ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mahesh Shetty Timarodi: ಸದ್ಯಕ್ಕಿಲ್ಲ ಗಡಿಪಾರು; ಮಹೇಶ್‌ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌

ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ತಮ್ಮನ್ನು ಗಡೀಪಾರು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಮಹೇಶ್‌ ಶೆಟ್ಟಿ ತಿಮರೋಡಿಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಿದೆ.

ಸದ್ಯಕ್ಕಿಲ್ಲ ಗಡಿಪಾರು; ಮಹೇಶ್‌ ಶೆಟ್ಟಿ ತಿಮರೋಡಿಗೆ ತಾತ್ಕಾಲಿಕ ರಿಲೀಫ್‌

-

Vishakha Bhat Vishakha Bhat Sep 30, 2025 1:33 PM

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ತಮ್ಮನ್ನು ಗಡೀಪಾರು ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ (Mahesh Shetty Timarodi) ಮೆಟ್ಟಿಲೇರಿದ್ದ ಮಹೇಶ್‌ ಶೆಟ್ಟಿ ತಿಮರೋಡಿಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಿದೆ. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬಲವಂತದ ಕ್ರಮ ಬೇಡ ಎಂದು ಆದೇಶ ಹೊರಡಿಸಿದೆ. ಅಕ್ಟೋಬರ್ 8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸಿದಂತೆ ಹೈಕೋರ್ಟ್ ಸೂಚನೆ ನೀಡಿದೆ. ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದ ಆರೋಪದ ಮೇಲೆ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಗಡೀಪಾರು ಆದೇಶ ಪ್ರಶ್ನಿಸಿ ತಿಮರೋಡಿ ಸೋಮವಾರ ಅರ್ಜಿ ಸಲ್ಲಿಸಿದ್ದರು.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗಿಸ್ ಹೊರಡಿಸಿರುವ ಆದೇಶ ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರ ರಜಾಕಾಲದ ನ್ಯಾಯಪೀಠದ ಮಂಗಳವಾರ ವಿಚಾರಣೆ ನಡೆಸಿತು. ಅರ್ಜಿ ಆಲಿಸಿದ ನ್ಯಾಯಪೀಠ, ತಿಮರೋಡಿ ಅವರ ಗಡಿಪಾರು ಆದೇಶ ಜಾರಿಗೆ ಅಕ್ಟೋಬರ್ 8ರ ವರೆಗೆ ಮಧ್ಯಂತರ ತಡೆ ನೀಡಿತಲ್ಲದೆ, ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗೆ ನೋಟಿಸ್ ಜಾರಿಗೊಳಿಸಿ, ಅರ್ಜಿ ವಿಚಾರಣೆ ಮುಂದೂಡಿದೆ.

ಸುಮಾರು 32 ಪ್ರಕರಣದ ಕೇಸ್‌ಗಳನ್ನು ಹೊಂದಿರುವ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡೀಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದರು. ಆದೇಶದ ಪ್ರಕಾರ, ಪೊಲೀಸರು ಅಥವಾ ನ್ಯಾಯಾಲಯದ ಸೂಚನೆಗಳು ಅಗತ್ಯವಿದ್ದಾಗ ಮಾತ್ರ ತಿಮರೋಡಿ ಈ ಜಿಲ್ಲೆಯನ್ನು ಪ್ರವೇಶಿಸಬಹುದು ಎಂದು ತಿಳಿಸಲಾಗಿತ್ತು. ಧರ್ಮಸ್ಥಳ ಪ್ರಕರಣದ ತನಿಖೆಯಲ್ಲಿ ವಿವಿಧ ಅಡೆತಡೆಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದರು.

ಈ ಸುದ್ದಿಯನ್ನೂ ಓದಿ: Mahesh Shetty Thimarodi: ಮಹೇಶ್‌ ಶೆಟ್ಟಿ ತಿಮರೋಡಿ ನಾಪತ್ತೆ, ʼನಮ್ಮೂರಿಗೆ ಬೇಡʼ ಎಂದು ರಾಯಚೂರಿನಲ್ಲಿ ಪ್ರತಿಭಟನೆ

ಆದರೆ, ಈ ಆದೇಶ ಕಾನೂನು ಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ತಮ್ಮ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಹಾಗಾಗಿ, ಗಡಿಪಾರು ಆದೇಶ ರದ್ದುಗೊಳಿಸಬೇಕು ಎಂದು ತಿಮರೋಡಿ ನ್ಯಾಯಾಲಯವನ್ನು ಕೋರಿದ್ದರು. ಇದೀಗ ನ್ಯಾಯಾಲಯ ಮಧ್ಯಂತರ ತಡೆಯನ್ನು ನೀಡಿದೆ.