ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru stampede: ಕಾಲ್ತುಳಿತ ದುರಂತ; 11 ಮೃತರ ಕುಟುಂಬಕ್ಕೆ ಪರಿಹಾರ ತಲಾ 25 ಲಕ್ಷಕ್ಕೆ ಹೆಚ್ಚಿಸಲು ಸಿಎಂ ಆದೇಶ

Bengaluru stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಈ ಮೊದಲು ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿತ್ತು. ಇದೀಗ ಪರಿಹಾರ ಮೊತ್ತ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

11 ಮೃತರ ಕುಟುಂಬಕ್ಕೆ ಪರಿಹಾರ ತಲಾ 25 ಲಕ್ಷಕ್ಕೆ ಹೆಚ್ಚಿಸಲು ಸಿಎಂ ಆದೇಶ

Profile Prabhakara R Jun 7, 2025 9:29 PM

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ದುರಂತದಲ್ಲಿ ಮೃತಪಟ್ಟಿದ್ದ 11 ಮಂದಿಯ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರವನ್ನು ತಲಾ 25 ಲಕ್ಷ ರೂ.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶಿಸಿದ್ದಾರೆ. ಈ ಮೊದಲು ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ಸರ್ಕಾರ ಘೋಷಿಸಿತ್ತು. ಇದೀಗ ಪರಿಹಾರ ಮೊತ್ತ ಹೆಚ್ಚಿಸಲು ಸಿಎಂ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ನಡೆದ ದುರಂತದಲ್ಲಿ 11 ಜನರು ಸಾವಿಗೀಡಾಗಿದ್ದರು. ಅವರ ಕುಟುಂಬಗಳಿಗೆ ಈ ಮೊದಲು ತಲಾ 10 ಲಕ್ಷ ರೂ. ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದರು. ಅಲ್ಲದೆ ಗಾಯಗೊಂಡವರ ಚಿಕಿತ್ಸೆ ವೆಚ್ಚವನ್ನೂ ಸರಕಾರ ಭರಿಸಲಿದೆ ಎಂದು ಹೇಳಿದ್ದರು. ಅದೇ ರೀತಿ ಮೃತರಿಗೆ ಆರ್‌ಸಿಬಿ 10 ಲಕ್ಷ ಹಾಗೂ ಕೆಎಸ್‌ಸಿಎ 5 ಲಕ್ಷ ಪರಿಹಾರವನ್ನು ಘೋಷಿಸಿತ್ತು.

ಈ ಸುದ್ದಿಯನ್ನೂ ಓದಿ | Bengaluru Stampede: ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್‌ಸಿಬಿ!

ಬೆಂಗಳೂರು ಕಾಲ್ತುಳಿತ; ನೈತಿಕ ಹೊಣೆ ಹೊತ್ತು ಕೆಎಸ್‌ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು: ಆರ್​ಸಿಬಿ (RCB) ತಂಡ ಐಪಿಎಲ್ ಟ್ರೋಫಿ ((IPL trophy) ಗೆದ್ದ ನಂತರ ನಡೆದ ಸಂಭ್ರಮೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ (Chinnaswamy Stampede, Bengaluru stampede) 11 ಮಂದಿ ಸಾವಿಗೀಡಾದ ದುರಂತ ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸಿದ್ದು, ಹಲವು ತಲೆದಂಡಗಳಾಗಿವೆ. ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಹಲವರನ್ನು ಸರಕಾರ ಅಮಾನತು ಮಾಡಿದೆ. ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಕಾರ್ಯದರ್ಶಿ ಶಂಕರ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ (Resignation) ನೀಡಿದ್ದಾರೆ. ಕೆಎಸ್​​ಸಿಎ ಖಜಾಂಚಿ ಜೈರಾಮ್ ಸಹ ರಾಜೀನಾಮೆ ನೀಡಿದ್ದಾರೆ.

ಕೆಎಸ್​​ಸಿಎ ಅಧ್ಯಕ್ಷರಿಗೆ ಇಬ್ಬರೂ ಶುಕ್ರವಾರ ರಾತ್ರಿ ರಾಜೀನಾಮೆ ನೀಡಿರುವುದು ತಿಳಿದು ಬಂದಿದೆ. ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಶಂಕರ್, ಜೈರಾಮ್ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಹೈಕೋರ್ಟ್ ರಿಲೀಫ್ ಕೊಟ್ಟ ನಂತರ ಬ್ರಿಜೇಶ್ ಪಾಟೀಲ್ ಸಭೆ ನಡೆಸಿ ರಾಜೀನಾಮೆಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ತೆರವುಗೊಂಡ ಸ್ಥಾನಕ್ಕೆ ತಾತ್ಕಲಿಕವಾಗಿ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್ ಅವರನ್ನು ನೇಮಕ ಮಾಡಲಾಗಿದೆ.

ಘಟನೆ ಸಂಬಂಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಡಳಿತ ಮಂಡಳಿಯ ನಾಲ್ವರು ಅಧಿಕಾರಿಗಳನ್ನು ಶುಕ್ರವಾರ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸಂಸ್ಥೆಯು ಹೈಕೋರ್ಟಿಗೆ ರಿಟ್ ಅರ್ಜಿಯನ್ನು ಸಲ್ಲಿಸಿತ್ತು. ಸರ್ಕಾರದ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡಿತ್ತು.

ಇದನ್ನೂ ಓದಿ: Bengaluru stampede case: ಕೆಎಸ್‌ಸಿಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ; ಹೈಕೋರ್ಟ್‌ ಮಧ್ಯಂತರ ಆದೇಶ

ಏತನ್ಮಧ್ಯೆ, ಕಾಲ್ತುಳಿತ ಘಟನೆ ಸಂಬಂಧ ಚರ್ಚಿಸಲು ಬೆಂಗಳೂರು ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಶನಿವಾರ ಬೆಳಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರನ್ನು ಭೇಟಿಯಾದರು. ಬೆಂಗಳೂರಿನ ಸದಾಶಿವನಗರದ ಪರಮೇಶ್ವರ್ ನಿವಾಸದಲ್ಲಿ ಅವರನ್ನು ಭೇಟಿಯಾದ ಸಿಂಗ್, ಈಗಾಗಲೇ ಬಂಧನವಾಗಿರುವ ಆರೋಪಿಗಳ ವಿಚಾರಣೆ, ಮುಂದಿನ ತನಿಖೆ ಸೇರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.