Bengaluru City University: ಬೆಂಗಳೂರು ನಗರ ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೆಸರು; ಕ್ಯಾಬಿನೆಟ್ ಸಭೆಯಲ್ಲಿ ಅನುಮೋದನೆ
Bengaluru City University: ದೇಶದ ಪ್ರಧಾನಿಗಳಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರನ್ನು ಸ್ಮರಿಸಿ, ಗೌರವಿಸುವ ಕೆಲಸವನ್ನು ಮಾಡುವುದು ಒಂದು ಸರ್ಕಾರವಾಗಿ ಮಾತ್ರವಲ್ಲ, ಕನ್ನಡಿಗನಾಗಿಯೂ ನನ್ನ ಕರ್ತವ್ಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.


ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ, ಬಾಗೇಪಲ್ಲಿ ಪಟ್ಟಣಕ್ಕೆ ಭಾಗ್ಯನಗರ ಎಂದು ಹೆಸರಿಡುವ ನಿರ್ಣಯ ಮಾಡಲಾಗಿದೆ. ಇದರ ಜತೆಗೆ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ (Bengaluru City University) ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ದೇಶದ ಪ್ರಧಾನಿಗಳಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರನ್ನು ಸ್ಮರಿಸಿ, ಗೌರವಿಸುವ ಕೆಲಸವನ್ನು ಮಾಡುವುದು ಒಂದು ಸರ್ಕಾರವಾಗಿ ಮಾತ್ರವಲ್ಲ, ಕನ್ನಡಿಗನಾಗಿಯೂ ನನ್ನ ಕರ್ತವ್ಯ. ಈ ನಿಟ್ಟಿನಲ್ಲಿ ಇಂದು ನಂದಿ ಗಿರಿಧಾಮದಲ್ಲಿ ಆಯೋಜಿಸಿದ್ದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ದೇಶದ ಪ್ರಧಾನಿಗಳಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಮತ್ತು ಕೊಡುಗೆಗಳನ್ನು ನೀಡಿದ್ದ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರನ್ನು ಸ್ಮರಿಸಿ, ಗೌರವಿಸುವ ಕೆಲಸವನ್ನು ಮಾಡುವುದು ಒಂದು ಸರ್ಕಾರವಾಗಿ ಮಾತ್ರವಲ್ಲ, ಕನ್ನಡಿಗನಾಗಿಯೂ ನನ್ನ ಕರ್ತವ್ಯ.
— Siddaramaiah (@siddaramaiah) July 2, 2025
ಈ ನಿಟ್ಟಿನಲ್ಲಿ ಇಂದು ನಂದಿಗಿರಿ ಧಾಮದಲ್ಲಿ ಆಯೋಜಿಸಿದ್ದ ವಿಶೇಷ ಸಚಿವ… pic.twitter.com/ytSuxdG3Ts
ಬೆಂಗಳೂರು ಗ್ರಾಮಾಂತರ ಇನ್ನುಮುಂದೆ ʼಬೆಂ. ಉತ್ತರ ಜಿಲ್ಲೆʼ, ಭಾಗ್ಯನಗರ ಆಗಲಿದೆ ಬಾಗೇಪಲ್ಲಿ; ಸಚಿವ ಸಂಪುಟ ತೀರ್ಮಾನ
ಬೆಂಗಳೂರು: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಿದ ಬೆನ್ನಲ್ಲೇ ಇದೀಗ ಮತ್ತೊಂದು ಜಿಲ್ಲೆ ಹಾಗೂ ತಾಲೂಕಿನ ಹೆಸರು ಬದಲಾವಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಇನ್ನುಮುಂದೆ ʼಬೆಂಗಳೂರು ಉತ್ತರ ಜಿಲ್ಲೆʼ (Bangalore North District) ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣವು ಭಾಗ್ಯನಗರ (Bhagyanagar) ಆಗಲಿದೆ. ಮರುನಾಮಕರಣಕ್ಕೆ ಸಂಬಂಧಿಸಿ ನಂದಿ ಬೆಟ್ಟದಲ್ಲಿ ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet Meeting) ತೀರ್ಮಾನ ಮಾಡಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಭಾಗವನ್ನು ರಿಯಲ್ ಎಸ್ಟೇಟ್ ಪರಿಭಾಷೆಯಲ್ಲಿ ಬೆಂಗಳೂರು ಉತ್ತರ ಎಂದೇ ಕರೆಯಲಾಗುತ್ತದೆ. 'ಬ್ರ್ಯಾಂಡ್ ಬೆಂಗಳೂರು' ಮೌಲ್ಯ ಮತ್ತು ಲಾಭವನ್ನು ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಿಗೂ ವಿಸ್ತರಿಸಲು ಈ ನಿರ್ಣಯ ಕೈಗೊಳ್ಳುತ್ತಿರುವುದಾಗಿ ಸರ್ಕಾರ ಈಗಾಗಲೇ ಸಮರ್ಥಿಸಿಕೊಂಡಿತ್ತು.
1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಚಿಸಲಾಯಿತು. ಆ ಸಮಯದಲ್ಲಿ ರಾಮನಗರ ಜಿಲ್ಲೆಯ ತಾಲೂಕುಗಳೂ ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟಿದ್ದವು. ನಂತರ 2007ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ವಿಭಜಿಸಿ ರಾಮನಗರ ಜಿಲ್ಲೆ ರಚಿಸಲಾಯಿತು. ಇತ್ತೀಚೆಗೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲಾಗಿದೆ. ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರು ಬದಲಿಸಲು ಅನುಮೋದನೆ ನೀಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಹೆಸರನ್ನು 'ಭಾಗ್ಯನಗರ' ಎಂದು ಬದಲಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದರು. ಇದಕ್ಕೂ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ.
ಈ ಸುದ್ದಿಯನ್ನೂ ಓದಿ | High-tech flower market: ಚಿಕ್ಕಬಳ್ಳಾಪುರದಲ್ಲಿ 151.5 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಹರಾಜು ಕೇಂದ್ರ, ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಸಚಿವ ಸಂಪುಟ ಅಸ್ತು