೆ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ಪಶುವೈದ್ಯರ ಸುರಕ್ಷಿತ ಕಾರ್ಯನಿರ್ವಹಣೆಗೆ ಮಾನದಂಡ ಕಾರ್ಯವಿಧಾನ (SOP)ಗಳನ್ನು ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿತ್ತು. ಸಮೀಕ್ಷಾ ರೆಡ್ಡಿ ಅವರ ಕುಟುಂಬವು ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದ್ದು, ಕೆಲವರು ಆನೆಗೆ ಅವರ ಹೆಸರಿಡಬೇಕೆಂದು ಸೂಚಿಸಿದ್ದಾರೆ. ಈ ವಿಷಯವನ್ನು ಅಧಿಕಾರಿಗಳು ಮತ್ತು ಸರ್ಕಾರದೊಂದಿಗೆ ಚರ್ಚಿಸಿ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಅರಣ್ಯ ಸಚಿವರು ಹೇಳಿದ್ದರು.