ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actor Darshan: ಬಳ್ಳಾರಿ ಜೈಲಿಗೆ ನಟ ದರ್ಶನ್‌ ಸ್ಥಳಾಂತರಕ್ಕೆ ಕೋರ್ಟ್‌ ನಕಾರ; ಹಾಸಿಗೆ, ದಿಂಬು ನೀಡಲು ಅನುಮತಿ

Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿದೆ. ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಎಂದು ಹೇಳಿ, ನಟನ ಸ್ಥಳಾಂತರಕ್ಕೆ ಕೋರ್ಟ್ ನಿರಾಕರಿಸಿದೆ. ಹೀಗಾಗಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.

ಬಳ್ಳಾರಿ ಜೈಲಿಗೆ ನಟ ದರ್ಶನ್‌ ಸ್ಥಳಾಂತರಕ್ಕೆ ಕೋರ್ಟ್‌ ನಕಾರ

-

Prabhakara R Prabhakara R Sep 9, 2025 5:15 PM

ಬೆಂಗಳೂರು: ನಟ ದರ್ಶನ್ ಅವರನ್ನು (Actor Darshan) ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್‌ ಕೋರ್ಟ್‌ನಲ್ಲಿ ಮಂಗಳವಾರ ನಡೆದಿದ್ದು, ನಟನ ಸ್ಥಳಾಂತರಕ್ಕೆ ನ್ಯಾಯಾಲಯ ನಿರಾಕರಿಸಿದೆ. ಹೀಗಾಗಿ ದರ್ಶನ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಬೇಕಾಗುತ್ತದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಕೋರಿ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ನಡೆದಿದೆ.

ವಿಚಾರಣೆ ನಡೆಸಿದಂತ ಕೋರ್ಟ್, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ಸಕಾರಣಗಳಿಲ್ಲ ಎಂದು ಹೇಳಿ, ನಟನ ಸ್ಥಳಾಂತರಕ್ಕೆ ನಿರಾಕರಿಸಿದೆ. ಹೀಗಾಗಿ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.

ಇನ್ನು ನಟನಿಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಲು ಕೋರ್ಟ್‌ ಅನುಮತಿ ನೀಡಿದೆ. ಕೈದಿಯ ಹಕ್ಕುಗಳನ್ನು ಗೌರವಿಸಲು ಸೂಚಿಸಿರುವ ಕೋರ್ಟ್‌, ಜೈಲಿನಲ್ಲಿ ಓಡಾಡಲು ಕೂಡ ಅನುಮತಿ ನೀಡಿದೆ. ಜೈಲು ಕೈಪಿಡಿಯಂತೆ ವಾಕ್‌ ಮಾಡಲು ದಾಸನಿಗೆ ಪರ್ಮಿಷನ್‌ ಸಿಕ್ಕಿದೆ. ಹಾಗೆಯೇ ಜೈಲಿನಲ್ಲಿ ಸ್ವಂತ ಹಣದಲ್ಲಿ ತಿಂಡಿ ಖರೀದಿಸಲು ಕೂಡ ಅನುಮತಿ ನೀಡಲಾಗಿದೆ.